
ಕುಷ್ಟಗಿ: ವಿದ್ಯಾರ್ಥಿ- ಪೋಷಕರಿಗೆ ಹೆಜ್ಜೇನು ದಾಳಿ
Team Udayavani, Mar 26, 2023, 11:54 AM IST

ಕುಷ್ಟಗಿ: ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ಕಡಿತದಿಂದಾಗಿ ಗಾಯಾಳಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ.
ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಪರೀಕ್ಷೆ ಆರಂಭವಾದ ಸಂದರ್ಭದ ಯಾರೋ ಕಿಡಿಗೇಡಿಗಳು ಹೆಜ್ಜೇನು ಗೂಡಿಗೆ ಕಲ್ಲೇಸೆದಿದ್ದ ಪರಿಣಾಮ ರೊಚ್ಚಿಗೆದ್ದ ಹೆಜ್ಜೇನುಗಳು ದಾಳಿ ಮಾಡಿದ್ದರಿಂದ ಪರೀಕ್ಷಾ ಆವರಣದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಹೆಜ್ಜೇನು ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ.
ಇದೇ ಸಂದರ್ಭದಲ್ಲಿ ಪೋಷಕರಿಗೆ ಹಾಗೂ ಪರೀಕ್ಷೆಯ ಮೇಲುಸ್ತುವಾರಿ ಇಸಿಓ ರಾಘಪ್ಪ ಶ್ರೀ ರಾಮ್, ದಾಳಿಂಬೆ ಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಅಬ್ದುಲ್ ನಯೀಮ್ ಅವರುಗಳ ಮೇಲೂ ಹೆಜ್ಜೇನು ದಾಳಿ ನಡೆದಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹಾಗೂ ಪೋಷಕರ ಆರೋಗ್ಯ ವಿಚಾರಿಸಿದರು.
ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ತಾವರಗೇರಾ ಪಿಎಸೈ ತಿಮ್ಮಣ್ಣ ನಾಯಕ, ಕುಷ್ಟಗಿ ಪಿಎಸೈ ಮೌನೇಶ ರಾಠೋಡ್ ಅಸ್ಪತ್ರೆಗೆ ಭೇಟಿ ನೀಡಿದ್ದರು.
ಆಸ್ಪತ್ರೆಯಲ್ಲಿ ಪರೀಕ್ಷೆ ವ್ಯವಸ್ಥೆ:
ಹೆಜ್ಜೇನು ಕಡಿತದಿಂದ ಗಾಯಗೊಂಡು ಅಸ್ವಸ್ಥರಾಗಿರುವ ಅಶ್ವಿನಿ ಮಡಿವಾಳ, ಚಂದ್ರಶೇಖರ ಮಾಲಿಪಾಟೀಲ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
