ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಆಪ್ತ “ದಳ’ಪತಿ!

Team Udayavani, Nov 19, 2019, 3:08 AM IST

athani-kse

ಬೆಳಗಾವಿ: ಚುನಾವಣೆಯಲ್ಲಿ ಸೋತರೂ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವ ಸ್ಥಾನದ ಜತೆಗೆ ಡಿಸಿಎಂ ಸ್ಥಾನ ಗಿಟ್ಟಿಸಿಕೊಂಡು ಅಚ್ಚರಿ ಮೂಡಿಸಿದ್ದ ಲಕ್ಷ್ಮಣ ಸವದಿ, ಈಗ ಅಥಣಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ವತಃ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ತಂತ್ರ ಹಣೆದಿದ್ದಾರೆಯೇ? ಇಂತಹದೊಂದು ಅನುಮಾನದ ಪ್ರಶ್ನೆ ಈಗ ಅಥಣಿ ಕ್ಷೇತ್ರದಲ್ಲಿ ದಟ್ಟವಾಗಿ ಹರಿದಾಡುತ್ತಿದೆ. ಸೋಮವಾರ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ ತೆಲಸಂಗ ಜಿ.ಪಂ. ಕ್ಷೇತ್ರದ ಸದಸ್ಯ ಗುರಪ್ಪ ದಾಸ್ಯಾಳ ಈ ಅನುಮಾನಕ್ಕೆ ಪುಷ್ಟಿ ನೀಡಿದ್ದಾರೆ.

ಇದಕ್ಕೆ ಕಾರಣ ಗುರಪ್ಪ ದಾಸ್ಯಾಳ ಅವರು ಸಚಿವ ಸವದಿಯವರ ಕಟ್ಟಾ ಶಿಷ್ಯ. ಕೊನೇ ಕ್ಷಣದಲ್ಲಿ ಜೆಡಿಎಸ್‌ ಟಿಕೆಟ್‌ ಪಡೆದು ನಾಮಪತ್ರ ಸಲ್ಲಿಸಿರುವ ಗುರಪ್ಪ ದಾಸ್ಯಾಳ, ಈಗ ಅಥಣಿ ಕ್ಷೇತ್ರದ ರಾಜಕಾರಣಕ್ಕೆ ಮಹತ್ವದ ತಿರುವು ನೀಡಿದ್ದಾರೆ. ಅನುಮಾನಕ್ಕೆ ಎಡೆಮಾಡಿಕೊಟ್ಟಿರುವುದು ಸವದಿ ಅವರ ನಡೆ. ತಮಗೆ ಬಿಜೆಪಿ ಟಿಕೆಟ್‌ ಸಿಗದೆ ಅಸಮಾಧಾನಗೊಂಡಿರುವ ಅವರು, ಈಗ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರನ್ನು ಸೋಲಿಸಲು ಗುಪ್ತವಾಗಿ ರಣತಂತ್ರ ಹಣೆದಿದ್ದು, ಅದರ ಭಾಗವಾಗಿಯೇ ದಾಸ್ಯಾಳ ಸ್ಪರ್ಧೆ ಎಂಬ ಮಾತು ಕೇಳಿ ಬರುತ್ತಿವೆ.

ಒಂದೇ ಸಮುದಾಯದವರು: ಗುರಪ್ಪ ದಾಸ್ಯಾಳ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು. ಮಹೇಶ ಕುಮಟಳ್ಳಿ ಸಹ ಇದೇ ಸಮಾಜದವರು. ಬಿಜೆಪಿಗೆ ಹೋಗುವ ಈ ಸಮಾಜದ ಮತಗಳನ್ನು ಒಡೆಯುವ ಉದ್ದೇಶದಿಂದಲೇ ಸವದಿ ಈ ಆಟ ಆಡಿದ್ದಾರೆ. ಈ ಮೂಲಕ ತಮಗೆ ಟಿಕೆಟ್‌ ತಪ್ಪಿಸಿದವರಿಗೆ ಪಾಠ ಕಲಿಸುವುದು ಅವರ ಉದ್ದೇಶ ಎಂಬುದು ಅವರ ಆಪ್ತ ಮೂಲಗಳ ಹೇಳಿಕೆ.

ಭಾನುವಾರ ಸಂಜೆಯವರೆಗೆ ಜೆಡಿಎಸ್‌ನಿಂದ ತಾಲೂಕು ಬ್ಲಾಕ್‌ ಅಧ್ಯಕ್ಷ ಶ್ರೀಶೈಲ ಹಳ್ಳದಮಳ ಅವರ ಹೆಸರು ಮುಂಚೂಣಿ ಯಲ್ಲಿತ್ತು. ಆದರೆ, ಗುರಪ್ಪ ದಾಸ್ಯಾಳ ಹೆಸರು ಅಂತಿಮವಾಗಿದ್ದರ ಹಿಂದೆ ಸವದಿ ಕಾರ್ಯತಂತ್ರ ಹಾಗೂ ಲೆಕ್ಕಾಚಾರ ಸಾಕಷ್ಟು ಕೆಲಸ ಮಾಡಿದೆ. ತಮ್ಮ ಕಟ್ಟಾ ಶಿಷ್ಯ ದಾಸ್ಯಾಳ ಅವರಿಗೆ ಟಿಕೆಟ್‌ ಕೊಡಿಸಲು ಸವದಿ ಅವರು ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂಬುದು ಮೂಲಗಳ ಹೇಳಿಕೆ.

ದಾಸ್ಯಾಳ ಮೂಲತಃ ಜೆಡಿಎಸ್‌ ಸದಸ್ಯರು. ಮೊದಲ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಅವರು, ಜಿಪಂಗೆ ಪ್ರವೇಶ ಮಾಡಲು ಆಗಿರಲಿಲ್ಲ. ಆಗ ಸೋಲು ಅನುಭವಿ ಸಿದ್ದರು. ಕಳೆದ ಜಿಪಂ ಚುನಾವಣೆಯಲ್ಲಿ ಬಿಜೆಪಿ ಸೇರಿದ್ದ ದಾಸ್ಯಾಳ, ಚುನಾವಣೆಯಲ್ಲಿ ಜಯ ಗಳಿಸಿ ಸವದಿಯವರ ಪರಮ ಶಿಷ್ಯರಾದರು.

60 ಸಾವಿರ ಲಿಂಗಾಯತ ಮತ!: ತೆಲಸಂಗ ಹೋಬಳಿಯ 9 ಹಳ್ಳಿಗಳಲ್ಲಿ ಸುಮಾರು 60 ಸಾವಿರ ಲಿಂಗಾಯತ ಪಂಚಮಸಾಲಿ ಮತದಾರರಿದ್ದಾರೆ. ಇದರ ಲಾಭವನ್ನು ಸಂಪೂರ್ಣವಾಗಿ ಪಡೆದುಕೊಳ್ಳುವುದು ಗುರಪ್ಪ ದಾಸ್ಯಾಳ ಗುರಿ. ಅದಕ್ಕೆ ಈಗ ಸವದಿ ಬೆಂಬಲವಾಗಿ ನಿಂತಿದ್ದಾರೆ. ಕುಮಾರಸ್ವಾಮಿ ತಂತ್ರಗಾರಿಕೆಗೆ ಸವದಿ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

ಬಿಜೆಪಿಯಲ್ಲಿ ಹೆಚ್ಚಾದ ತಳಮಳ: ಗುರಪ್ಪ ದಾಸ್ಯಾಳ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ತಳಮಳ ಆರಂಭವಾಗಿದೆ. ತಾಲೂಕಿನ ಐದು ಜಿಪಂ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳು ಜೆಡಿಎಸ್‌ ಪರವಾಗಿ ನಿಲ್ಲಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ನಿಜವೇ ಆದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಗೆಲುವಿಗೆ ಹರಸಾಹಸವನ್ನೇ ಮಾಡಬೇಕು.

ಎಲ್ಲಕ್ಕಿಂತ ಮುಖ್ಯವಾಗಿ ಸವದಿ ನಡೆಯ ಮೇಲೆ ಬಿಜೆಪಿ ಅಭ್ಯರ್ಥಿ ಗೆಲುವು ಅವಲಂಬಿತವಾಗಿದೆ. ಈ ಮಧ್ಯೆ, ಲಕ್ಷ್ಮಣ ಸವದಿ ಹಾಗೂ ಜೆಡಿಎಸ್‌ ನಾಯಕ ಕುಮಾರಸ್ವಾಮಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಇದು ಜೆಡಿಎಸ್‌ ವಲಯದಲ್ಲಿ ಹೊಸ ಶಕ್ತಿ ಮೂಡಿಸಿದ್ದರೆ, ಈಗಾಗಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಎದುರಿಸಿರುವ ಮಹೇಶ ಕುಮಟಳ್ಳಿ ವಲಯದಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ.

* ಕೇಶವ ಆದಿ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.