ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು: ಕುಮಾರಸ್ವಾಮಿ
Team Udayavani, Oct 8, 2021, 8:42 PM IST
ಚನ್ನಪಟ್ಟಣ: ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ವಿವಿಧೆಡೆ ಆಯೋಜಿಸಲಾಗಿದ್ದ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾದ ವೇಳೆ ಮಾಧ್ಯಮಗಳ ಜತೆ ಮಾತನಾಡಿ, ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಅಂತಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಹಾಕಿದ್ದಾರೆ ಅಂತಾರೆ. ಆರೋಪಗಳಿಗೂ ಒಂದು ಮಿತಿ ಬೇಡವೇ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಆರ್‌ಎಸ್‌ಎಸ್ ಬಗ್ಗೆ ನೀಡಿರುವ ಹೇಳಿಕೆಗೆ ಬದ್ಧ: ಆರ್‌ಎಸ್‌ಎಸ್‌ಎಸ್ ಬಗ್ಗೆ ನಾನು ಕೊಟ್ಟಿರುವ ಹೇಳಿಕೆಗೆ ಬದ್ಧನಾಗಿದ್ದೇನೆ. ವಾಸ್ತವ ಸಂಗತಿಗಳನ್ನು ಮಾತ್ರ ಹೇಳಿದ್ದೇನೆ. ಆರ್‌ಎಸ್‌ಎಸ್ ಪ್ರಚಾರಕರೊಬ್ಬರು ಹೇಳಿರುವ ಮಾತುಗಳನ್ನು ನಾನು ಉಲ್ಲೇಖ ಮಾಡಿದ್ದೇನೆ. ಬೇಕಿದ್ದರೆ ನನ್ನ ಹೇಳಿಕೆ ವಿರೋಧ ಮಾಡುವವರು ಸಾರ್ವಜನಿಕವಾಗಿ ಚರ್ಚೆಗೆ ಬರಲಿ. ನಾನು ಸಿದ್ಧನಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ