ಕಾಸರಗೋಡು: 7 ಪ್ರಕರಣ ದೃಢ
Team Udayavani, Jun 21, 2020, 7:24 AM IST
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 7 ಮಂದಿಗೆ ಕೋವಿಡ್ ದೃಢವಾಗಿದೆ ಎಂದು ಡಿಎಚ್ಒ ಡಾ| ಎ.ವಿ. ರಾಮದಾಸ್ ತಿಳಿಸಿದ್ದಾರೆ.
ಕೊಲ್ಲಿ ರಾಷ್ಟ್ರಗಳಿಂದ ಆಗಮಿಸಿದ ಕಾರಡ್ಕ, ಅಜಾನೂರು, ಪಳ್ಳಿಕೆರೆ, ಚೆಂಗಳ, ಮಂಗಲ್ಪಾಡಿ, ವರ್ಕಾಡಿ ನಿವಾಸಿಗಳಿಗೆ ಮತ್ತು ಮಹಾರಾಷ್ಟ್ರದಿಂದ ಬಂದ ಮಂಗಲ್ಪಾಡಿ ನಿವಾಸಿಗೆ ಸೋಂಕು ಬಾಧಿಸಿದೆ. ಕಾಸರಗೋಡು ಮೆಡಿಕಲ್ ಕಾಲೇಜು ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ವರ್ಷದ ಕಾಂಞಂಗಾಡ್ ನಿವಾಸಿ, ಕಾಂಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 51 ವರ್ಷದ ಮಂಗಲ್ಪಾಡಿ ನಿವಾಸಿ ಗುಣಮುಖರಾಗಿದ್ದಾರೆ.
ಕೇರಳದಲ್ಲಿ 127ಮಂದಿಗೆ ಸೋಂಕು
ಕೇರಳದಲ್ಲಿ ಶನಿವಾರ 127 ಮಂದಿಯಲ್ಲಿ ಕೋವಿಡ್ ದೃಢವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಇದೇ ವೇಳೆ 57 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಶನಿವಾರ ಸೋಂಕು ಶಂಕಿತ 258 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
219 ಮಂದಿಯ ವಿರುದ್ಧ ಕೇಸು
ಜಿಲ್ಲೆಯಲ್ಲಿ ಶನಿವಾರ ಮಾಸ್ಕ್ ಧರಿಸದ 219 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ