ಕೋಟ: ಪೊಲೀಸ್ ಬಂಧನಕ್ಕೆ ಹೆದರಿ ಆತ್ಮಹತ್ಯೆ
Team Udayavani, Feb 4, 2023, 1:12 AM IST
ಕೋಟ: ಹಲ್ಲೆ ನಡೆಸಿದಕ್ಕಾಗಿ ಪೊಲೀಸರು ಬಂಧಿಸಬಹುದೆಂದು ಹೆದರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೇಳೂರಿನಲ್ಲಿ ಫೆ. 2ರಂದು ಸಂಭವಿಸಿದೆ. ಸ್ಥಳೀಯ ನಿವಾಸಿ ಗುರುವ (63) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಈತ ತನ್ನ ಅಳಿಯ ರಘುರಾಮ ಅವರ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದು ಗಾಯ ಮಾಡಿದ್ದು ರಘುರಾಮ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ತನ್ನ ಮೇಲೆ ಪೊಲೀಸ್ ಕೇಸ್ ಆಗುತ್ತದೆ, ಪೊಲೀಸರು ಬಂಧಿಸುತ್ತಾರೆ ಎನ್ನುವ ಭಯದಿಂದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಆತ್ಮಹತ್ಯೆ
ಕುಂದಾಪುರ: ಕಂದಾವರ ಗ್ರಾಮದ ಮೂಡ್ಲಕಟ್ಟೆಯ ಸೌಕೂರು ಮನೆಯ ನಿವಾಸಿ ಜಗದೀಶ ಅವರ ಪತ್ನಿ ಜಯಂತಿ (42) ಫೆ. 2ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು 2 ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲು ತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎಂದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಸಾವು
ಬ್ರಹ್ಮಾವರ: ಉಪ್ಪೂರು ಅಮ್ಮುಂಜೆಯ ಪೀಟರ್ ಡಿ’ಸೋಜಾ (62) ಗುರುವಾರ ಮೃತಪಟ್ಟಿದ್ದಾರೆ. ಈ ಹಿಂದೆ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದಿದ್ದು, ಗುರುವಾರ ವಿಪರೀತ ಎದೆ ನೋವು ಕಾಣಿಸಿಕೊಂಡು ತತ್‌ಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.