ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುತ್ತಿಲ್ಲ: ಕಾಗೋಡು ಅಸಮಾಧಾನ

Team Udayavani, Jan 29, 2020, 8:13 PM IST

ಬೆಂಗಳೂರು: ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಪಡೆಯದ ಕಾರಣ ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿದೆ ಎಂದು ಹೇಳಿದರು.

ಎಲ್ಲದಕ್ಕೂ ಹೈಕಮಾಂಡ್‌ ಭೇಟಿ ಮಾಡುವ ಸ್ಥಿತಿ ಬರಬಾರದು. ಇಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಿದ್ದರಾಮಯ್ಯ ಏನು ಬೆಳೆದು ನಿಂತವರಲ್ಲ, ಎಲ್ಲರಿಂದಾಗಿಯೇ ಅವರು ಅಧಿಕಾರ ಪಡೆದಿದ್ದು. ಪರಮೇಶ್ವರ್‌ ಕೂಡ ಸಂಸ್ಥೆ ಕಟ್ಟಿಕೊಂಡಿದ್ದವರು ಅದರ ಮೂಲಕವೇ ರಾಜಕೀಯಕ್ಕೆ ಬಂದದವರು ಎಂದು ತಿಳಿಸಿದರು.

ಕಾಂಗ್ರೆಸ್‌ ಜವಾಬ್ದಾರಿಯುತ ಪಕ್ಷ. ಪಕ್ಷವನ್ನು ಸಂಘಟಿಸಬೇಕಾದ ಅವಶ್ಯಕತೆಯಿದೆ. ಇದರತ್ತ ಎಲ್ಲರೂ ಗಮನಹರಿಸಬೇಕು. ಹೈಕಮಾಂಡ್‌ ಅಧಿಕಾರ ಇದ್ದಾಗ ಒಂದು ರೀತಿ, ಇಲ್ಲದಾಗ ಮತ್ತೂಂದು ರೀತಿ ಕಾಣುತ್ತಿದೆ.

ಅಧಿಕಾರ ಇದ್ದಾಗ ಬಹಳ ಉತ್ಸಾಹದಿಂದ ಇರುತ್ತಾರೆ. ಅಧಿಕಾರ ಇಲ್ಲ ಎಂದರೆ ಎಲ್ಲಿಗೆ ಹೋಗ್ತಾರೋ ಗೊತ್ತಿಲ್ಲ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ