ಪರಮೇಶ್ವರ್ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ
Team Udayavani, Oct 10, 2019, 6:40 PM IST
ಬಳ್ಳಾರಿ: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾಲೀಕತ್ವದ ಸಿದ್ಧಾರ್ಥ ವಿದ್ಯಾಸಂಸ್ಥೆಯಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿ ರಾಜಕೀಯ ಪ್ರೇರಿತವಲ್ಲ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಮುಜುಗರವನ್ನುಂಟು ಮಾಡಿದ್ದಾರೆ.
ತಾಲೂಕಿನ ಹರಗಿನಡೋಣಿ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ದಾಳಿಯನ್ನು ನಾನು ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಎಂದರು.
ಕಾಂಗ್ರೆಸ್ಸಿನ ಹಿರಿಯ ನಾಯಕ ಜಿ. ಪರಮೇಶ್ವರ್ ಅವರು ಸಮರ್ಥರಿದ್ದಾರೆ, ಅದನ್ನು ನಿಭಾಯಿಸುವ ಶಕ್ತಿ ಅವರಲ್ಲಿದೆ ಎಂದರು.
ನಾನು ಬಿಜೆಪಿ ಸೇರುವ ವಿಚಾರ ಊಹೆಯಾಗಿರಲಿ:
ಕಳೆದ ಕೆಲ ತಿಂಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದೆ, ಹಾಗಾಗಿ ಕ್ಷೇತ್ರದಲ್ಲಿ ಇರಲಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎಂಬ ಊಹಾಪೋಹ ಸುದ್ದಿಯನ್ನು ಯಾರೋ ಹಬ್ಬಿಸಿದ್ದಾರೆ. ಅದು ಊಹೆಯಾಗಿರಲಿ ಎಂದು ಶಾಸಕ ನಾಗೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು. ನಾನು ಕ್ಷೇತ್ರದಲ್ಲಿ ಇಂದಿನಿಂದ ಪ್ರವಾಸ ಆರಂಭಿಸಿದ್ದೇನೆ. ಇಲ್ಲಿಯೇ ಇದ್ದು ಮತದಾರರ ಸಮಸ್ಯೆಗಳನ್ನು ಆಲಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ