ಲೈಂಗಿಕ ಕಿರುಕುಳ ಆರೋಪಿಗೆ ಠಾಣೆಯಲ್ಲಿ ಥಳಿಸಿದ ಪೊಲೀಸ್ ಇನ್ಸ್ ಪೆಕ್ಟರ್: ವಿಡಿಯೋ ವೈರಲ್

Team Udayavani, Sep 12, 2019, 2:17 PM IST

ಬೆಂಗಳೂರು: ಯಶವಂತಪುರದಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಯುವತಿಗೆ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಗೆ ಠಾಣೆಯಲ್ಲಿ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ.

ವಾಣಿಜ್ಯ ಸಂಕೀರ್ಣವೊಂದರ ತಾಂತ್ರಿಕ ವಿಭಾಗದಲ್ಲಿ ಕೆಲಸ‌ ಮಾಡುತ್ತಿರುವ ಯಶವಂತ ಎಂಬಾತ ನಿತ್ಯ ಪಾರ್ಕಿಂಗ್ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.‌ ಈ ಸಂಬಂಧ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಠಾಣೆಗೆ ಕರೆತಂದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶ್ರೀಕಂಠೇಗೌಡ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ವಿಡಿಯೋ ವೈರಲ್ ಆಗಿದ್ದು, ಅಮಾನವೀಯವಾಗಿ ನಡೆದುಕೊಂಡ ಪಿಎಸ್ಐ ವಿರುದ್ಧ ತನಿಖೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಆದೇಶಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ