ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆ ಚರ್ಚಿಸದೇ ಇರುವುದು ಖೇದಕರ: ರವೀಂದ್ರ ನಾಯ್ಕ


Team Udayavani, Dec 25, 2021, 12:15 PM IST

7session

ಶಿರಸಿ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಮತ್ತು ಸ್ಫಂದನೆಗಾಗಿ ಬೆಳಗಾವಿಯಲ್ಲಿ ಜರುಗಿದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಚರ್ಚೆಗೆ ಸರಕಾರ ಪ್ರಾಮುಖ್ಯತೆ ನೀಡದೆ ಇರುವುದು ವಿಷಾದಕರ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‍ನಲ್ಲಿ ಇತ್ತೀಚಿನ ದಿನಗಳಲ್ಲಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅನಧೀಕೃತ ಅರಣ್ಯವಾಸಿಗಳಿಗೆ ತಕ್ಷಣ ಒಕ್ಕಲೆಬ್ಬಿಸಬೇಕು, ಸರಕಾರದ ಯಾವುದೇ ಸೌಲಭ್ಯ, ಸವಲತ್ತುಗಳನ್ನು ನಿರ್ಬಂಧಿಸಬೇಕು, ಅರಣ್ಯಹಕ್ಕು ಕಾಯಿದೆ ಜಾರಿಗೆ ಬಂದು ಒಂದುವರೆ ದಶಕ ಕಳೆದರೂ ರಾಜ್ಯದಲ್ಲಿ ಅರ್ಜಿಗಳ ವಿಲೇವಾರಿ ಹಿನ್ನೆಡೆಯಾಗಿದ್ದು, ಮಂಜೂರಿಗೆ ಕಾನೂನಾತ್ಮಕ ತೊಡಕು, ಇಚ್ಛಾಶಕ್ತಿಯ ಕೊರತೆ ಮತ್ತು ಅರಣ್ಯ ಅಧಿಕಾರಿಗಳಿಂದ ನಿರಂತರ ಅರಣ್ಯವಾಸಿಗಳ ಮೇಲೆ ದೌರ್ಜನ್ಯ ನಿಯಂತ್ರಿಸುವ ದಿಸೆಯಲ್ಲಿ ಪ್ರಾಮುಖ್ಯತೆಯ ಆಧಾರದ ಮೇಲೆ ಈ ಅಧಿವೇಶನದಲ್ಲಿ ಚರ್ಚಿಸುವ ಅವಶ್ಯವಿದ್ದಾಗಲೂ ಚರ್ಚಿಸದೇ ಇರುವುದು ಖೇದಕರ ಎಂದರು.

ಚಳಿಗಾಲದ ಅಧಿವೇಶನದಲ್ಲಿ ಸರಕಾರವು ಗಂಭೀರವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಅನಧೀಕೃತ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ದಿಸೆಯಲ್ಲಿ ಪರಿಸರವಾದಿಗಳು ಸುಪ್ರೀಂ ಕೋರ್ಟ್‍ನಲ್ಲಿ ದಾಖಲಿಸಿದ ರಿಟ್‌ ಪಿಟಿಷನ್ ಅಂತಿಮ ವಿಚಾರಣೆ ಇರುವಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಅರಣ್ಯವಾಸಿಗಳ ಪರವಾಗಿ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬಂದ್‌ಗೆ ಚಿತ್ರೋದ್ಯಮ ನೈತಿಕ ಬೆಂಬಲ: ಸಿನಿಮಾ ರಿಲೀಸ್‌, ಶೂಟಿಂಗ್‌ ಯಥಾಸ್ಥಿತಿ

ಕರ್ನಾಟಕದಲ್ಲಿ ಹತ್ತು ಲಕ್ಷಕ್ಕೂ ಮಿಕ್ಕಿ ಅರಣ್ಯ ಕುಟುಂಬಗಳಿದ್ದಾಗಲೂ ಪ್ರಚಾರದ ಕೊರತೆಯಿಂದ ಕೇವಲ 2,92,537 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 1,84,358 ಅರ್ಜಿಗಳು ತೀರಸ್ಕಾರವಾಗಿ ಬಂದಿರುವಂಥ ಅರ್ಜಿಗಳಲ್ಲಿ ಶೇ. 63.02 ಅರ್ಜಿಗಳು ತೀರಸ್ಕಾರವಾದರೇ, ರಾಜ್ಯದಲ್ಲಿ ಇಂದಿನವರೆಗೆ ಕೇವಲ 15,798 ಅರ್ಜಿಗಳಿಗೆ ಮಾತ್ರ ಹಕ್ಕು ಮಾನ್ಯತೆ ದೊರಕಿದೆ. ಶೇ. 5.40 ರಷ್ಟು ಅರ್ಜಿಗಳಿಗೆ ಮಾನ್ಯತೆ ದೊರಕಿದೆ ಎಂದು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.