ಕೃಷಿ ಸಖಿಯರಿಂದ ಹಡಿಲು ಭೂಮಿ ಹಸನು: ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದೆ ರಾಜ್ಯದ ಮೊದಲ ಪ್ರಯೋಗ

Team Udayavani, Jun 6, 2023, 7:23 AM IST

shಕೃಷಿ ಸಖಿಯರಿಂದ ಹಡಿಲು ಭೂಮಿ ಹಸನು: ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದೆ ರಾಜ್ಯದ ಮೊದಲ ಪ್ರಯೋಗ

ಕುಂದಾಪುರ: ಹಡಿಲು ಬಿದ್ದಿರುವ ಅಥವಾ ಈ ಬಾರಿ ನಾಟಿ ಮಾಡದೆ ಬಿಡುವ ಗದ್ದೆಗಳನ್ನು ಗುರುತಿಸಿ ಹಸನಾಗಿಸಲು ಉಡುಪಿ ಜಿಲ್ಲಾಡಳಿತವು ರಾಜ್ಯದಲ್ಲೇ ಮೊದಲ ಹಾಗೂ ವಿನೂತನ ಪ್ರಯತ್ನವೊಂದಕ್ಕೆ ಮುಂದಾಗಿದೆ.

ರಾಷ್ಟ್ರೀಯ ಗ್ರಾಮೀಣ ಜೀವನೋ ಪಾಯ ಮಿಶನ್‌ (ಎನ್‌ಆರ್‌ಎಲ್‌ಎಂ) ವತಿಯಿಂದ ನೇಮಿಸಲಾದ “ಕೃಷಿ ಸಖಿಯರು’ ಉಡುಪಿ ಜಿಲ್ಲೆಯಲ್ಲಿ ಹಡಿಲು ಗದ್ದೆಗಳನ್ನು ಗುರುತಿಸಿ, ಪುನಶ್ಚೇತನ ನಡೆಸಲಿದ್ದಾರೆ. ಎನ್‌ಆರ್‌ಎಲ್‌ಎಂ, ಕೃಷಿ ಇಲಾಖೆ, ಗ್ರಾ.ಪಂ. ಮಟ್ಟದ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಈ ಕಾರ್ಯ ನಡೆಯುತ್ತಿದೆ.

500 ಎಕರೆಗೂ ಹೆಚ್ಚು
ಉಡುಪಿ ಜಿಲ್ಲೆಯಲ್ಲಿ 155
ಕೃಷಿಸಖಿಯರಿದ್ದು, ಈ ಪೈಕಿ ಸುಮಾರು 90 ಮಂದಿಗೆ ಅವರವರ ಗ್ರಾಮ ಗಳಲ್ಲಿ ಹಡಿಲು ಭೂಮಿ ಪುನಶ್ಚೇತನದ ಗುರಿಯನ್ನು ನೀಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಸುಮಾರು 500 ಎಕರೆ ಹಡಿಲು ಭೂಮಿ ನಾಟಿ ಮಾಡುವ ಗುರಿ ಹೊಂದಲಾಗಿದೆ. ಇದಿನ್ನೂ ಆರಂಭಿಕ ಹಂತದಲ್ಲಿದ್ದು, ಮುಂದೆ ಇನ್ನಷ್ಟು ಪ್ರದೇಶದಲ್ಲಿ ಪುನಶ್ಚೇತನ ಆಗಬಹುದು. ಕೃಷಿ ಸಖಿಯರ ಮುಂದಾಳತ್ವದಲ್ಲಿ ಆಯಾಯ ಗ್ರಾ.ಪಂ. ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಯರು ಕೂಡ ಇದರಲ್ಲಿ ಕೈಜೋಡಿಸಲಿದ್ದಾರೆ.

ಬಿತ್ತನೆ ಬೀಜ ಪೂರೈಕೆ, ಯಂತ್ರೋಪಕರಣ, ರಸ ಗೊಬ್ಬರ ಇತ್ಯಾದಿ ಕೃಷಿ ಇಲಾಖೆ ಪೂರೈಸಲಿದೆ. ಕೆಲವು ಖರ್ಚು ವೆಚ್ಚಗಳಿಗೆ ಆರ್ಥಿಕ ಸಂಪನ್ಮೂಲವನ್ನು ಸಂಜೀವಿನಿ ಒಕ್ಕೂಟದ ಸಮುದಾಯ ಬಂಡವಾಳದಡಿ ಸಾಲವಾಗಿ ಪಡೆಯಬಹುದು. ಎನ್‌ಆರ್‌ಎಲ್‌ಎಂ ವತಿಯಿಂದಲೂ ಅನುದಾನ ಸಿಗಲಿದೆ.

ಯಾರಿವರು?
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಶನ್‌ (ಎನ್‌ಆರ್‌ಎಲ್‌ಎಂ) ವತಿ ಯಿಂದ ಪ್ರತೀ ಗ್ರಾ.ಪಂ.ಗೆಒಬ್ಬರಂತೆ ಕೃಷಿ ಸಖೀಯರನ್ನು ನೇಮಕ ಮಾಡಲಾಗಿದೆ. ಇವರು ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾ.ಪಂ. ಮಟ್ಟದಲ್ಲಿ ಸಂಜೀವಿನಿ ಒಕ್ಕೂಟದ ಅಧೀನದಲ್ಲಿ ಸೇವೆ ಸಲ್ಲಿಸುತ್ತಾರೆ. ಕೃಷಿ ಇಲಾಖೆಯ ಕೃಷಿ ಪಾಠಶಾಲೆ, ಯಂತ್ರೋಪಕರಣಗಳು, ಬೀಜಗಳು, ಕೀಟನಾಶಕಗಳ ಸಹಿತ ವಿವಿಧ ಸೌಲಭ್ಯಗಳು, ಪ್ರಧಾನಮಂತ್ರಿ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ವಿಮಾ ಯೋಜನೆಗಳ ಉಪಯೋಗಗಳನ್ನು ಕೃಷಿಕರು ಸಮರ್ಥವಾಗಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಗ್ರಾ.ಪಂ. ಮಟ್ಟದಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಜಿ.ಪಂ. ಸಹಿತ ಒಟ್ಟು ನಾಲ್ಕು ಹಂತಗಳಲ್ಲಿ ಇವರಿಗೆ ತರಬೇತಿ ನೀಡಲಾಗಿದೆ.

ಶಿವಪುರ ಮಾದರಿ
ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಶ್ರೀ ದುರ್ಗಾ ಸಂಜೀವಿನಿ ಒಕ್ಕೂಟದ ಐವರು ಸದಸ್ಯೆಯರು ಹಡಿಲು ಭೂಮಿಯನ್ನು ನಾಟಿ ಮಾಡುವ ಕಾರ್ಯ ಕೈಗೊಂಡಿದ್ದು, ಆರಂಭದಲ್ಲಿ 10 ಎಕರೆ, ಆ ಬಳಿಕ 25 ಎಕರೆ ಹಡಿಲು ಭೂಮಿ ಪುನಶ್ಚೇತನ ಮಾಡಿದ್ದಾರೆ. ಇದನ್ನೇ ಮಾದರಿಯಾಗಿಸಿಕೊಂಡು ಜಿಲ್ಲೆಯಾದ್ಯಂತ ವಿಸ್ತರಿಸಲು ಜಿ.ಪಂ. ಸಿಇಒ ಪ್ರಸನ್ನ ಎಚ್‌. ಅವರು ಮುಂದಾಗಿದ್ದಾರೆ.

ಕೃಷಿ ಸಖಿಯರ ಪ್ರಮುಖ ಕೆಲಸ ರೈತರಿಗೆ ಮಾಹಿತಿ ನೀಡುವುದು. ಆದರೆ ಇದಕ್ಕೆ ಮುನ್ನ ಅವರು ಕೃಷಿ ಸಂಬಂಧಿ ಕೆಲಸ ಮಾಡಿದರೆ, ಅವರು ಕೊಡುವ ಮಾಹಿತಿಗೆ ಮೌಲ್ಯ ಬರುತ್ತದೆ. ಅದಕ್ಕಾಗಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಇಂಥದ್ದೊಂದು ವಿಶಿಷ್ಟ ಪ್ರಯತ್ನವನ್ನು ಆರಂಭಿಸಿದ್ದೇವೆ. ಹಡಿಲು ಭೂಮಿಯನ್ನು ಹಸನಾಗಿಸುವುದು ಇಂದಿನ ಅಗತ್ಯವೂ ಹೌದು. ಈಗ ಪ್ರಾಯೋಗಿಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸುವ ಪ್ರಯತ್ನ ನಡೆಸಲಾಗುವುದು.
– ಪ್ರಸನ್ನ ಎಚ್‌., ಉಡುಪಿ ಜಿ.ಪಂ. ಸಿಇಒ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.