ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
Team Udayavani, Feb 8, 2023, 10:40 PM IST
ಬೆಂಗಳೂರು: ನಾಳೆ ಏನಾಗುತ್ತದೆ ಎಂಬುದು ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಯವರಿಗೆ ತಿಳಿಯುತ್ತದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.
“ವಿಜಯ ಸಂಕಲ್ಪ’ ಯಾತ್ರೆ ಪ್ರಮುಖರಾಗಿ ನೇಮಕಗೊಂಡ ಬೆನ್ನಲ್ಲೇ ಪಕ್ಷದ ಕಚೇರಿಗೆ ತೆರಳಿ ಸಭೆ ನಡೆಸಿದ ಅವರು, ಲಿಂಗಾಯತ ಸಮುದಾಯವೇ ಈ ಬಾರಿ ಬಿಜೆಪಿಯನ್ನು ಸೋಲಿಸುತ್ತದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರ ತಲೆಯಲ್ಲಿ ಯಾವಾಗ ಯಾವ ಯೋಚನೆ ಬರುತ್ತದೆಯೋ ಗೊತ್ತಿಲ್ಲ. ನಾಳೆ ಏನಾಗುತ್ತದೆ ಎಂಬುದು ಭಗವಂತನಿಗಿಂತ ಮೊದಲೇ ಅವರಿಗೆ ತಿಳಿಯುತ್ತದೆ. ಕುಮಾರಸ್ವಾಮಿಯವರ ಮಾತನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ಹಾಸನದಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಕುಮಾರಸ್ವಾಮಿಯವರು ಮೊದಲು ಮಾತನಾಡಲಿ. ಅವರ ಕುಟುಂಬದ ಸಮಸ್ಯೆಯನ್ನು ಮೊದಲು ಬಗೆಹರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಫೆಬ್ರವರಿ ತಿಂಗಳ ಕೊನೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗುತ್ತದೆ. ಇದರ ಸ್ವರೂಪ ಹೇಗಿರಬೇಕು, ಎಲ್ಲೆಲ್ಲಿ, ಯಾರ್ಯಾರನ್ನು ತಾರಾ ಪ್ರಚಾರಕರಾಗಿ ಕರೆಸಿಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸದ್ಯದಲ್ಲೇ ಸಭೆ ನಡೆಸಿ ನಿರ್ಧರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್
ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ
ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!