ಉಣಕಲ್ಲ ನಾಲಾ ತೀರದ ಒತ್ತುವರಿ ; ಧೂಳು ತಿನ್ನುತ್ತಿರುವ ಜಂಟಿ ಸರ್ವೇ ವರದಿ

ಮತ್ತೆ ಮಳೆ ಅವಾಂತರದ ಭೀತಿಯಲ್ಲಿ ಜನಜೀವನ

Team Udayavani, Jun 4, 2020, 6:37 AM IST

Hubli-Rain

ಹುಬ್ಬಳ್ಳಿ: ಉಣಕಲ್ಲ ನಾಲಾ ಒತ್ತುವರಿ ಹಾಗೂ ಮಾರ್ಗ ಬದಲಾವಣೆಯಿಂದ ಕಳೆದ ವರ್ಷದ ಮಹಾಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿತ್ತು. ಹೀಗಾಗಿ ನಾಲಾ ಒತ್ತುವರಿ ಸಮೀಕ್ಷೆ ನಡೆಸಿ ಆರು ತಿಂಗಳಲ್ಲಿ ತೆರವುಗೊಳಿಸುವ ಗಡುವು ಹಾಕಿಕೊಂಡಿದ್ದರು. ವಿಪರ್ಯಾಸವೆಂದರೆ ಪಾಲಿಕೆ ಹಾಗೂ ಭೂ ಮಾಪನ ಇಲಾಖೆ ಜಂಟಿ ಸರ್ವೇ ವರದಿ ಧೂಳು ತಿನ್ನುವಂತಾಗಿದ್ದು, ಈ ವರ್ಷವೂ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ನಾಲಾ ಅಕ್ಕಪಕ್ಕದ ಜನರಲ್ಲಿ ಆತಂಕ ಶುರುವಾಗಿದೆ.

ಉಣಕಲ್ಲ ಕೆರೆ ಕೋಡಿ ಹರಿದು ನಾಲಾಗೆ ನೀರು ಹರಿದಿದ್ದರೂ ಹಿಂದೆಂದೂ ಇಂತಹ ಅನಾಹುತ ಸಂಭವಿಸಿರಲಿಲ್ಲ. ಆದರೆ 2019ರ ಆಗಸ್ಟ್‌ ತಿಂಗಳಲ್ಲಿ ಸುರಿದ ಮಹಾಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಸಾವಿರಾರು ಮನೆಗಳಲ್ಲಿ ನೀರು ತುಂಬಿತ್ತು. ಪ್ರಮುಖ ನಾಲ್ಕು ಸಂಪರ್ಕ ಸೇತುವೆಗಳು ಕೊಚ್ಚಿ ಹೋಗಿದ್ದವು. ನಾಲಾ ಒತ್ತುವರಿ ಮಾಡಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿ ನಾಲಾ ಮಾರ್ಗವನ್ನೇ ಬದಲಿಸಿದ ಪರಿಣಾಮ ಅಕ್ಕಪಕ್ಕದ ಬಹುತೇಕ ಬಡಾವಣೆಯ ಜನರು ಶಿಕ್ಷೆ ಅನುಭವಿಸುವಂತಾಗಿತ್ತು. ಜನಪ್ರತಿನಿಧಿಗಳು ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಒತ್ತುವರಿ ತೆರವಿಗಾಗಿ ಸರ್ವೇಗೆ ಆದೇಶಿಸಿದ್ದರು. ವರದಿ ತಯಾರಿಸಿ ಆರು ತಿಂಗಳಲ್ಲಿ ಒತ್ತುವರಿ ತೆರವುಗೊಳಿಸುವ ಭರವಸೆಯನ್ನು ಜನಪ್ರತಿನಿಧಿಗಳು ನೀಡಿದ್ದರು.

ಜನಪ್ರತಿನಿಧಿಗಳ ಸೂಚನೆ ಮೇರೆಗೆ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಅವರು ಭೂಮಾಪನ ಇಲಾಖೆಯಿಂದ ಉಣಕಲ್ಲ ನಾಲಾದ 8.5 ಕಿಮೀ ಸರ್ವೇ ಮಾಡಿಸಿದ್ದರು. ಹೂಗಾರ ಪ್ಲಾಟ್‌, ಶಕ್ತಿ ಕಾಲೋನಿ, ಲಿಂಗರಾಜ ನಗರ, ಪಾಂಡುರಂಗ ಕಾಲೋನಿ, ಚನ್ನಪೇಟೆ, ದೋಬಿಘಾಟ್‌ ಭಾಗ ಸೇರಿದಂತೆ ಇನ್ನಿತರೆಡೆ 153 ಕಡೆಗಳಲ್ಲಿ ಒತ್ತುವರಿಯಾಗಿರುವುದನ್ನು ಪತ್ತೆ ಹಚ್ಚಿದ್ದರು. ನಾಲಾ ಒತ್ತವರಿ ಮಾಡಿ ವಾಸದ ಮನೆ, ವಾಣಿಜ್ಯ ಕಟ್ಟಡ, ಮಳಿಗೆ ನಿರ್ಮಿಸಿ ಬಾಡಿಗೆ ನೀಡಲಾಗಿದೆ. ಕೆಲ ಬಿಲ್ಡ್‌ರ್ಸ್‌ಗಳು ಕಟ್ಟಡ ನಿರ್ಮಾಣ ಮಾಡಿ ನಾಲಾ ಮಾರ್ಗವನ್ನು ಬದಲಿಸಿರುವ ಕುರಿತು ವರದಿಯಲ್ಲಿ ಉಲ್ಲೇಖೀಸಲಾಗಿತ್ತು.

ಪುನರ್ವಸತಿ ನೆಪ!
ಆರು ತಿಂಗಳಲ್ಲಿ ಒತ್ತುವರಿ ತೆರವುಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಲ್ಲಿನ ಜನರಿಗೆ ಭರವಸೆ ನೀಡಿದ್ದರು. ಅಧಿಕಾರಿಗಳೂ ಖಡಕ್‌ ಸೂಚನೆ ಕೊಟ್ಟಿದ್ದರು. ಆದರೆ ಸರ್ವೇ ಕಾರ್ಯ ಮುಗಿದು ವರದಿ ಸಿದ್ಧವಾಗುತ್ತಿದ್ದಂತೆ ಕೆಲ ಜನಪ್ರತಿನಿಧಿಗಳು ತೆರವಿಗೆ ಪರೋಕ್ಷ ಆಕ್ಷೇಪ ವ್ಯಕ್ತಪಡಿಸಿದರು. ಬಹುತೇಕರು ಬಡವರಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸಿದ ನಂತರ ಒತ್ತುವರಿ ತೆರವುಗಳಿಸುವ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಬೇಡ ಎಂದು ಸ್ಥಳೀಯ ಜನಪ್ರತಿನಿಧಿಗಳು ಒಕ್ಕೊರಲಿನಿಂದ ಸೂಚನೆ ನೀಡಿದ್ದಕ್ಕೆ ಪಾಲಿಕೆ ಕೈಚೆಲ್ಲಿತು. 2019 ಅ. 26ರಂದು ಆರಂಭವಾಗಿದ್ದ ಸರ್ವೇ ಕಾರ್ಯವನ್ನು ಎರಡೇ ದಿನಕ್ಕೆ ಏಕಾಏಕಿ ಸ್ಥಗಿತಗೊಳಿಸಲಾಗಿತ್ತು. ಕಾಣದ ಕೈಗಳು ಕೆಲಸ ಮಾಡಿದ್ದು, ಜನಪ್ರತಿನಿಧಿಗಳ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ಹಾಕಿಸಿ ಸರ್ವೇ ಕಾರ್ಯ ನಿಲ್ಲಿಸಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಉಳಿದ ಕಾಲುವೆ ಸರ್ವೇ ಕಾರ್ಯವನ್ನು ಒಂದೂವರೆ ತಿಂಗಳಲ್ಲಿ ಪೂರ್ಣಗೊಳಿಸಿದ್ದರು. ಬಡವರ ಹೆಸರಲ್ಲಿ ಕೆಲ ಸ್ಥಿತಿವಂತರು ತಮ್ಮ ಕಟ್ಟಡಗಳನ್ನು ಉಳಿಸಿಕೊಳ್ಳಲು ಈ ತಂತ್ರ ಅನುಸರಿಸಿದ್ದಾರೆ ಎನ್ನುವ ಮಾತುಗಳು ಅಲ್ಲಿನ ಜನರಿಂದ ಕೇಳಿ ಬರುತ್ತಿವೆ.

ನಾಲಾ ಅಳತೆ ಎಷ್ಟಿದೆ ಗೊತ್ತಿಲ್ಲ!
ಬೆಂಗಳೂರಿನ ರಾಜಕಾಲುವೆ ಇಂತಿಷ್ಟು ಅಗಲ ಇರಬೇಕು ಎಂದು ರಾಷ್ಟ್ರೀಯ ಹಸಿರು ಪೀಠ ಸ್ಪಷ್ಟಪಡಿಸಿದೆ. ಆದರೆ ಇಲ್ಲಿನ ಯಾವುದೇ ನಾಲಾದ ಅಳತೆ ಬಗ್ಗೆ ಸ್ಪಷ್ಟತೆಯಿಲ್ಲ. ಇದ್ದರೂ ಹಿಂದಿನ
ಅಧಿಕಾರಿಗಳ ಕರಾಮತ್ತಿನಿಂದ ಆ ಕಡತಗಳು ಕಳೆದು ಹೋಗಿದ್ದರೂ ಅಚ್ಚರಿ ಪಡಬೇಕಾಗಿಲ್ಲ. 1975ರಿಂದ 1990ರವರೆಗೆ ನಾಲಾ ಅಕ್ಕಪಕ್ಕದಲ್ಲಿ ಒಂದು ವರ್ಷದ ಅವಧಿಗೆ ಪಾಲಿಕೆಯಿಂದಲೇ ಲೀಸ್‌ ನೀಡಲಾಗಿದೆ. 2012ರ ವರೆಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಪ್ರತಿವರ್ಷ ನವೀಕರಣ ಮಾಡಿಕೊಂಡೇ ಬಂದಿದ್ದಾರೆ. ಇನ್ನೂ ನಾಲಾ ಅಕ್ಕಪಕ್ಕದ ಸ್ಲಂಗಳಲ್ಲಿ ನಿರ್ಮಾಣವಾಗಿರುವ ಮನೆಗಳಿಗೆ ಸ್ಲಂಬೋರ್ಡ್‌ನಿಂದ ಹಕ್ಕುಪತ್ರ ನೀಡಲಾಗಿದೆ. ಪಾಲಿಕೆಯಿಂದ ಕಟ್ಟಡ ನಿರ್ಮಿಸಲು ನಿರಾಪೇಕ್ಷಣ ಪತ್ರ ನೀಡಲಾಗಿದೆ. ಈ ಎಲ್ಲಾ ಬೆಳವಣಿಗೆ ನೋಡಿದರೆ ಪಾಲಿಕೆ ಹಿಂದಿನ ಅಧಿಕಾರಿಗಳು, ಸಿಬ್ಬಂದಿ ಬಹುತೇಕ ನಾಲಾ ನುಂಗಿರುವುದು ಸ್ಪಷ್ಟ.

ನಿವಾಸಿಗಳಲ್ಲಿ ಹೆಚ್ಚಾದ ಆತಂಕ
ಈ ವರ್ಷವೂ ಉತ್ತಮ ಮಳೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ಮಳೆಗಾಲ ಆರಂಭದಲ್ಲೇ ಚಂಡಮಾರುತ, ಅಡ್ಡ ಮಳೆಗಳು ಜನರಲ್ಲಿ ಆತಂಕ ಮೂಡಿಸಿವೆ. ಕಳೆದ ವರ್ಷ ಸುರಿದ ಮಳೆಯಿಂದ ಉಣಕಲ್ಲ ಕೆರೆಯಲ್ಲಿ ನೀರಿನ ಪ್ರಮಾಣ ಕೂಡ ಹೆಚ್ಚಿದೆ. ಹೀಗಾಗಿ ಶೆಟ್ಟರ ಕಾಲೋನಿ, ದೇವಿ ನಗರ, ಅರ್ಜುನ ನಗರ, ಶಿವಪುರ ಕಾಲೋನಿ, ಸಿದ್ಧಲಿಂಗೇಶ್ವರ ನಗರ, ಹನುಮಂತ ನಗರ, ಚನ್ನಪೇಟ, ಎಸ್‌.ಎಂ. ಕೃಷ್ಣ ಸೇರಿದಂತೆ ನಾಲಾ ಅಕ್ಕಪಕ್ಕದಲ್ಲಿರುವ ಬಡಾವಣೆ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.

ನಾಲಾ ಒತ್ತುವರಿ ತೆರವುಗೊಳಿಸುವುದಾಗಿ 10-12 ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದಾರೆ. ಕಳೆದ ಬಾರಿಯ ಅವಘಡದಿಂದ ನಾಲಾ ಒತ್ತುವರಿ ಸರ್ವೇ ಮಾಡಿಸಿದ್ದಾರೆ. ಯಾರೋ ಮಾಡಿರುವ ತಪ್ಪಿಗೆ ಸುತ್ತಲಿನ ಜನರು ಶಿಕ್ಷೆ ಅನುಭವಿಸುವಂತಾಗಿದೆ. ಕಳೆದ ವರ್ಷದಂತೆ ಈ ಬಾರಿಯೂ ಮಳೆ ಸುರಿದರೆ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು.
ವಿನಾಯಕ ಕುಬಸದ, ದೇವಿ ನಗರ

ನಾಲಾ ಅಕ್ಕಪಕ್ಕದಲ್ಲಿರುವ ಬಹುತೇಕರು ಬಡವರು.  ಅವರಿಗೆ ಪುನರ್ವಸತಿ ಕಲ್ಪಿಸಿದ ನಂತರ ತೆರವುಗೊಳಿಸಲು ಸ್ಥಳೀಯ ಜನಪ್ರತಿನಿಧಿಗಳು ನಿರ್ಧರಿಸಿದ್ದಾರೆ. ಕಳೆದ ವರ್ಷದ ಅವಘಡ ಮರುಕಳಿಸದಂತೆ ನಾಲಾ ಹೂಳೆತ್ತಲು ಮೊದಲ ಆದ್ಯತೆ ನೀಡಲಾಗಿದೆ.
ಡಾ| ಸುರೇಶ ಇಟ್ನಾಳ, ಆಯುಕ್ತ, ಮಹಾನಗರ ಪಾಲಿಕೆ

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.