ಕೆಆರ್‌ಎಸ್‌ ಭದ್ರತೆ ವಿಚಾರದಲ್ಲಿ ರಾಜಕೀಯ ಬೇಡ

Team Udayavani, Jul 7, 2021, 6:30 AM IST

ಕೆಆರ್‌ಎಸ್‌ ಭದ್ರತೆ ವಿಚಾರದಲ್ಲಿ ರಾಜಕೀಯ ಬೇಡ

ಮಂಡ್ಯ ಜಿಲ್ಲೆಯ ವಿಶ್ವ ವಿಖ್ಯಾತ ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದ್ದು, ಸುರಕ್ಷತೆ ಇಲ್ಲ ಎಂಬ ವಿಚಾರ ಈಗ ರಾಜಕೀಯ ವಾಕ್ಸ ಮರಕ್ಕೆ ವೇದಿಕೆಯಾಗಿದೆ. ಪ್ರಸ್ತುತ ಬೆಳವಣಿಗೆ ಕಾವೇರಿ ಕೊಳ್ಳದ ರೈತರ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಗಂಭೀರವಾಗಿ ತೆಗೆದು­ಕೊಳ್ಳುವ ಬದಲು ರಾಜಕೀಯ ಕೆಸರೆರಚಾಟ ಮಾಡುತ್ತಿರುವುದು ದುರಂತವೇ ಸರಿ.

ಕೆಆರ್‌ಎಸ್‌ ಜಲಾಶಯದ ನೀರನ್ನು ನಂಬಿ ಮಂಡ್ಯ ಜಿಲ್ಲೆ ರೈತರು ಎರಡು ಬೆಳೆ ಬೆಳೆಯುತ್ತಿದ್ದಾರೆ. ಮೈಸೂರು, ಮಂಡ್ಯ, ರಾಮನಗರ ಹಾಗೂ ಬೆಂಗಳೂರು ನಗರಗಳಿಗೆ ಕುಡಿಯುವ ನೀರಿನ ಮೂಲವಾಗಿದೆ. ಕೆಆರ್‌ಎಸ್‌ ದೇಶ ಹಾಗೂ ರಾಜ್ಯದ ಆಸ್ತಿ. ಇದನ್ನೇ ನಂಬಿಕೊಂಡು ಕೋಟ್ಯಂತರ ಜನರು ಜೀವನ ನಡೆಸುತ್ತಿದ್ದಾರೆ. ಅಣೆಕಟ್ಟಿನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ಒಂದೇ ಒಂದು ಹೇಳಿಕೆ ರೈತರು ಜೀವ ಕೈಯಲ್ಲಿ ಹಿಡಿದು ವ್ಯವಸಾಯ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಸಂಕಷ್ಟದ ಈ ದಿನಗಳಲ್ಲಿ ಜಲಾಶಯದ ಹಿತಕಾಯಬೇಕಾದ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದಿನಕ್ಕೊಂದು ಹೇಳಿಕೆ ನೀಡುತ್ತಾ ರಾಜಕೀಯ ರಾಡಿ ಮಾಡುತ್ತಿರುವುದು ಬೇಸರದ ಸಂಗತಿ. ರಾಜಕಾರಣ ಎತ್ತ ಸಾಗಿದೆ ಎಂಬುದಕ್ಕೆ ಕೈ ಗನ್ನಡಿ ಆಗಿದೆ.
2018ರ ಸೆಪ್ಟಂಬರ್‌ 25ರಂದು ಕೆಆರ್‌ಎಸ್‌ ಸುತ್ತಮುತ್ತ ಕೇಳಿ ಬಂದ ಭಾರೀ ಸ್ಫೋಟದಿಂದ ಆತಂಕ ಉಂಟಾಗಿತ್ತು. ಇದನ್ನು ಪರಿಶೀಲಿಸಿದಾಗ ಕೆಆರ್‌ಎಸ್‌ ಸಮೀಪವಿರುವ ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ ದಾಖಲಾಗಿತ್ತು. ಇದು ಗಣಿ ಸ್ಫೋಟದಿಂದಲೇ ಬಂದಿರಬಹುದು. ಈ ಪ್ರದೇಶದಲ್ಲಿ ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಸಂಭವಿಸಬಹುದು ಎಂದು ತಜ್ಞರು ಎಚ್ಚರಿಸಿದ್ದರು.

ಜಲಾಶಯದ ಸುತ್ತಮುತ್ತ ಗಣಿಗಾರಿಕೆಯಿಂದ ಬಿರುಕು ಕಾಣಿಸಿ ಕೊಂಡಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇ ಧಿಸಬೇಕು ಎಂದು ಸಂಸದೆ ಸುಮಲತಾ ಹೇಳಿಕೆ ನೀಡಿದ್ದರು. ಈ ಹೇಳಿಕೆಯೇ ಈಗ ರಾಜ ಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಇದಕ್ಕೂ ಮೊದಲು ಗಣಿಗಾರಿಕೆ ವಿರುದ್ಧ ಮಾತನಾಡಿದ್ದ ಸುಮಲತಾ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಜೆಡಿಎಸ್‌ ಮುಖಂಡರು ಕಿಡಿ ಕಾರಿದ್ದರು. ಈಗ ಇದರ ಜತೆಗೆ ಎಚ್‌. ಡಿ.ಕುಮಾರಸ್ವಾಮಿ ಹೇಳಿಕೆ ವಿವಾದ ಸೃಷ್ಟಿಸಿದೆ.

ಜಿಲ್ಲೆಯಲ್ಲಿ ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಜಲಾಶಯಕ್ಕೂ ತೊಂದರೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಸಂಸ್ಥೆ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾಂಡವ ಪುರದ ಬೇಬಿಬೆಟ್ಟ ಸೇರಿದಂತೆ ಶ್ರೀರಂಗಪಟ್ಟಣದ ಸುತ್ತಮುತ್ತ ನಡೆಯು ತ್ತಿರುವ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಜಿಲ್ಲೆಯ ಜನಪ್ರತಿನಿಧಿಗಳು ಪ್ರಯತ್ನಿಸಬೇಕಾಗಿದೆ.

ನೀರಿನ ಲಭ್ಯತೆ ಕ್ಷೀಣಿಸುತ್ತಿರುವುದು, ಮೇಕೆದಾಟು ಯೋಜನೆ ಹಾಗೂ ಜಿಲ್ಲೆಯ ವಿವಿಧ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸರಕಾರ ಮುಂದಾದಾಗ ತಮಿಳುನಾಡು ಕ್ಯಾತೆ ತೆಗೆಯುತ್ತಲೇ ಬಂದಿದೆ. ನೀರು ಹಂಚಿಕೆಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ವಿವಾದ ಮುಂದುವರಿದಿದೆ. ಇಂಥ ಸಂದರ್ಭದಲ್ಲಿ ತಮಿಳುನಾಡು ರಾಜ್ಯದ ವಿರುದ್ಧ ಹೋರಾಟ ನಡೆಸಬೇಕಾದ ನಾಯಕರು ರಾಜ್ಯದಲ್ಲಿಯೇ ಕಿತ್ತಾಡಿದರೇ ಅನ್ಯರಿಗೆ ಲಾಭವಾಗುತ್ತದೆ ಎಂಬ ಎಚ್ಚರಿಕೆ ರಾಜಕೀಯ ಮುಖಂಡರಿಗೆ ಇರಬೇಕು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.