
ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ
ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ
Team Udayavani, Mar 30, 2023, 11:37 AM IST

ಕಾಣಿಯೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ತಾಲೂಕಿನ ಕಾಣಿಯೂರು ಸಮೀಪ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನಡೆದಿದೆ.
ಖ್ಯಾತ ದೈವ ನರ್ತಕ ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು) (55) ಮೃತರು ಎಂದು ತಿಳಿದು ಬಂದಿದೆ.
ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಾ.30 ರಂದು ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ. ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
