ಈ 6 ರಾಜ್ಯಗಳನ್ನು ಹೊರತುಪಡಿಸಿ ಕರ್ನಾಟಕಕ್ಕೆ ಬರುವವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ
Team Udayavani, May 23, 2020, 6:38 PM IST
ಬೆಂಗಳೂರು : ಮಹಾಮಾರಿ ಕೋವಿಡ್ 19 ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಸೇವಾ ಸಿಂಧು ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಕೊಂಡು ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿ ಆರೋಗ್ಯ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.
ಅನ್ಯ ರಾಜ್ಯಗಳಿಂದ ವಾಪಸಾಗುವ ಎಲ್ಲರಿಗೂ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಿದ್ದ ಆದೇಶವನ್ನು ಹಿಂಪಡೆದಿದ್ದು, ಹೆಚ್ಚು ಸೋಂಕು ಪ್ರಕರಣ ಹೊಂದಿರುವ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಆಗಮಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಹೋಂ ಕ್ವಾರಂಟೈನ್ ವಿಧಿಸಲು ನಿರ್ಧರಿಸಲಾಗಿದೆ. ಉಳಿದಂತೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿಯಲ್ಲಿ 5 ಅಥವಾ 7ನೇ ದಿನ ಅವರನ್ನು ಕೋವಿಡ್ ಸೋಂಕು ಪರೀಕ್ಷೆಗೆ ಒಳಪಡಿಸಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಇನ್ನು ಸೋಂಕು ಹೆಚ್ಚಿರುವ ಆರು ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಆಗಮಿಸುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಲಾಗುವುದು. ಈ ವೇಳೆ ಅವರ ಮೇಲೆ ಸ್ಥಳೀಯ ಆರೋಗ್ಯ ಸಿಬ್ಬಂದಿ ನಿಗಾ ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಸೋಂಕು ಹೆಚ್ಚಿರುವ ರಾಜ್ಯಗಳಿಂದ ಬಂದ ಗರ್ಭಿಣಿಯರು, 80 ವರ್ಷ ಮೇಲ್ಪಟ್ಟವೃದ್ಧರು, 10 ವರ್ಷದೊಳಗಿನ ಮಕ್ಕಳು, ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರು, ವೈದ್ಯಕೀಯ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆ ಸಿಬ್ಬಂದಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ಇವರು ಹದಿನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ