Power: ವಿದ್ಯುತ್‌ ಅಭಾವ ನೀಗಿಸಲು ಸರಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿ

Team Udayavani, Oct 12, 2023, 11:57 PM IST

power lines

ರಾಜ್ಯದಲ್ಲಿನ್ನೂ ಮಳೆಗಾಲ ಮುಗಿದಿಲ್ಲ. ಮುಂಗಾರು ಮಾರುತಗಳು ರಾಜ್ಯದಿಂದ ಹಿಂದೆ ಸರಿಯಲು ಆರಂಭಿಸಿವೆಯಾದರೂ ಇನ್ನೂ ಪೂರ್ಣ ಪ್ರಮಾಣದಲ್ಲಿ ವಾಪಸಾಗಿಲ್ಲ. ಅಲ್ಲದೆ ಈಶಾನ್ಯ ಮಾರುತಗಳು ಇನ್ನಷ್ಟೇ ರಾಜ್ಯವನ್ನು ಪ್ರವೇಶಿಸಬೇಕಿವೆ. ಪರಿಸ್ಥಿತಿ ಹೀಗಿದ್ದರೂ ಮುಂಗಾರು ಅವಧಿಯಲ್ಲಿ ವರುಣ ಕೈಕೊಟ್ಟಿದ್ದರ ಪರಿಣಾಮ ರಾಜ್ಯದ ಜಲಾಶಯಗಳು ತುಂಬಿಲ್ಲ. ತತ್ಪರಿಣಾಮವಾಗಿ ರಾಜ್ಯದ ಹಲವೆಡೆ ಬರ ಪರಿಸ್ಥಿತಿ ಸೃಷ್ಟಿ­ಯಾಗಿದ್ದು ರೈತಾಪಿ ವರ್ಗ ಕಂಗಾಲಾಗಿದೆ. ಇದೇ ವೇಳೆ ಮಳೆಯ ತೀವ್ರ ಕೊರತೆಯಿಂದಾಗಿ ಜಲವಿದ್ಯುತ್‌ ಉತ್ಪಾದನೆ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇತರ ವಿದ್ಯುತ್‌ ಮೂಲಗಳಿಂದಲೂ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆಯಾಗದಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯ ತೀವ್ರ ತೆರನಾದ ವಿದ್ಯುತ್‌ ಅಭಾವವನ್ನು ಎದುರಿಸುವ ಭೀತಿಯಲ್ಲಿ ಸಿಲುಕಿದೆ.

ಅಕ್ಟೋಬರ್‌ ಆರಂಭದಿಂದಲೂ ವಿದ್ಯುತ್‌ ಬೇಡಿಕೆ ಅಧಿಕವಾಗಿದೆ. ಮತ್ತೂಂದೆಡೆಯಿಂದ ರೈತರು ಕೂಡ ತಮ್ಮ ಬೆಳೆಗಳಿಗೆ ನೀರು ಹಾಯಿಸಲು ವಿದ್ಯುತ್‌ ಪಂಪ್‌ಗ್ಳನ್ನು ಅವಲಂಬಿಸಿರುವುದರಿಂದ ಸಹಜವಾಗಿಯೇ ವಿದ್ಯುತ್‌ ಬೇಡಿಕೆ ಹೆಚ್ಚುತ್ತಲೇ ಸಾಗಿದೆ. ಇದರಿಂದಾಗಿ ರಾಜ್ಯದ ವಿದ್ಯುತ್‌ ಕಂಪೆನಿಗಳಿಗೆ ಗ್ರಾಹಕರ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮಳೆಗಾಲ ಮುಕ್ತಾಯದ ಹಂತದಲ್ಲಿರು­ವಾಗಲೇ ವಿದ್ಯುತ್‌ ಕಂಪೆನಿಗಳೀಗ ಲೋಡ್‌ ಶೆಡ್ಡಿಂಗ್‌ನ ಮೊರೆ ಹೋಗಲಾರಂಭಿಸಿವೆ. ಇದರಿಂದ ರಾಜ್ಯದ ಜನತೆ ಕ್ರುದ್ಧರಾಗಿದ್ದು ಗೃಹ ಬಳಕೆದಾರರಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸುವ ಭರವಸೆ ನೀಡಿ ಅಧಿಕಾರಕ್ಕೇರಿರುವ ಕಾಂಗ್ರೆಸ್‌ ಸರಕಾರ ಬೇಸಗೆಗೂ ಮುನ್ನವೇ ವಿದ್ಯುತ್‌ ಕಡಿತ ಮಾಡುತ್ತಿರುವುದರ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಲಾರಂಭಿಸಿದ್ದಾರೆ. ಮಳೆ ಕೈಕೊಟ್ಟಿದ್ದರಿಂದಾಗಿ ರೈತರಿಗೆ ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ತಮ್ಮ ಹೊಲಗಳಿಗೆ ನೀರು ಹಾಯಿಸಲೇ ಬೇಕಾದ ಅನಿವಾರ್ಯತೆ ಇದೆ. ಲೋಡ್‌ಶೆಡ್ಡಿಂಗ್‌ನ ಪರಿಣಾಮ ಇದಕ್ಕೂ ಸಂಕಷ್ಟ ಎದುರಾಗಿದ್ದು ಬೆಳೆಗಳು ಕರಟಿಹೋಗುವ ಸ್ಥಿತಿ ನಿರ್ಮಾಣ­ವಾಗಿದೆ. ಒಂದೆಡೆಯಿಂದ ವರುಣನ ಅವಕೃಪೆ, ಮತ್ತೂಂದೆಡೆಯಿಂದ ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯ ರೈತರನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರುವ ಬಗೆಗೆ ಸ್ಪಷ್ಟ ಮುನ್ಸೂಚನೆ ಆಗಸ್ಟ್‌ ತಿಂಗಳಲ್ಲೇ ಸರಕಾರಕ್ಕೆ ಲಭಿಸಿತ್ತು. ಹೀಗಾಗಿ ತಿಂಗಳುಗಳ ಹಿಂದೆಯೇ ಎಚ್ಚೆತ್ತುಕೊಳ್ಳಬೇಕಿದ್ದ ಸರಕಾರ ಈಗ ವಿಪಕ್ಷಗಳು ಮತ್ತು ರೈತರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ ಬಳಿಕ ವಿದ್ಯುತ್‌ ಉತ್ಪಾದನೆ ಹೆಚ್ಚಳ, ಆದ್ಯತೆ ಮತ್ತು ಆದ್ಯತೆಯೇತರ ಗ್ರಾಹಕರ ಪಟ್ಟಿಯನ್ನು ಸಿದ್ಧಪಡಿಸಿ, ಸೀಮಿತ ಪ್ರಮಾಣದಲ್ಲಿ ವಿದ್ಯುತ್‌ ಪೂರೈಕೆ, ಇತರ ರಾಜ್ಯಗಳಿಂದ ಖರೀದಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸುವಂತೆ ಕೇಂದ್ರಕ್ಕೆ ಮೊರೆಯಂತಹ ಕ್ರಮಗಳಿಗೆ ಮುಂದಾಗಿದೆ.

ಸರಕಾರದ ಈ ಎಲ್ಲ ಪ್ರಯತ್ನಗಳಿಗೆ ನಿರೀಕ್ಷಿತ ಫ‌ಲ ಲಭಿಸದೇ ಹೋದಲ್ಲಿ ಪರಿಸ್ಥಿತಿ ಇನ್ನಷ್ಟು ಉಲ್ಬಣಿಸುವ ಸ್ಥಿತಿ ಇದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕೆಗಳ ಮೇಲೂ ಪರಿಣಾಮ ಬೀರಲಿದ್ದು ರಾಜ್ಯದ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಹೀಗಾಗಿ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್‌ ಅಭಾವವನ್ನು ನೀಗಿಸಿ, ವ್ಯವಸ್ಥಿತವಾಗಿ ವಿದ್ಯುತ್‌ ಪೂರೈಸಲು ಸರಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.