ಒಪ್ಪಂದ ಈಡೇರಿಸಲು ಆಗ್ರಹಿಸಿ ಬರೆದ ಪತ್ರ: ಬಿಆರ್‌ಎಸ್‌ ಸಂಸ್ಥೆ

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ-ಮಕ್ಕಳ ಆಸ್ಪತ್ರೆ

Team Udayavani, May 14, 2020, 6:15 AM IST

ಒಪ್ಪಂದ ಈಡೇರಿಸಲು ಆಗ್ರಹಿಸಿ ಬರೆದ ಪತ್ರ: ಬಿಆರ್‌ಎಸ್‌ ಸಂಸ್ಥೆ

ಉಡುಪಿ:ಬಿಆರ್‌ಎಸ್‌ ಸಂಸ್ಥೆ ನಡೆಸು ತ್ತಿರುವ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಾರ್ಯಾರಂಭಗೊಂಡು ಎರಡು ವರ್ಷ ಕಳೆದರೂ ರಾಜ್ಯ ಸರಕಾರ ಇನ್ನೂ ಸಂಸ್ಥೆಯೊಂದಿಗೆ ನಿರ್ಧಾರಕ ಒಪ್ಪಂದಕ್ಕೆ ಸಹಿ ಹಾಕಲು ವಿಫ‌ಲವಾಗಿದೆ. ಜತೆಗೆ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ಹಾಗೂ ಸ್ಥಳೀಯಾಡಳಿತ ಪರವಾನಿಗೆ ನೀಡಿಲ್ಲ. ಅವುಗಳನ್ನು ಈಡೇರಿಸುವಂತೆ ಸರಕಾರಕ್ಕೆ ಪತ್ರ ಬರೆಯಲಾಗಿತ್ತು ಎಂದು ಬಿ.ಆರ್‌.ಎಸ್‌. ಹೆಲ್ತ್ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಸಂಸ್ಥೆಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಬಿ.ಆರ್‌. ಶೆಟ್ಟಿ ಅವರ ಬಿಆರ್‌ಎಸ್‌ ಸಂಸ್ಥೆ ನಡೆಸುತ್ತಿರುವ ಉಡುಪಿಯ ತಾಯಿ-ಮಕ್ಕಳ ಆಸ್ಪತ್ರೆಯನ್ನು ನಡೆ ಸಲು ಕಷ್ಟವಾಗಿ ಸರಕಾರಕ್ಕೆ ಬಿಟ್ಟುಕೊಡಲು ಸಿದ್ಧವೆಂದು ಪತ್ರ ಬರೆದು ತಿಳಿಸಿದೆ ಎಂಬ ಕೆಲವು ಗಣ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಂಸ್ಥೆಯು, ನಾವು ಎರಡು ವರ್ಷಗಳಿಂದ ನಿರ್ಧಾರಕ ಒಪ್ಪಂದಕ್ಕೆ ಸಹಿ ಹಾಕುವಂತೆ ಪದೇ ಪದೇ ಸರಕಾರಕ್ಕೆ ನೆನಪಿಸಿದರೂ ಈವರೆಗೆ ಸಹಿ ಹಾಕಿಲ್ಲ ಎಂದಿದೆ.

1.44 ಲ. ಹೊರರೋಗಿಗಳು
70 ಬೆಡ್‌ಗಳು, ಕಳಪೆ ಸೌಲಭ್ಯ ಗಳಿದ್ದ ಈ ಆಸ್ಪತ್ರೆಯನ್ನು 200 ಬೆಡ್‌ಗಳ ಅತ್ಯಾಧುನಿಕ ಆಸ್ಪತ್ರೆಯಾಗಿ ನಿರ್ಮಿಸಲಾಯಿತು. ಎರಡು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಸುಮಾರು 1.44 ಲ. ಹೊರ ರೋಗಿ ಗಳಿಗೆ ಚಿಕಿತ್ಸೆ ನೀಡಿದ್ದು, 6,595 ಹೆರಿಗೆ ಮಾಡಿಸಲಾಗಿದೆ. ರಾಜ್ಯದ 28 ಜಿಲ್ಲೆಗಳ ಮತ್ತು ಹೊರ ರಾಜ್ಯಗಳ ವಲಸೆ ಕಾರ್ಮಿಕರ ಈ ಆಸ್ಪತ್ರೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಸಂಸ್ಥೆಯು ನಿರ್ವಹಣೆಗೆ 3 ಕೋ.ರೂ. ವ್ಯಯಿಸುತ್ತಿದೆ. ವಿವಿಧ ವಿಭಾಗದಲ್ಲಿ 350ಕ್ಕೂ ಅಧಿಕ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೆಲ್ಲ ಸೇವೆ ಉಚಿತವಾಗಿ ಈ ಖರ್ಚುಗಳನ್ನು ಡಾ| ಬಿ.ಆರ್‌. ಶೆಟ್ಟಿ ಭರಿಸುತ್ತಿದ್ದಾರೆ ಎಂದು ಸಂಸ್ಥೆ ಹೇಳಿದೆ.

ಆಸ್ಪತ್ರೆಗೆ ಬರುವ ಎಲ್ಲರಿಗೂ ನೀಡುತ್ತಿರುವ ಉಚಿತ ಚಿಕಿತ್ಸೆಗೆ ಅನುಕೂಲ ವಾಗುವಂತೆ ಪಕ್ಕದಲ್ಲೇ ನಾವು ನಿರ್ಮಿಸಬೇಕಾಗಿರುವ 400 ಹಾಸಿಗೆಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳೀಯ ಸಂಸ್ಥೆ ಪರವಾನಿಗೆಯನ್ನೂ ನೀಡುತ್ತಿಲ್ಲ. ಈ ಎರಡೂ ವಿಷಯ ಗಳನ್ನು ನೆನಪಿಸಿ, ಅವುಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಸ್ಥೆ ಈಗಾಗಲೇ ಹಲವು ಪತ್ರಗಳನ್ನು ಬರೆದಿದೆ. ಆದರೆ ದುರದೃಷ್ಟವಶಾತ್‌, ಇದನ್ನು ತಪ್ಪಾಗಿ ಅರ್ಥೈಸಿದ ಕೆಲವು ಗಣ್ಯರು ಸಂಸ್ಥೆ ಆಸ್ಪತ್ರೆಯನ್ನು ಸರಕಾರಕ್ಕೆ ಒಪ್ಪಿಸಲು ನಿರ್ಧರಿಸಿದ್ದಾಗಿ ಮಾಧ್ಯಮಗಳಿಗೆ ತಿಳಿಸಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಂಸ್ಥೆ ಸ್ಪಷ್ಟೀಕರಣದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.