Karnataka: ಬಸ್ಗಳಲ್ಲಿ ಆಡಿಯೋ ಪ್ರಕಟನೆಗೆ ಹೈಕೋರ್ಟ್ ಸೂಚನೆ
Team Udayavani, Nov 10, 2023, 12:10 AM IST
ಬೆಂಗಳೂರು: ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಬಸ್ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟನೆ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ಗಳಿಗೆ ನಿರ್ದೇಶನ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರಿನ ದೃಷ್ಟಿ ವಿಶೇಷ ಚೇತನ ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ಗಳೂ ಸಂಚಾರ ಕೈಗೊಳ್ಳುತ್ತಿರುವುದರಿಂದ, ಆ ಬಸ್ಗಳಲ್ಲಿ ವಿಶೇಷಚೇತನರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಬೇಕು ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ