High Court: ನಾಮಪತ್ರದಲ್ಲಿ ಈ ಹಿಂದಿನ ಪ್ರಕರಣಗಳ ರದ್ದತಿ ಖುಲಾಸೆ ಬಗ್ಗೆ ಮಾಹಿತಿ ಕಡ್ಡಾಯ

ಕೇಸ್‌ ಖುಲಾಸೆ ಮುಚ್ಚಿಟ್ಟಿದ್ದಕ್ಕೆ ಗ್ರಾಪಂ ಸದಸ್ಯತ್ವ ಅನರ್ಹತೆ ಸರಿ

Team Udayavani, Jan 17, 2024, 11:47 PM IST

HIGH COURT KARNATAKA 3

ಬೆಂಗಳೂರು: ಚುನಾ ವಣೆಗೆ ಸಲ್ಲಿಸುವ ನಾಮಪತ್ರದಲ್ಲಿ ಅಭ್ಯರ್ಥಿ ವಿರುದ್ಧ ದಾಖಲಾದ ಎಲ್ಲ ಕ್ರಿಮಿನಲ್‌ ಪ್ರಕರಣಗಳ ಮಾಹಿತಿ ಇರಬೇಕು. ವಿಚಾರಣೆ ಹಂತದಲ್ಲಿ ರುವ ದಾವೆಗಳ ಜತೆಗೆ ರದ್ದತಿ, ಖುಲಾಸೆಗೊಂಡ ಅಥವಾ ಬಿಡುಗಡೆ ಕುರಿತ ಮಾಹಿತಿ ಒಳಗೊಂಡಿರಬೇಕು ಎಂದು ಹೈಕೋರ್ಟ್‌ ಹೇಳಿದೆ.

ಪ್ರಕರಣವೊಂದರಲ್ಲಿ ಖುಲಾಸೆಗೊಂಡಿದ್ದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ತಮ್ಮ ಸದಸ್ಯತ್ವ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಬಾಗಲಕೋಟೆ ಜಿಲ್ಲೆಯ ಬೇವೂರು ಗ್ರಾಮ ಪಂಚಾಯತ್‌ ಸದಸ್ಯ ಮುದಿಯಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಸೂರಜ್‌ ಗೋವಿಂದರಾಜ್‌ ಅವರಿದ್ದ ಧಾರವಾಡದ ನ್ಯಾಯಪೀಠ ಈ ಆದೇಶ ನೀಡಿದೆ.

ಚುನಾಯಿತ ಅಭ್ಯರ್ಥಿಗಳ ಅನರ್ಹತೆಗೆ ಶಿಕ್ಷೆ ಅಥವಾ ಆರೋಪದ ಸಾಬೀತು ಅತ್ಯಗತ್ಯವಾಗಿದೆ. ಆದರೆ ನಾಮಪತ್ರದ ನಮೂನೆಯಲ್ಲಿ ಮಾಹಿತಿ ಬಹಿರಂಗಪಡಿಸುವಾಗ ಶಿಕ್ಷೆ ಆಗಿರುವುದು, ವಿಚಾರಣೆ ನಡೆಯುತ್ತಿರುವುದು ಅಥವಾ ಖುಲಾಸೆಗೊಂಡಿರುವುದು ಎಂದು ಪ್ರತ್ಯೇಕಿಸಲಾಗದು. ಎಲ್ಲ ಮಾಹಿತಿ ಇರಲೇಬೇಕು ಎಂದು ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

ಡೆಮಾಕ್ರಟಿಕ್‌ ಯೂನಿಯನ್‌ ಆಫ್ ಇಂಡಿಯಾ ವರ್ಸಸ್‌ ಅಸೋಸಿಯೇಶನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತಿತರರು ಪ್ರಕರಣದಲ್ಲಿ, ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣಪತ್ರದಲ್ಲಿ ಎಲ್ಲ ಕ್ರಿಮಿನಲ್‌ ಪ್ರಕರಣಗಳು ಅಂದರೆ ರದ್ದಾದ, ಬಿಡುಗಡೆ ಅಥವಾ ಖುಲಾಸೆಯಾದ ಬಗ್ಗೆ ಮಾಹಿತಿ ಒದಗಿಸುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಅದರಂತೆ ಅಭ್ಯರ್ಥಿಗಳು ಬಾಕಿ ಇರುವ ಕ್ರಿಮಿನಲ್‌ ಕೇಸುಗಳ ವಿವರ ಸಲ್ಲಿಸಿದರೆ ಸಾಲದು. ಜತೆಗೆ ಖುಲಾಸೆ ಅಥವಾ ರದ್ದಾದ ಪ್ರಕರಣಗಳ ಮಾಹಿತಿ ನೀಡಬೇಕು.

ಆಗ ಮತದಾರರು ಯಾವ ಅಭ್ಯರ್ಥಿ ಚುನಾವಣೆ ಕಣದಲ್ಲಿದ್ದಾರೆ, ಅವರ ಹಿನ್ನೆಲೆ ಏನು ಎಂಬುದನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ನ್ಯಾಯಪೀಠ ಉಲ್ಲೇಖೀಸಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.