ಸಂಶೋಧನಾ ಕಾರ್ಯಕ್ಕೆ ಕೆಎಸ್‌ಒಯು ಮರುಚಾಲನೆ

ಸಂಶೋಧನಾ ಕಾರ್ಯ, ಕೆಎಸ್‌ಒಯು, ಮರುಚಾಲನೆ,

Team Udayavani, May 19, 2019, 3:07 AM IST

samshodhana

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 2012ಕ್ಕಿಂತ ಮೊದಲು ಪಿಎಚ್‌.ಡಿಗೆ ನೋಂದಣಿ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಸುಮಾರು ಆರೇಳು ವರ್ಷಗಳ ನಂತರ ಸಂಶೋಧನಾ ಪ್ರಕ್ರಿಯೆ ಪೂರ್ಣಗೊಳಿಸಲು ವಿಶ್ವವಿದ್ಯಾಲಯ ಅನುವು ಮಾಡಿಕೊಡುತ್ತಿದೆ.

ವಿಶ್ವವಿದ್ಯಾಲಯ ಅನುದಾನ ಆಯೋಗವು ಮೈಸೂರಿನಲ್ಲಿರುವ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದ ಮಾನ್ಯತೆ ರದ್ದು ಮಾಡಿದ್ದರಿಂದ 2012ರ ಮೊದಲು ಪಿಎಚ್‌.ಡಿಗೆ ಸೇರಿದ್ದ ನೂರಾರು ಸಂಶೋಧಕರಿಗೆ ಪಿಎಚ್‌.ಡಿ ಕಾರ್ಯ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ.

ಅನೇಕರು ಪಿಎಚ್‌.ಡಿಗೆ ಅರ್ಜಿ ಸಲ್ಲಿಸಿ, ಸಂಶೋಧನೆಯ ವಿಷಯವನ್ನು ಸಲ್ಲಿಕೆ ಮಾಡಿದ್ದರು. ಇನ್ನು ಹಲವರು ಸಂಶೋಧನಾ ಕಾರ್ಯ ಆರಂಭಿಸಿ, ಹಲವು ಮಾಹಿತಿಗಳನ್ನು ಮಾರ್ಗದರ್ಶಕರೊಂದಿಗೆ ಚರ್ಚೆ ಕೂಡ ಮಾಡಿದ್ದರು. ಮತ್ತೆ ಕೆಲವರು ಸಂಶೋಧನಾ ಕಾರ್ಯವನ್ನು ಸಂಪೂರ್ಣವಾಗಿ ಮುಗಿಸಿ, ಪ್ರೌಢಪ್ರಬಂಧ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇವರ್ಯಾರಿಗೂ ಪ್ರೌಢಪ್ರಬಂಧ ಮಂಡಿಸಲು ಸಾಧ್ಯವಾಗಿರಲಿಲ್ಲ.

ಮಾನ್ಯತೆ ರದ್ದಾಗಿರುವ ಕಾರಣದಿಂದ ಸುಮಾರು 150ಕ್ಕೂ ಹೆಚ್ಚು ಸಂಶೋಧಕರಿಗೆ ಪಿಎಚ್‌.ಡಿ ಪೂರೈಸಲು ಸಾಧ್ಯವಾಗಿರಲಿಲ್ಲ. ಆ ಎಲ್ಲ ಅಭ್ಯರ್ಥಿಗಳಿಗೆ ಪಿಎಚ್‌.ಡಿ ಕಾರ್ಯವನ್ನು ಪೂರ್ಣಗೊಳಿಸಲು ಕೆಎಸ್‌ಒಯು ಅನುವು ಮಾಡಿಕೊಟ್ಟಿದೆ. ಅಲ್ಲದೆ, ಈ ಹಿಂದೆ ಪಿಎಚ್‌.ಡಿ ಕಾರ್ಯವನ್ನು ಎಲ್ಲಿಗೆ ನಿಲ್ಲಿಸಿದ್ದರೋ ಅಲ್ಲಿಂದಲೇ ಮುಂದುವರಿಸಲು ಅವಕಾಶ ನೀಡಿದೆ.

ಇದರ ಜತೆಗೆ ಹೊಸ ಅಭ್ಯರ್ಥಿಗಳು ಕೂಡ ಪಿಎಚ್‌.ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಮೇ 30ರವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವಿಶ್ವವಿದ್ಯಾಲಯದಲ್ಲಿ ಯಾವ ಮಾದರಿಯಲ್ಲಿ ಪಿಎಚ್‌.ಡಿ ಸಂಶೋಧನೆಗಳು ನಡೆಯುತ್ತವೋ ಅದೇ ಮಾದರಿಯಲ್ಲಿ ಕೆಎಸ್‌ಒಯುನಲ್ಲಿ ನಡೆಯುಲಿದೆ. ಪ್ರವೇಶ ಪರೀಕ್ಷೆ, ಕೋರ್ಸ್‌ ವರ್ಕ್‌ ಇತ್ಯಾದಿ ಎಲ್ಲವೂ ಇರಲಿದೆ.

ಕನ್ನಡ ಅರ್ಥಶಾಸ್ತ್ರ, ವಾಣಿಜ್ಯ ಶಾಸ್ತ್ರ, ಶಿಕ್ಷಣ, ಇಂಗ್ಲಿಷ್‌, ಜೀವ ರಸಾಯನಶಾಸ್ತ್ರ, ಪತ್ರಿಕೋದ್ಯಮ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಸೇರಿದಂತೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಒಟ್ಟು 20 ವಿಷಯಗಳಲ್ಲಿ ಪಿಎಚ್‌.ಡಿ ಪಡೆಯಲು ಅವಕಾಶ ಇದೆ ಎಂದು ಕೆಎಸ್‌ಒಯು ಮೂಲಗಳು ತಿಳಿಸಿವೆ.

2011-12ರ ವಿದ್ಯಾರ್ಥಿಗಳಿಗೆ ಈಗ ಪರೀಕ್ಷೆ: 2011-12 ಮತ್ತು 2012-13ನೇ ಸಾಲಿನಲ್ಲಿ ದಾಖಲೆ ಪಡೆದಿರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಪರೀಕ್ಷೆ ನಡೆಸಿರಲಿಲ್ಲ. ಯುಜಿಸಿ ಮಾನ್ಯತೆ ನವೀಕರಿಸದೇ ಇರುವುದರಿಂದ ವಿಶ್ವವಿದ್ಯಾಲಯಕ್ಕೆ ಪರೀಕ್ಷೆ ಮಾಡಲು ಸಾಧ್ಯವಾಗಿರಲಿಲ್ಲ. 2011-12 ಹಾಗೂ 2012-13ನೇ ಸಾಲಿನಲ್ಲಿ ಕೆಎಸ್‌ಒಯು ಸೇರಿದ ಸಾವಿರಾರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ.

ಹೀಗಾಗಿ, ವಿಶ್ವವಿದ್ಯಾಲಯವು 2011-12ನೇ ಸಾಲಿನಲ್ಲಿ ದಾಖಲಾತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೂ ಒಂದು ಅವಕಾಶ ಹಾಗೂ 2012-13ನೇ ಸಾಲಿನಲ್ಲಿ ದಾಖಲಾತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೂ ಎರಡು ಬಾರಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ವಿವಿ ಅಧಿಕಾರಿಗಳು ಮಾಹಿತಿ ನೀಡಿದರು.

ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿಗಳು: ಮಾನ್ಯತೆ ರದ್ದಾಗಿರುವುದರಿಂದ ಕೆಎಸ್‌ಒಯುನಲ್ಲಿ 2013-14 ಮತ್ತು 2014-15ರಲ್ಲಿ ಪದವಿ, ಸ್ನಾತಕೋತ್ತರ ಪದವಿಗೆ ದಾಖಲಾತಿ ಪಡೆದು ಪರೀಕ್ಷೆ ಬರೆದಿರುವ ಸುಮಾರು 95 ಸಾವಿರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಮಾನ್ಯತೆ ಇಲ್ಲದೆ ಪರೀಕ್ಷೆ ನೀಡಲಾಗಿದೆ ಎಂದು ಯುಜಿಸಿ ಕೂಡ ಈ ವಿದ್ಯಾರ್ಥಿಗಳ ಪದವಿಯನ್ನು ಸಿಂಧುಗೊಳಿಸಿರಲಿಲ್ಲ.

ಹೀಗಾಗಿ, ಈ ವಿದ್ಯಾರ್ಥಿಗಳ ಪರವಾಗಿ ವಿಶ್ವವಿದ್ಯಾಲಯವು ಯುಜಿಸಿ ಅಧಿಕಾರಿಗಳ ಜತೆ ನೇರ ಸಂಪರ್ಕ ಹೊಂದಿದ್ದು, ವಿದ್ಯಾರ್ಥಿಗಳಿಗೆ ಪದವಿ ಕೊಡಿಸುವ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದರೂ, ಇನ್ನೂ ಫ‌ಲ ಸಿಕ್ಕಿಲ್ಲ. ಹೀಗಾಗಿ, ಕೆಲವು ವಿದ್ಯಾರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದು, ವಿಶ್ವವಿದ್ಯಾಲಯ ಕೂಡ ಹೈಕೋರ್ಟ್‌ನಲ್ಲಿ ವಿದ್ಯಾರ್ಥಿಗಳ ಪರವಾಗಿ ಪ್ರಮಾಣ ಪತ್ರ ಸಲ್ಲಿಸಲು ನಿರ್ಧರಿಸಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 2012ರ ಮೊದಲು ಪಿಎಚ್‌.ಡಿಗೆ ಸೇರಿದ ಅಭ್ಯರ್ಥಿಗಳಿಗೆ ಪಿಎಚ್‌.ಡಿ ಪೂರೈಸಲು ಅವಕಾಶ ಮಾಡಿಕೊಟ್ಟಿದ್ದೇವೆ. 95 ಸಾವಿರ ವಿದ್ಯಾರ್ಥಿಗಳ ಪರವಾಗಿಯೇ ಹೈಕೋರ್ಟ್‌ನಲ್ಲಿ ಪ್ರಮಾಣಪತ್ರ ಸಲ್ಲಿಸಲು ನಿರ್ಧರಿಸಿದ್ದೇವೆ.
-ಪ್ರೊ.ಡಿ.ಶಿವಲಿಂಗಯ್ಯ, ಕುಲಪತಿ, ಕೆಎಸ್‌ಒಯು

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.