ಸ್ನೇಹಿತರ ಜತೆ ಪ್ರವಾಸ ತೆರಳಿ ಮರಳಿದ ಯುವಕ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ  

Team Udayavani, May 9, 2022, 5:54 PM IST

ಸ್ನೇಹಿತರ ಜತೆ ಪ್ರವಾಸ ತೆರಳಿ ಮರಳಿದ ಯುವಕ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ  

ಸಾಂದರ್ಭಿಕ ಚಿತ್ರ.

ಉಪ್ಪಳ: ಸ್ನೇಹಿತರ ಜತೆ ಪ್ರವಾಸಕ್ಕೆ ತೆರಳಿ ಮೇ 8ರಂದು ಮಧ್ಯರಾತ್ರಿ ಮನೆಗೆ ತಲುಪಿದ ಯುವಕನೋರ್ವ ಸೋಮವಾರ ಮುಂಜಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಉಪ್ಪಳ ಸಮೀಪದ ಮುಳಿಂಜ ಮಹಾನಗರ ನಿವಾಸಿ ಸುಧೀರ್‌ (38) ಮೃತಪಟ್ಟ ಯುವಕನಾಗಿದ್ದಾರೆ. ಇವರು ಕೈಕಂಬದಲ್ಲಿ ಅಲ್ಯುಮಿನಿಯಂ ಶೋರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಈ ಸಂಸ್ಥೆಯ ಇತರ ಸುಮಾರು 13 ಮಂದಿ ಕಾರ್ಮಿಕರ ಜೊತೆ ಶನಿವಾರ ಸಂಜೆ ಸುಧೀರ್‌ ವಯನಾಡಿಗೆ ಪ್ರವಾಸಕ್ಕೆ ತೆರಳಿದ್ದರು.

ಮೇ 8 ರಂದು ಮಧ್ಯರಾತ್ರಿ 1.30ರ ವೇಳೆ ಜೊತೆಯಲ್ಲಿದ್ದವರು ಮನೆಗೆ ಬಿಟ್ಟಿದ್ದರು. ಮಂಚದಲ್ಲಿ ನಿದ್ದೆ ಮಾಡಿದ್ದ ಸುಧೀರ್‌ ಸೋಮವಾರ ಬೆಳಗ್ಗೆ ಮಂಚದಿಂದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.

ಮನೆಯವರು ಎಬ್ಬಿಸಿದರೂ ಎಚ್ಚರಗೊಳ್ಳದ ಹಿನ್ನೆಲೆಯಲ್ಲಿ ಕೂಡಲೇ ಉಪ್ಪಳದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ಮೃತಪಟ್ಟಿರುವುದು ತಿಳಿದು ಬಂತು.

ದಿಢೀರ್‌ ಸಾವಿನ ಬಗ್ಗೆ ಮನೆಯವರು ಶಂಕೆ ವ್ಯಕ್ತಪಡಿಸಿದ್ದು, ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.

ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಇದನ್ನೂ ಓದಿ:ಬಲ್ಲಾಳ್‌ಭಾಗ್‌ ಸರಣಿ ಅಪಘಾತ ಪ್ರಕರಣ: ಚಾಲಕನ ಪರೀಕ್ಷಾ ವರದಿ ನೆಗೆಟಿವ್‌: ಎನ್‌.ಶಶಿಕುಮಾರ್‌

ಸ್ಕೂಟರ್‌ ಅಪಘಾತ: ಗಾಯಾಳು ಮಹಿಳೆ ಸಾವು
ಕಾಸರಗೋಡು: ಸ್ಕೂಟರ್‌ ಮಗುಚಿ ಬಿದ್ದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೂಡ್ಲು ವಿವೇಕಾನಂದನಗರ ಗುರುಕೃಪಾದ ಕೆ. ಪುಷ್ಪಲತಾ (42) ಸಾವಿಗೀಡಾದರು.

ಇವರು ತಲಪಾಡಿ ಆಯುರ್ವೇದ ಮೆಡಿಕಲ್‌ ಕಾಲೇಜಿನಲ್ಲಿ ಲ್ಯಾಬ್‌ ಟೆಕ್ನೀಶಿಯನ್‌ ಆಗಿದ್ದರು. ಮೇ 2ರಂದು ವಿವೇಕಾನಂದ ನಗರದಲ್ಲಿ ಅಪಘಾತ ಸಂಭವಿಸಿತ್ತು.

ಟಾಪ್ ನ್ಯೂಸ್

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.