PF ಖಾತೆಗಳಿಗೆ ಬಡ್ಡಿ ಜಮೆ ಪ್ರಕ್ರಿಯೆ ಆರಂಭ
Team Udayavani, Nov 10, 2023, 9:18 PM IST
ನವದೆಹಲಿ: ಭವಿಷ್ಯ ನಿಧಿ(ಪಿಎಫ್) ಖಾತೆಗಳಿಗೆ ಬಡ್ಡಿ ಜಮೆ ಮಾಡುವ ಪ್ರಕ್ರಿಯೆಯನ್ನು ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ(ಇಪಿಎಫ್ಒ) ಆರಂಭಿಸಿದೆ. “ಈಗಾಗಲೇ 24 ಕೋಟಿಗೂ ಅಧಿಕ ಪಿಎಫ್ ಖಾತೆಗಳಿಗೆ ಬಡ್ಡಿ ಜಮೆ ಮಾಡಲಾಗಿದೆ’ ಎಂದು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಇತ್ತೀಚಿಗೆ ತಿಳಿಸಿದ್ದಾರೆ. 2022-23ರ ಹಣಕಾಸು ವರ್ಷದಲ್ಲಿ ಇಪಿಎಫ್ ಖಾತೆಗಳಿಗೆ ವಾರ್ಷಿಕ ಬಡ್ಡಿ ಶೇ. 8.15ರಷ್ಟು ಇದೆ.
“ಪಿಎಫ್ ಖಾತೆಗಳಿಗೆ ಬಡ್ಡಿ ಜಮೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೀಘ್ರದಲ್ಲೇ ಎಲ್ಲಾ ಖಾತೆಗಳಿಗೂ ಜಮೆಯಾಗಲಿದೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಿರಿ’ ಎಂದು ಇಪಿಎಫ್ಒ ಸ್ಪಷ್ಟಪಡಿಸಿದೆ. ಇಪಿಎಫ್ಒ ವೆಬ್ಸೈಟ್, “ಉಮಾಂಗ್’ ಆ್ಯಪ್ ಮೂಲಕ ಪಿಎಫ್ ಖಾತೆದಾರರು ತಮ್ಮ ಖಾತೆಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಅಲ್ಲದೇ ನೋಂದಾಯಿತ ಬಳಕೆದಾರರು 011-22901406 ಗೆ ಮಿಸ್ ಕಾಲ್ ನೀಡುವ ಮೂಲಕ ಮಾಹಿತಿಯನ್ನು ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ