ಸೋಂಕಿತರ ಸಂಪರ್ಕಿತರು ಸರಕಾರಿ ಕ್ವಾರಂಟೈನ್‌ ಕೇಂದ್ರಕ್ಕೆ

Team Udayavani, Mar 30, 2020, 6:08 AM IST

ಸೋಂಕಿತರ ಸಂಪರ್ಕಿತರು ಸರಕಾರಿ ಕ್ವಾರಂಟೈನ್‌ ಕೇಂದ್ರಕ್ಕೆ

ಬೆಂಗಳೂರು: ಕೋವಿಡ್-19 ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲ ವ್ಯಕ್ತಿಗಳನ್ನು ಸರಕಾರಿ ಕ್ವಾರಂಟೈನ್‌ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕೋವಿಡ್-19 ಸೋಂಕಿತರ ಪ್ರಾಥಮಿಕ ಸಂಪರ್ಕ ವ್ಯಕ್ತಿ ಗಳಲ್ಲಿಯೇ ಹೆಚ್ಚು ಸೋಂಕು ದೃಢ ವಾಗುತ್ತಿರುವ ಹಿನ್ನೆಲೆಯಲ್ಲಿ ಆ ವ್ಯಕ್ತಿಗಳ ಮೇಲೆ ನಿಗಾ ಇಡುವುದು ಅತ್ಯವಶ್ಯಕವಾಗಿದೆ. ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳಲ್ಲಿ ಶೇ.25 ರಷ್ಟು ಸೋಂಕಿತರು ಪ್ರಾಥಮಿಕ ಸಂಪರ್ಕದವರೆಂದು ಪರಿಗಣಿಸಲಾಗಿದೆ. ಇದುವರೆಗೆ ಈ ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಅವರ ಮನೆಗಳಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು. ಸದ್ಯ ಆ ವ್ಯಕ್ತಿಗಳು ಹೋಮ್‌ ಕ್ವಾರಂಟೈನ್‌ನ ಶಿಸ್ತು ಉಲ್ಲಂ ಸುತ್ತಿರುವ ದೂರುಗಳು ಹೆಚ್ಚಾಗಿದ್ದು, ಈ ಹಿನ್ನೆಲೆ ಸರಕಾರಿ ಕ್ವಾರಂಟೈನ್‌ ಕೇಂದ್ರಗಳಲ್ಲಿಯೇ ನಿಗಾವಹಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

2 ವರ್ಗಗಳಾಗಿ ವಿಂಗಡಣೆ
ಸೋಂಕು ದೃಢವಾದ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕಗಳನ್ನು ಎರಡು ವರ್ಗಗಳಾಗಿ ವಿಂಗಡಣೆ ಮಾಡ ಲಾಗಿದೆ. ಮೊದಲನೇ ವರ್ಗದಲ್ಲಿ (ಎ) 60 ವರ್ಷ ಮೀರಿದ ವ್ಯಕ್ತಿಗಳು ಮಧುಮೇಹ, ಅಧಿಕ ರಕ್ತದೊತ್ತಡ, ಎಚ್‌ಐವಿ ಪಾಸಿಟಿವ್‌, ಅಂಗಾಂಗ ಕಸಿ, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನು ಅತ್ಯಂತ ಅಪಾಯಕಾರಿ ಸಂಪರ್ಕಗಳು ಎಂದು ಪರಿಗಣಿಸಲಾಗಿದೆ. ಇನ್ನು ಎರಡನೇ ವರ್ಗದಲ್ಲಿ ಆರೋಗ್ಯವಂತರಿದ್ದು ಇವರನ್ನು ಕಡಿಮೆ ಅಪಾಯದ ಸಂಪರ್ಕಗಳೆಂದು ವಿಂಗಡಿಸಲಾಗಿದೆ. ಪ್ರತಿಯೊಬ್ಬ ಪ್ರಾಥಮಿಕ ಸಂಪರ್ಕಿತರನ್ನು ತಪಾಸಣೆ ಮಾಡಿ ವಿಂಗಡಣೆ ಮಾಡುವ ಜವಾಬ್ದಾರಿಯನ್ನು ವೈದ್ಯಕೀಯ ತಂಡಕ್ಕೆ ವಹಿಸಲಾಗಿದೆ.

ಸ್ಥಳಾಂತರ ವಿಧಾನ
ಅಪಾಯಕಾರಿ ಪ್ರಾಥಮಿಕ ಸಂಪರ್ಕಗಳನ್ನು ವೈದ್ಯಕೀಯ ಸೌಲಭ್ಯಗಳೊಂದಿಗೆ ಆಸ್ಪತ್ರೆಗಳಲ್ಲಿನ ಸರಕಾರಿ ಕ್ಯಾರಂಟೈನ್‌ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಕಡಿಮೆ ಅಪಾಯ ಎಂದು ಪರಿಗಣಿಸಿರುವ ಪ್ರಾಥಮಿಕ ಸಂಪರ್ಕಗಳನ್ನು ಹೊಟೇಲ್ ಅಥವಾ ಹಾಸ್ಟೆಲ್ ಗಳಲ್ಲಿ ಆರಂಭಿಸಿರುವ ಸರಕಾರಿ ಕ್ಯಾರಂಟೈನ್‌ ಕೇಂದ್ರಕ್ಕೆ ಕರೆದೊಯ್ಯಬೇಕು. ಆ್ಯಂಬುಲೆನ್ಸ್‌ ಅಥವಾ ಆಸ್ಪತ್ರೆ ವಾಹನಗಳ ಮೂಲಕ ಕಳುಹಿಸಬೇಕು. ಇಲ್ಲಿ ಎರಡು ಹಾಸಿಗೆಗಳ ನಡುವೆ ಎರಡು ಅಡಿ ಅಂತರ ಇರಬೇಕು. ಈ ಕೇಂದ್ರಗಳು ಕನಿಷ್ಠ 50 ಹಾಸಿಗೆಗಳನ್ನು ಹೊಂದಿರಬೇಕು. 24*7 ಅಗತ್ಯ ವೈದ್ಯಕೀಯ ಸೌಲಭ್ಯಗಳಿರಬೇಕು. ನಿತ್ಯ ಆರೋಗ್ಯ ಇಲಾಖೆಗೆ ಈ ಪ್ರಾಥಮಿಕ ಸಂಪರ್ಕಗಳ ಆರೋಗ್ಯ ಸ್ಥಿತಿಗತಿ ಕುರಿತು ವರದಿ ನೀಡಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.