ಶಿಥಿಲಾವಸ್ಥೆಯಲ್ಲಿ ಕುಳಗೇರಿ ಸರ್ಕಾರಿ ಶಾಲೆ! ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಹಿಂದೇಟು

Team Udayavani, Sep 14, 2020, 3:36 PM IST

ಶಿಥಿಲಾವಸ್ಥೆಯಲ್ಲಿ ಕುಳಗೇರಿ ಸರ್ಕಾರಿ ಶಾಲೆ! ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಹಿಂದೇಟು

ಕುಳಗೇರಿ ಕ್ರಾಸ್‌: ಗ್ರಾಮದ ಬಸವ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ.

ಬಡವರು ಮತ್ತು ಮಧ್ಯಮ ವರ್ಗದ ಜನರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸರ್ಕಾರ ಗ್ರಾಮದಲ್ಲಿ 1ರಿಂದ 7ನೇ ತರಗತಿವರೆಗೂ ಶಾಲೆ ಆರಂಭ ಮಾಡಿದೆ. ಈ ಶಾಲೆಯಲ್ಲಿ ಓದುತ್ತಿರುವುದು 35 ವಿದ್ಯಾರ್ಥಿಗಳು ಮಾತ್ರ. ಮುಖ್ಯಶಿಕ್ಷಕಿ ಸೇರಿ 4 ಜನ ಸಿಬ್ಬಂದಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಂಪ್ಯೂಟರ್‌, ಪ್ಯಾನ್‌ ಇದ್ದರೂ ವಿದ್ಯುತ್‌ ವ್ಯವಸ್ಥೆಯಿಲ್ಲ. 5 ಗುಂಟೆ ಜಾಗದಲ್ಲಿ ಒಂದೇ ಕೊಠಡಿ ನಿರ್ಮಿಸಿ 1994ರಿಂದ ಆರಂಭಗೊಂಡ ಈ ಕನ್ನಡ ಶಾಲೆ ಹಂತ-ಹಂತವಾಗಿ ಮೇಲ್ದರ್ಜೆ ಗೇರಿದ್ದು, ಈಗ 6 ಕೊಠಡಿಗಳ ನೂತನ ಕಟ್ಟಡ ಹೊಂದಿದೆ. ಆದರೆ, ಎಲ್ಲ ಕಟ್ಟಡಗಳು ಸಂಪೂರ್ಣ ಕಳಪೆ ಕಾಮಗಾರಿಯಿಂದ ಕೂಡಿದ್ದು, ಕೊಠಡಿಗಳ ಮೇಲ್ಚಾವಣಿ ಉದುರಿ ಅಸ್ತಿ ಪಂಜರದಂತಾಗಿದೆ. ಅಲ್ಲದೇ ಕೆಲ ಕಟ್ಟಡ ನೆಲಕಚ್ಚಿವೆ.

ಪೋಷಕರ ಹಿಂದೇಟು: ಈ ಸರ್ಕಾರಿ ಶಾಲೆಯ ಸುತ್ತ ಸಾಕಷ್ಟು ಖಾಸಗಿ ಶಾಲೆಗಳು ತಲೆಎತ್ತಿವೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಓದಿಸಬೇಕು ಎನ್ನುವ ಉದ್ಧೇಶ ಪಾಲಕರಲ್ಲಿದೆ. ಈ ಶಾಲೆಯಲ್ಲಿನ ದುಸ್ಥಿತಿ ಕಂಡು ಅನಾಹುತಗಳಾದರೆ ನಮ್ಮ ಮಕ್ಕಳ ಗತಿಯೇನು ಎಂದು ಭಯಭೀತರಾದ ಪೋಷಕರು ಈ ಶಾಲೆಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ : ಅನಂತ್ ಕುಮಾರ್ ಹೆಗಡೆ ಸೇರಿ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢ

ಹೊಸ ಕಟ್ಟಡವಾದರೂ ಎಲ್ಲ ಕೊಠಡಿಗಳು ಶಿಥಿಲಾವಸ್ಥೆ ಕಂಡಿದ್ದರಿಂದ ಮಳೆ ಬಂದರೆ ಕಟ್ಟಡ ನೆಲಕಚ್ಚುವ ಆತಂಕ ಮಕ್ಕಳು ಹಾಗೂ ಪಾಲಕರಲ್ಲಿ ಕಾಡುತ್ತಿದೆ. ಪಠ್ಯಪುಸ್ತಕ, ಸಮವಸ್ತ್ರ, ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯ ನೀಡುತ್ತಿದ್ದರೂ ಅನೇಕ ಸರ್ಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ತಲುಪಿರುವುದು ದುರ್ದೈವದ ಸಂಗತಿ.

ಅಧಿಕಾರಿಗಳ ನಿರ್ಲಕ್ಷ್ಯ: ಈ ಶಾಲೆಯ ಶಿಕ್ಷಕರು ನಿರಂತರವಾಗಿ ಕಟ್ಟಡ ಬಿದ್ದ ಬಗ್ಗೆ, ಅವ್ಯವಸ್ಥೆ, ಸೌಲಭ್ಯದ ಕುರಿತು ಸಾಕಷ್ಟು ಬಾರಿ ಶಾಲೆಯ ಭಾವಚಿತ್ರ ಸಮೇತ ಅರ್ಜಿ ಬರೆದು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೂ ಅಧಿಕಾರಿಗಳು ಮಾತ್ರ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಶಾಲೆಯ ಅಭಿವೃದ್ಧಿ ಬಗ್ಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂಬುದು ಪೋಷಕರ ಆರೋಪವಾಗಿದೆ.

ಹೊಸದಾಗಿ ಕಟ್ಟಿದ ಕಟ್ಟಡಗಳು ಬೀಳುವ ಹಂತ ತಲುಪಿವೆ. ಕನ್ನಡ ಶಾಲೆಯ ಸ್ಥಿತಿ ಕಂಡು ಮಕ್ಕಳ ಹೆಸರು ನೋಂದಾಯಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಲಿ. ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕ್ರಮ ಕೈಗೊಳ್ಳಬೇಕು.
– ವೆಂಕಣ್ಣ ಹೊರಕೇರಿ, ಗ್ರಾಪಂ ಉಪಾಧ್ಯಕ್ಷ ಹನಮಂತ ನರಗುಂದ, ಸದಸ್ಯ, ಬಸಪ್ಪ ಧರೆಗೌಡ್ರ, ಪಿಕೆಪಿಎಸ್‌ ನಿರ್ದೇಶಕ

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.