BJP: ಮೋದಿ ಮತ್ತೆ ಪ್ರಧಾನಿಯಾಗಲಿ ಎಂಬ ಉದ್ದೇಶದಿಂದ ಬಿಜೆಪಿ ಸೇರ್ಪಡೆ: ಶೆಟ್ಟರ್
Team Udayavani, Jan 28, 2024, 8:39 PM IST
ತುಮಕೂರು: ಹತ್ತು ವರ್ಷಗಳ ದೇಶದ ಪ್ರಧಾನಿಗಳಾಗಿ ಮೋದಿಯವರು ಸಮರ್ಥ ಆಡಳಿತ ನೀಡಿದ್ದಾರೆ, ಅವರು ಮತ್ತೆ ಈ ದೇಶದ ಪ್ರಧಾನಿಗಳಾಗಬೇಕು ಎನ್ನುವ ಉದ್ದೇಶದಿಂದ ನಾನು ಮತ್ತೆ ನಮ್ಮ ಮನೆಗೆ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದ ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಕಳೆದ 34 ವರ್ಷಗಳಿಂದ ನಾನು ಸಂಘಟನೆ ಮಾಡಿದಂತಹ ಮನೆ. ಹಾಗಾಗಿ ನಮ್ಮ ಮನೆಗೆ ವಾಪಸ್ಸಾಗಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಸೂಕ್ತ ಸ್ಥಾನಮಾನವನ್ನೂ ನೀಡಿದ್ದರು. ಕಾಂಗ್ರೆಸ್ ಬಿಡಲಿಕ್ಕೆ ಯಾವುದೇ ರೀತಿಯ ಕಾರಣಗಳಿಲ್ಲ. ನನ್ನನ್ನು ಗೌರವಯುತವಾಗಿ ನಡೆಸಿ ಕೊಂಡ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಎಂದ ಅವರು, ನಮ್ಮ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಿ ಮರು ಸೇರ್ಪಡೆಯಾಗಿದ್ದೇನೆ ಎಂದು ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ