ಕಾಪು: ಸ್ಕೂಟಿ-ಟ್ಯಾಂಕರ್ ಢಿಕ್ಕಿ: ಸವಾರನಿಗೆ ಗಂಭೀರ ಗಾಯ
Team Udayavani, Sep 11, 2022, 12:16 AM IST
ಕಾಪು: ರಾ. ಹೆ. 66ರ ಕೋತಲಕಟ್ಟೆ ಬಳಿ ಕಾಪುವಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಉಡುಪಿ ಕುಂಜಿಬೆಟ್ಟು ನಿವಾಸಿ ಸುಜಿತ್ ಆಚಾರ್ಯ (35) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕೋತಲಕಟ್ಟೆಯ ಬಬ್ಬು ಸ್ವಾಮಿ ದೈವಸ್ಥಾನದ ಬಳಿ ಟ್ಯಾಂಕರ್ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟರ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟಿ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ಸ್ಥಳೀಯರು ಗಾಯಾಳುವನ್ನು 108 ಆ್ಯಂಬುಲೆನ್ಸ್ ವಾಹನದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ