ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಹೋರಾಟ
Team Udayavani, Jun 21, 2019, 5:22 AM IST
ಬೆಂಗಳೂರು: ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಚುನಾವಣಾಧಿಕಾರಿಗಳಿಗೆ ಸಾಕಷ್ಟು ವ್ಯವಹಾರ, ಆಸ್ತಿಯ ವಿವರಗಳನ್ನು ಮರೆಮಾಚಿ, ತಪ್ಪು ಮಾಹಿತಿಯನ್ನು ಪ್ರಮಾಣ ಪತ್ರದಲ್ಲಿ ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಕೋರಿ ಹೈಕೋರ್ಟ್ಗೆ ಶುಕ್ರವಾರ ಅರ್ಜಿ ಸಲ್ಲಿಸಲಾಗುವುದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎ.ಮಂಜು ಹೇಳಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆಲ ದಾಖಲೆ ಪ್ರದರ್ಶಿಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಾಕಷ್ಟು ದೋಷಗಳಿವೆ. ಚುನಾವಣಾ ಆಯೋಗದ ನಿಯಮದಂತೆ ಐದು ವರ್ಷಗಳ ಆದಾಯ ತೆರಿಗೆ ಘೋಷಣೆ ವಿವರ ದಾಖಲಿಸುವುದು ಕಡ್ಡಾಯ. ಆದರೆ ಪ್ರಜ್ವಲ್ ಅವರಿಗೆ 2008ರಿಂದ ಆದಾಯವಿದ್ದರೂ ಕೇವಲ 2018-19ನೇ ಸಾಲಿನ ಆದಾಯ ತೆರಿಗೆ ವಿವರವನ್ನಷ್ಟೇ ಘೋಷಿಸಿಕೊಂಡಿದ್ದಾರೆ ಎಂದರು. ಪ್ರಜ್ವಲ್ ಅವರು ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆಗೆ ಸತ್ಯಾಂಶವನ್ನು ಮರೆಮಾಚಿ, ಅಕ್ರಮ ನಡೆಸಿರುವ ಬಗ್ಗೆ ತನಿಖೆಗೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಅವರ ಕುಟುಂಬದವರು ಬೆಂಗಳೂರು, ಮೈಸೂರು ಸುತ್ತಮುತ್ತ ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ