ಮಹಾ ಮಳೆಗೆ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆ
Team Udayavani, Jul 29, 2019, 5:12 AM IST
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ನದಿ ನೀರಿನ ಮಟ್ಟದಲ್ಲಿ ಡಿಢೀರ್ ಏರಿಕೆಯಾಗಿ ಕಾರದಗಾ-ಭೋಜ ಸೇತುವೆ ಮುಳುಗಡೆಯಾಗಿರುವುದು.
ಬೆಂಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕೊಲ್ಲೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 8 ಸೆಂ.ಮೀ.ಮಳೆ ಸುರಿಯಿತು.
ಕಾರವಾರ, ಸಿದ್ದಾಪುರ, ಶಿರಸಿ, ಯಲ್ಲಾಪುರ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಕುಂದಾಪುರ – ಕೊಲ್ಲೂರು ಮಾರ್ಗವಾಗಿ ಸಂಪರ್ಕಿಸುವ ನಾಗೋಡಿ ಘಾಟಿ ಭಾರೀ ಮಳೆಗೆ ಅಲ್ಲಲ್ಲಿ ಕುಸಿದಿದೆ. ಅಲ್ಲದೆ, ಭಾನುವಾರ ಮುಂಜಾನೆಯಿಂದ ಪಶ್ಷಿಮ ದಿಕ್ಕಿನಿಂದ ವೇಗವಾಗಿ ಗಾಳಿ ಬೀಸುತ್ತಿದ್ದು, ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿದೆ.
ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ