ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

Team Udayavani, Mar 9, 2021, 1:02 AM IST

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಮಂಗಳೂರು: ಬಜೆಟ್‌ನ ಅಂಶಗಳನ್ನು ಅವಲೋಕಿಸಿದರೆ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯ ಕೊರತೆ ಕಂಡುಬಂದಿದೆ.

ಬಜೆಟ್‌ನಲ್ಲಿ ಒಂದಷ್ಟು ಹೊಸ ಉದ್ಯಮ ಗಳನ್ನು ಘೋಷಿಸಲಾಗಿದೆ. ಇದು ಆರ್ಥಿಕ ಚಟುವಟಿಕೆಗಳ ಉದ್ದೀಪನ ಹಾಗೂ ಪ್ರಾದೇಶಿಕವಾಗಿ ಉದ್ಯೋಗಾವಕಾಶ ಸೃಷ್ಟಿಗೆ ಪೂರಕವಾಗಬಲ್ಲವು. ಉದ್ದಿಮೆಗಳನ್ನು ಸ್ಥಾಪಿಸಲು ಮಹಿಳೆಯರಿಗೆ ಪ್ರೋತ್ಸಾಹದಾಯಕ ಕ್ರಮಗಳನ್ನು ಘೋಷಿಸಿರುವುದು ಮಹಿಳೆಯರನ್ನು ಉದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಲು ಸಹಕಾರಿ.

ಈಗಾಗಲೇ ಹೊಸ ಕೈಗಾರಿಕಾ ನೀತಿ ಜಾರಿಯಲ್ಲಿದೆ. ಇದರಲ್ಲಿ ಕೈಗಾರಿಕೋದ್ಯಮಿಗಳು, ಕೈಗಾರಿಕಾ ಕ್ಷೇತ್ರದ ಬಹಳಷ್ಟು ಬೇಡಿಕೆಗಳಿಗೆ ಸ್ಪಂದನೆ ನೀಡಲಾಗಿದೆ. ಬಹುಶಃ ಈ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ಕೈಗಾರಿಕೆಗಳಿಗೆ ಪೂರಕ ಅಂಶಗಳು ಉಲ್ಲೇಖವಾಗಿಲ್ಲವೇನೋ.

ಹೊರೆ ಇಳಿಸುವ ಯತ್ನ
ಕೈಗಾರಿಕೆಗಳಿಗೆ ನಗರ ವಲಯದಲ್ಲಿ ಆಸ್ತಿ ತೆರಿಗೆಯಲ್ಲಿ ಪ್ರತ್ಯೇಕ ಸ್ಲಾ Âಬ್‌ ನಿಗದಿ ಘೋಷಿಸಲಾಗಿದೆ. ಇದು ಕೈಗಾರಿಕೆಗಳ ಹೊರೆಯನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಲು ಸಹಕಾರಿಯಾದೀತು. ಕೈಗಾರಿಕೆಗಳು ಕೌಶಲಭರಿತ ಮಾನವ ಸಂಪನ್ಮೂಲ ಕೊರತೆಯನ್ನು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ಆದ್ಯತೆ ನೀಡಿರುವುದು ಉತ್ತಮ ಹೆಜ್ಜೆ.

ಪ್ರವಾಸೋದ್ಯಮ ಆರ್ಥಿಕತೆಯಲ್ಲಿ ಒಂದು ಪ್ರಮುಖ ಉದ್ಯಮ. ಈ ಬಾರಿಯ ಬಜೆಟ್‌ನಲ್ಲಿ ಈ ಕ್ಷೇತ್ರಕ್ಕೆ ನೀಡಿರುವ ಅನುದಾನ ಸಾಕಾಗದು. ಘೋಷಣೆ ಮಾಡಿರುವ ಯೋಜನೆಗಳಲ್ಲಿ ಕೆಲವು ಯೋಜನೆಗಳ ಅನುಷ್ಠಾನದ ಬಗ್ಗೆ ಸ್ಪಷ್ಟವಾದ ಉಲ್ಲೇಖಗಳು ಗೋಚರಿಸುತ್ತಿಲ್ಲ.

ಎರಡನೇ ಹಂತದ ನಗರಗಳಲ್ಲಿ ಐಟಿ ಪಾರ್ಕ್‌ಗಳು ಉದ್ಯೋಗಾವಕಾಶಗಳ ಸೃಷ್ಟಿಯಲ್ಲಿ ಪೂರಕವಾಗುತ್ತವೆ. ಮಂಗಳೂರಿನಲ್ಲಿ ಕಿಯೋನಿಕ್ಸ್‌ ಜಾಗದಲ್ಲಿ ಐಟಿ ಪಾರ್ಕ್‌ಗೆ ಬಜೆಟ್‌ ಪೂರ್ವದಲ್ಲಿ 60 ಕೋ.ರೂ.ಗೆ ಬೇಡಿಕೆ ಮಂಡಿಸಲಾಗಿತ್ತು. ಬಜೆಟ್‌ನಲ್ಲಿ ಇವುಗಳನ್ನು ಪರಿಗಣಿಸಿಲ್ಲ. ಇದಲ್ಲದೆ ಕೈಗಾರಿಕಾ ಟೌನ್‌ಶಿಪ್‌ ಪ್ರಾಧಿಕಾರಗಳ ಬೇಡಿಕೆಯನ್ನು ಪರಿಗಣಿಸಿಲ್ಲ. ಪೀಣ್ಯ ಕೈಗಾರಿಕಾ ಟೌನ್‌ಶಿಪ್‌ ಪ್ರಾಧಿಕಾರಕ್ಕೆ 100 ಕೋ.ರೂ. ಕೊಟ್ಟಿರುವುದು ಹೊರತುಪಡಿಸಿದರೆ ಉಳಿದಂತೆ ಯಾವುದೇ ಪ್ರಸ್ತಾವನೆ
ಗಳು ಪರಿಗಣನೆಗೆ ಬಂದಿಲ್ಲ. ಹೊಸದಾಗಿ ಯಾವುದೇ ತೆರಿಗೆ ಏರಿಕೆ ಮಾಡದಿರುವುದು ಸ್ವಾಗತಾರ್ಹ.

– ಗೌರವ ಹೆಗ್ಡೆ , ಉದ್ಯಮಿ, ಕೆನರಾ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.