ಬೊಮ್ಮಾಯಿ ಮಿಠಾಯಿ; ಆರೋಗ್ಯ, ಕೃಷಿ, ಶಿಕ್ಷಣ, ನೀರಾವರಿ ವಲಯಕ್ಕೆ ಸಿಹಿ

ರೈತರು, ಗೋವು, ವಿದ್ಯಾರ್ಥಿಗಳಿಗೆ ಕೊಡುಗೆ; ಅನುದಾನ ಕಡಿಮೆಯಾದರೂ ಭರಪೂರ ಹೊಸ ಘೋಷಣೆ

Team Udayavani, Mar 5, 2022, 6:15 AM IST

ಬೊಮ್ಮಾಯಿ ಮಿಠಾಯಿ; ಆರೋಗ್ಯ, ಕೃಷಿ, ಶಿಕ್ಷಣ, ನೀರಾವರಿ ವಲಯಕ್ಕೆ ಸಿಹಿ

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರದಡಿ ಆರು ವಲಯಗಳ ವಿಂಗಡಿಸಿ ಕೃಷಿ, ಆರೋಗ್ಯ, ಶಿಕ್ಷಣ, ನೀರಾವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಒತ್ತು ನೀಡುವ ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕ ಭಾಗಕ್ಕೆ ತುಸು ಹೆಚ್ಚಾಗಿಯೇ ಪ್ರೀತಿ ತೋರಿಸಿದ್ದಾರೆ.

ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದು ಇವುಗಳನ್ನು ಆದ್ಯತಾ ವಲಯಗಳಾಗಿ ಪರಿಗಣಿಸಿ ಹೆಚ್ಚಿನ ಅನುದಾನ ಒದಗಿಸಿದ್ದು, ಮೇಕೆದಾಟು, ಎತ್ತಿನಹೊಳೆ, ಭದ್ರಾ, ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗಳಿಗೆ ಹಣಕಾಸು ನಿಗದಿ ಮಾಡಿ ಕಾಂಗ್ರೆಸ್‌ ಹೋರಾಟಕ್ಕೆ ಬ್ರೇಕ್‌ ಹಾಕುವ ಪ್ರಯತ್ನ ಮಾಡಿದ್ದಾರೆ.
ಗೋವು ದತ್ತು ಪಡೆಯುವ ಪುಣ್ಯಕೋಟಿ, ಗೋ ಉತ್ಪನ್ನಗಳ ಮಾರುಕಟ್ಟೆಗೆ ಗೋ ಮಾತಾ ಸಹಕಾರ ಸಂಘ, ಹಾಲು ಉತ್ಪಾದಕರಿಗೆ ಸಾಲ ನೀಡಲು ಕ್ಷೀರ ಸಹಕಾರ ಬ್ಯಾಂಕ್‌, ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಗುಂಪು ರಚನೆ, ಯಂತ್ರೋಪಕರಣ ಬಳಕೆ ಮಾಡುವ ರೈತರಿಗೆ ಸಬ್ಸಿಡಿ ನೀಡುವ ರೈತ ಶಕ್ತಿಯಂತಹ ಹೊಸ ಯೋಜನೆ ಪ್ರಕಟಿಸಿ ಚೊಚ್ಚಲ ಬಜೆಟ್‌ನಲ್ಲೇ ಸೈ ಎನಿಸಿಕೊಂಡಿದ್ದಾರೆ.

ಎಲ್ಲರಿಗೂ ಆರೋಗ್ಯ ಎಲ್ಲಡೆಯೂ ಆರೋಗ್ಯ ಘೋಷಣೆಯಡಿ ರಾಜ್ಯದ ಪ್ರಮುಖ ನಗರಗಳಲ್ಲಿ 438 ಕ್ಲಿನಿಕ್‌ಗಳ ಸ್ಥಾಪನೆ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ 500 ಕೋಟಿ ರೂ. ಆನುದಾನ ನೀಡಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ.

ಅನುಗ್ರಹ ಯೋಜನೆಯ ಮೊತ್ತ 3500 ರೂ.ಗೆ ಏರಿಕೆ, ಕುರಿಗಾಹಿಗಳಿಗೆ ಐದು ಲಕ್ಷ ರೂ. ವಿಮೆ, ಹಿಂದುಳಿದ ವರ್ಗದವರ ಕಲ್ಯಾಣಕ್ಕೆ 400 ಕೋಟಿ ರೂ.ಆಶಾ ಕಾರ್ಯಕರ್ತೆ ಯರು ಹಾಗೂ ಗ್ರಾಮ ಸಹಾಯಕರಿಗೆ 1 ಸಾವಿರ ರೂ.ಗೌರವ ಧನ ಹೆಚ್ಚಳ, ವಿಚ್ಛೇದಿತ ಮಹಿಳೆಯರ ಮಾಶಾಸನ 600 ರಿಂದ 800 ರೂ. ಗೆ ಹೆಚ್ಚಳ ಮೂಲಕ ಎಲ್ಲ ವರ್ಗದವರ ಕಲ್ಯಾಣಕ್ಕೆ ಒತ್ತು ನೀಡಿದ್ದಾರೆ. ಬಹುಚರ್ಚಿತ ವಿಷಯವಾಗಿದ್ದ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸುವ ಕುರಿತು ಬಜೆಟ್‌ನಲ್ಲೇ ಪ್ರಸ್ತಾಪಿಸಿ ಅದಕ್ಕಾಗಿ ವಿಶೇಷ ಯೋಜನೆ ರೂಪಿಸುವುದಾಗಿಯೂ ಪ್ರಕಟಿಸಿದ್ದಾರೆ. ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಈ ಹಿಂದೆ ಆರಂಭಿಸಿದ್ದ ಯಶಸ್ವಿನಿ ಯೋಜನೆ ಪರಿಷ್ಕೃತ ರೂಪದಲ್ಲಿ ಮರು ಜಾರಿಗೊಳಿಸುವುದಾಗಿಯೂ ಘೋಷಿಸಿ ಅದಕ್ಕಾಗಿ 300 ಕೊಟಿ ರೂ. ಮೀಸಲಿಟ್ಟಿದ್ದಾರೆ.

ಮಹಿಳಾ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ., ಮಕ್ಕಳ ಅಭಿವೃದ್ದಿಗೆ 40,944 ಕೋಟಿ ರೂ. ಎಸ್‌ಸಿಪಿ ಟಿಎಸ್‌ಪಿ ಗೆ 28,234 ಕೋಟಿ ರೂ. ಆರೋಗ್ಯ ಮತ್ತು ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ 6,329 ಕೋಟಿ ರೂ. ಅನುದಾನ ಘೋಷಿಸಿ ದ್ದಾರೆ.ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ದಿ ಘಟಕ-2 57 ತಾಲೂಕುಗಳಲ್ಲಿ 642 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸುವುದಾಗಿ ತಿಳಿಸ ಲಾಗಿದ್ದು,ಬಳ್ಳಾರಿಯ ಹಗರಿಬೊಮ್ಮನಹಳ್ಳಿ, ಬೆಳಗಾವಿಯ ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಮೆಗಾಡೈರಿ, ಶಿವಮೊಗ್ಗ, ದಾವಣಗೆರೆ, ಚಿತ್ರುದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಬಗ್ಗೆ ಪ್ರಸ್ತಾಪಿಸಿದ್ದಾರೆ.

ನೀರಾವರಿಗೆ 14 ಸಾವಿರ ಕೋ.ರೂ.
ಕೃಷ್ಣಾ ಮೇಲ್ದಂಡೆ ಮೂರನೇ ಹಂತಕ್ಕೆ 5000 ಕೋಟಿ ರೂ., ಕಳಸಾ-ಬಂಡೂರಿ ನಾಲಾ ಯೋಜನೆಗೆ 1 ಸಾವಿರ ಕೋಟಿ ರೂ., ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ. ಮೇಕೆದಾಟು ಯೋಜನೆಗೆ 1 ಸಾವಿರ ಕೊಟಿ ರೂ., ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ನೀಗಿಸಲು ನವಲೆಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ 1ಸಾವಿರ ಕೋಟಿ ರೂ. ಒದಗಿಸಿ 2021-22 ನೇ ಸಾಲಿನಲ್ಲಿ ಆನುಮೋದಿಸಿದ 8,774 ಕೋಟಿ ರೂ. ಹೊಸ ನೀರಾವರಿ ಯೋಜನೆಗಳಿಗೆ ರೂಪು ರೇಷೆ ಸಿದ್ಧಪಡಿಸಲಾಗು ವುದು. ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ 35,319 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದ್ದಾರೆ.

ಆಯ್ದ ಮಹಿಳಾ ಸ್ವ ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು ನೀಡಲು 500 ಕೋಟಿ ರೂ. ಅನುದಾನ, ಎಸ್‌ಸಿ-ಎಸ್‌ಟಿ ಗುಂಪುಗಳ 3.9 ಲಕ್ಷ ಮಹಿಳೆಯರಿಗೆ ಅನುಕೂಲ ಕಲ್ಪಿಸುವುದು. ಮಹಿಳಾ ಸ್ವ ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ದೊಗಿಸಲು ಏಕಗವಾಕ್ಷಿ ಯೋಜನೆ, ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್‌ ಮೌಲ್ಯವರ್ಧನೆ, ಪ್ಯಾಕಿಂಗಘ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಆಸ್ಮಿತೆ ಹೆಸರಿನ ಮಾರಾಟ ಮೇಳ ಆಯೋಜನೆ ಘೋಷಿಸಲಾಗಿದೆ.

ಪ್ರಮುಖ ಘೋಷಣೆಗಳು
-ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ಸ್ಥಾಪನೆ
-ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್‌ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
-ಗೋ ಉತ್ಪನ್ನಗಳ ಮಾರಾಟಕ್ಕಾಗಿ ರಾಜ್ಯಾ ದ್ಯಂತ ಗೋ ಮಾತಾ ಸಹಕಾರ ಸಂಘ ಸ್ಥಾಪನೆ
-ಬೆಳಗಾವಿಯಲ್ಲಿ ಕಿದ್ವಾಯಿ ಪಾದ್ರೇಶಿಕ ಕ್ಯಾನ್ಸರ್‌ ಕೇಂದ್ರ, ಹಾನಗಲ್‌ನಲ್ಲಿ ಮಾವು ಸಂÓR‌ರಣಾ ಘಟಕೆ
-ಚಿತ್ರದುರ್ಗಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಆಯುಷ್‌ ವಿಭಾಗ‌
-ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀನಾರಾಯಣ ಗುರು ವಸತಿ ಶಾಲೆ ಪ್ರಾರಂಭ
-ರಾಜ್ಯದಿಂದ ಕಾಶಿ ಯಾತ್ರೆ ಕೈಗೊ ಳ್ಳುವ 30 ಸಾವಿರ ಮಂದಿಗೆ ಸರ್ಕಾ ರ ದಿಂದ ತಲಾ 5 ಸಾವಿರ ರೂ.
-ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನೂತನ ಜವಳಿ ಪಾರ್ಕ್‌ ಪ್ರಾರಂಭ
-ವಾರ್ಷಿಕವಾಗಿ 125 ಕನ್ನಡ ಚಿತ್ರಗಳಿಗೆ ಸಹಾಯಧನವನ್ನು 200 ಕನ್ನಡ ಚಿತ್ರಗಳಿಗೆ ಏರಿಕೆ ಮಾಡುವುದು.
-ಬೆಂಗಳೂರಿನ ನಾಲ್ಕು ಭಾಗಗಳಲ್ಲಿ 500 ಹಾಸಿಗೆಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ
-ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಪ್ರವಾಸಿಗೈಡ್‌ಗಳ ಗೌರವಧನ ಹೆಚ್ಚಳ
-ಪಡಿತರ 5 ಕೆಜಿ ಅಕ್ಕಿ ಜತೆಗೆ 1 ಕೆಜಿ ರಾಗಿ/ಜೋಳ

ಸಿಎಂ ಪಂಚಸೂತ್ರ
1. ರಾಜ್ಯದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಮಾಡುವುದು.
2. ದುರ್ಬಲ ವರ್ಗದವರ ರಕ್ಷಣೆ ಮತ್ತು ಏಳಿಗೆಗೆ ಒತ್ತು ನೀಡುವುದು. ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಕಾರ್ಯಕ್ರಮ ರೂಪಿಸಿ ಆರೋಗ್ಯ ಸೇವೆ ಒದಗಿಸುವುದು.
3. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ವಿವಿಧ ವಲಯಗಳ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ ಮಾಡುವುದು
4. ಕೃಷಿ ಕೈಗಾರಿಕೆ ಹಾಗೂ ಸೇವಾ ವಲಯದಲ್ಲಿ ಅಭಿವೃದ್ಧಿ ಸಾಧಿಸುವುದು.
5. ಹೊಸ ಚಿಂತನೆ, ಹೊಸ ಚೈತನ್ಯ,ಹೊಸ ಮುನ್ನೋಟದೊಂದಿಗೆ ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಮಾಡುವುದು.

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.