Karnataka: ಇಂದು ಮೊದಲ ಪೂರ್ಣಾವಧಿ ಜನತಾ ದರ್ಶನ

2ನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ

Team Udayavani, Nov 27, 2023, 5:53 AM IST

VIDHANA SOUDHA 1

ಬೆಂಗಳೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ತ್ವರಿತ ಪರಿಹಾರ ಒದಗಿಸುವ ದೃಷ್ಟಿಯಿಂದ ಸೋಮವಾರ (ನ.27) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದಾರೆ.

ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲೊಮ್ಮೆ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದರಾದರೂ ಅನಿವಾರ್ಯ ಕಾರಣದಿಂದ ಮುಂದೂಡಿದ್ದರು. ಪ್ರತಿನಿತ್ಯ ಅವಕಾಶ ಸಿಕ್ಕಾಗಲೆಲ್ಲಾ ಜನತಾ ದರ್ಶನದ ಮೂಲಕ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸಾಧ್ಯವಾದಷ್ಟು ಪರಿಹಾರ ಕಲ್ಪಿಸಿದ್ದಾರಲ್ಲದೆ, ಜಿಲ್ಲೆ, ತಾಲೂಕು ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಿ ಬಗೆಹರಿಸುವ ಹೊಣೆಗಾರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ನೀಡಿದ್ದರು.

ಇದೀಗ ಮೊಟ್ಟ ಮೊದಲ ಬಾರಿಗೆ ಪೂರ್ಣಪ್ರಮಾಣದ ಜನಸ್ಪಂದನ ಕಾರ್ಯಕ್ರಮ ಆಯೋಜಿಸುತ್ತಿದ್ದು, ಸೋಮವಾರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಆರಂಭಗೊಳ್ಳಲಿದೆ.

ಸಿದ್ಧತೆ ಪರಿಶೀಲಿಸಿದ ಎಸಿಎಸ್‌: ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆಗಳನ್ನು ನಡೆಸಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಅವರು ಭಾನುವಾರ ಸಂಜೆ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ಅಧಿಕಾರಿಗಳ ಹಾಜರಾತಿಗೆ ಸೂಚನೆ: ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ, ಉಪವಿಭಾಗ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಗುರುತಿನ ಚೀಟಿ ತರಲು ಮನವಿ
ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್‌ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು. ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.