ಕಾಸರಗೋಡು ಜಿಲ್ಲೆ ಕೋವಿಡ್ ಮುಕ್ತ

Team Udayavani, May 11, 2020, 2:31 PM IST

ಕಾಸರಗೋಡು ಜಿಲ್ಲೆ ಕೋವಿಡ್ ಮುಕ್ತ

ಕಾಸರಗೋಡು: ಕಾಸರಗೋಡು ಜಿಲ್ಲೆ ಐತಿಹಾಸಿಕ ಸಾಧನೆ ಮಾಡಿದೆ. ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್‌ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂತಿಮ ರೋಗಿ ಕೂಡ ಗುಣಮುಖರಾಗುವುದರೊಂದಿಗೆ ಎಲ್ಲ ಕೋವಿಡ್ ಬಾಧಿತರು ಮನೆಗೆ ವಾಪಸಾಗಿದ್ದಾರೆ.

ಜಿಲ್ಲೆಯ 178 ಮಂದಿಯನ್ನು ಕೋವಿಡ್ ಬಾಧಿಸಿತ್ತು. ಕೇಂದ್ರ ಸರಕಾರ ಗುರುತಿಸಿದ ಹಾಟ್‌ಸ್ಪಾಟ್‌ಗಳ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆ ಕಾಣಿಸಿಕೊಂಡಿತ್ತು. ಆದರೆ ಅತೀ ಕಡಿಮೆ ಅವಧಿಯಲ್ಲೇ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸುವಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಡಾಕ್ಟರ್‌ಗಳು, ದಾದಿಯರು, ಆರೋಗ್ಯ ಕಾರ್ಯಕರ್ತರು ಸಫ‌ಲರಾಗಿದ್ದಾರೆ.

ಕೇರಳ ರಾಜ್ಯದಲ್ಲಿ 7 ಮಂದಿಗೆ ಸೋಂಕು
ಕೇರಳ ರಾಜ್ಯದಲ್ಲಿ ರವಿವಾರ ಹೊಸದಾಗಿ 7 ಮಂದಿಯನ್ನು ಕೋವಿಡ್ ಸೋಂಕು ಬಾಧಿಸಿರುವುದು ದೃಢವಾಗಿದೆ. ವಯನಾಡು-3, ತೃಶ್ಶೂರು-2, ಎರ್ನಾಕುಳಂ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ತಗಲಿದೆ. ಇದೇ ವೇಳೆ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುಣಮುಖರಾಗಿದ್ದಾರೆ. ಕಣ್ಣೂರು ಜಿಲ್ಲೆಯಲ್ಲಿ 2, ಕಾಸರಗೋಡು ಮತ್ತು ಪಾಲಘಾಟ್‌ ಜಿಲ್ಲೆಯ ತಲಾ ಒಬ್ಬರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೆ 489 ಮಂದಿ ಗುಣಮುಖರಾಗಿದ್ದಾರೆ. 20 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

11 ಪ್ರಕರಣ ದಾಖಲು
ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಆರೋಪದಲ್ಲಿ 11 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. 18 ಮಂದಿಯನ್ನು ಬಂಧಿಸಿರುವುದಲ್ಲದೆ ವಾಹನವೊಂದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ತನಕ 2,095 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ 2,712 ಮಂದಿಯನ್ನು ಬಂಧಿಸಿ, 870 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಂಭ್ರಮಿಸುವ ಕ್ಷಣ ಇದಲ್ಲ
ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ನೇತೃತ್ವದ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ, ಸ್ಥಳೀಯಾಡಳಿತ, ಕುಟುಂಬಶ್ರೀ, ಅಂಗನವಾಡಿ ಕಾರ್ಯಕರ್ತರು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ಅಗ್ನಿ ಶಾಮಕ ದಳ ಸಹಿತ ವಿಭಾಗಗಳು ಹಗಲು- ರಾತ್ರಿ ನಡೆಸಿರುವ ಯತ್ನ ಫಲ ನೀಡಿದೆ. ಇಷ್ಟೆಲ್ಲ ಸಾಧನೆಗಳಿದ್ದರೂ ಜಾಗೃತಿ ಸಡಿಲಗೊಳಿಸುವ ಸಮಯ ಇನ್ನೂ ಬಂದಿಲ್ಲ. ಒಂದು ಚಿಕ್ಕ ಅಸಡ್ಡೆಯೂ ಮತ್ತೆ ಜಿಲ್ಲೆಯಲ್ಲಿ ತನ್ನ ಇರವನ್ನು ತೋರಿಸಲು ಕೋವಿಡ್ ವೈರಸ್‌ಗೆ ದಾರಿಯಾದೀತು.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.