ಬಿಜೆಪಿ ಸೋಲಿಸಲು ಕಾಂಗ್ರೆಸ್ ಸಿದ್ದವಾಗಿದೆ: ಕೆ ಸಿ ವೇಣುಗೋಪಾಲ್

Team Udayavani, Sep 26, 2019, 12:27 PM IST

ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ 15 ಕ್ಷೇತ್ರಗಳಲ್ಲಿ ಪ್ರಬಲಅಭ್ಯರ್ಥಿಯನ್ನೇ ಕಣಕ್ಕೆ ಇಳಿಸುತ್ತೇವೆ. ಅದರ ಅಂಗವಾಗಿ ಇಂದು ನಾವೆಲ್ಲಾ ಸೇರಿ ಸಭೆ ಮಾಡಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯ ನಂತರ ಕೆ ಸಿ ವೇಣುಗೋಪಾಲ್ ಮಾತನಾಡಿದರು.

ಈ ಸಭೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೈರು ವಿಚಾರವಾಗಿ ಮಾತನಾಡಿದ ಕೆ ಸಿ ವೇಣುಗೋಪಾಲ್, ವೈಯಕ್ತಿಕ ಕಾರಣದಿಂದ ಪರಮೇಶ್ವರ್ ಗೈರಾಗಿದ್ದಾರೆ. ಎಲ್ಲರೂ ಒಗ್ಗಟಿನಿಂದ ಚುನಾವಣೆ ಎದುರಿಸುತ್ತೇವೆ. ಇದನ್ನು ವಿಶೇಷ ಸುದ್ದಿ ಮಾಡುವ ಅಗತ್ಯ ಇಲ್ಲ. ಈ ಬಗ್ಗೆ ಪರಮೇಶ್ವರ್ ನನ್ನ ಜೊತೆ ಮಾತನಾಡಿ ತಿಳಿಸಿದ್ದಾರೆ ಎಂದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ