ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ವಾಗ್ವಾದ

Team Udayavani, Jan 26, 2021, 12:12 PM IST

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ವಾಗ್ವಾದ

ದೊಡ್ಡಬಳ್ಳಾಪುರ: ಕನ್ನಡಪರ ಹೋರಾಟಗಾರರನ್ನು ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ತಪ್ಪು ಎಂದು ಹೇಳಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಚಿ.ಮಾ.ಸುಧಾಕರ್‌ ಅವರು ಹೋರಾಟ ಗಾರರ ಮುಂದೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ಇದರಿಂದಾಗಿ ತಾಪಂ ಭವನದಲ್ಲಿ ನಡೆದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ಉಂಟಾಗಿತ್ತು. ಶಾಸಕ ಟಿ.ವೆಂಕಟರಮಣಯ್ಯ ಸೇರಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕನ್ನಡಪರ ಹೋರಾಟಗಾರರ ಮಾತಿಗೆ ಗೌರವ ನೀಡದೆ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷ ಚಿ.ಮಾ.ಸುಧಾಕರ್‌ ಕ್ಷಮೆಯಾಚಿಸದೆ ಸಭೆಯಿಂದ ಹೊರ ನಡೆದರು.

ಸುಧಾಕರ್‌ ವಿರುದ್ಧ ಕಿಡಿ: ಸಾಹಿತ್ಯ ಪರಿಷತ್‌ ನಿಕಟಪೂರ್ವ ತಾಲೂಕು ಅಧ್ಯಕ್ಷ ಕೆ.ಆರ್‌.ರವಿಕಿರಣ್‌ ಮಾತನಾಡಿ, ಜಿಲ್ಲಾ
ಸಾಹಿತ್ಯ ಪರಿಷತ್‌ ಲೆಕ್ಕಪತ್ರಗಳು ಪಾರದರ್ಶಕವಾಗಿಲ್ಲ. ದತ್ತಿನಿಧಿಯಿಂದ ತಾಲೂಕಿಗೆ ಬರಬೇಕಿರುವ ಹಣ ಬಂದಿಲ್ಲ. ಕನ್ನಡ
ಪರ ಹೋರಾಟಗಾರರು ಸಮ್ಮೇಳನ ಅಧ್ಯಕ್ಷರಾಗಲು ಅವಕಾಶ ಇಲ್ಲ ಎಂದು ಎಲ್ಲೂ ನಿಯಮ ಇಲ್ಲ. ಜಿಲ್ಲಾ ಅಧ್ಯಕ್ಷರು
ಯಾವುದೇ ಬರವಣಿಗೆಯನ್ನು ಮಾಡಿಲ್ಲ. ಹೀಗಾಗಿ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷರಾಗಲು ಅರ್ಹತೆ ಇಲ್ಲ ಎಂದು
ಟೀಕಿಸಿದರು. ಮುಖಂಡರಾದ ಮಂಜು ನಾಥ್‌, ರಾಜು ಸಣ್ಣಕ್ಕಿ, ಸಂಜೀವ್‌ ನಾಯಕ್‌ ಮಾತನಾಡಿ, ಸಾಹಿತ್ಯ ಸಮ್ಮೇಳದಲ್ಲಿ ಹೊಸ ಕೃಷಿ ಕಾಯ್ದೆಗಳು, ರಾಜ್ಯದಲ್ಲಿ ಹಿಂದಿ ಭಾಷೆ ಏರಿಕೆ ಕುರಿತ ವಿಚಾರ ಗೋಷ್ಠಿಗಳು ನಡೆಯಬೇಕು ಎಂದರು.

ಇದನ್ನೂ ಓದಿ:ಲಂಚ ಪ್ರಕರಣ: ಕಂದಾಯ ಸಚಿವ ಅಶೋಕ್ ಪಿಎ ವಿರುದ್ಧ ದೂರು ದಾಖಲು

ಅಧ್ಯಕ್ಷ ನಡವಳಿಕೆ ಖಂಡನೀಯ:
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷರ ನಡವಳಿಕೆ ಖಂಡನೀಯವಾಗಿದೆ. ಸಾರ್ವಜನಿಕರ ಹಣ ಖರ್ಚು ಮಾಡುವಾಗ ಲೆಕ್ಕ ಪತ್ರಗಳನ್ನು ಪಾರದರ್ಶಕ ವಾಗಿಟ್ಟು ಕೊಳ್ಳುವುದು ಕಡ್ಡಾಯ. ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕು ಆಡಳಿತದಿಂದ 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ವಿವರಿಸಿದರು. ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಹಾದೇವ್‌ ಮಾತನಾಡಿ, ಕೋವಿಡ್‌ ಕಾರಣದಿಂದಾಗಿ ಮುಂದೂಡಲ್ಲಪಟ್ಟಿದ ಜಿಲ್ಲಾ ಸಾಹಿತ್ಯ ಸಮ್ಮೇಳನ ಫೆಬ್ರವರಿ ಮೊದಲ ವಾರದಲ್ಲಿ ಬಸವ ಭವನದಲ್ಲಿ ನಡೆಯಲಿದೆ. ಈ ಹಿಂದೆ ನಿರ್ಧರಿಸಿ ದಂತೆಯೇ ಗೋಷ್ಠಿಗಳು ನಡೆಯಲಿವೆ. ಸಮ್ಮೇಳನ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭು
ದೇವ್‌ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಎಲ್ಲಾ ಸಂಘಟನೆಗಳನ್ನು ಒಳಗೊಂಡಂತೆ ಸಮಿತಿ ರಚಿಸಿಕೊಂಡು
ಸಮ್ಮೇಳನ ನಡೆಸಲಾಗುವುದು ಎಂದರು. ಎಸಿ ಅರುಳ್‌ ಕುಮಾರ್‌, ತಹಶೀಲ್ದಾರ್‌ ಶಿವರಾಜ್‌, ತಾಪಂ ಅಧ್ಯಕ್ಷ ನಾರಾಯಣ ಗೌಡ, ಇಇಒ ಮುರುಡಯ್ಯ ಇದ್ದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.