ಡೆನ್ಮಾರ್ಕ್‌ ಜೂನ್‌ 8 ರೊಳಗೆ ಸಂಪೂರ್ಣ ನಿರ್ಬಂಧ ತೆರವು


Team Udayavani, May 9, 2020, 2:38 PM IST

ಡೆನ್ಮಾರ್ಕ್‌ ಜೂನ್‌ 8 ರೊಳಗೆ ಸಂಪೂರ್ಣ ನಿರ್ಬಂಧ ತೆರವು

ಡೆನ್ಮಾರ್ಕ್‌: ಲಾಕ್‌ಡೌನ್‌ ತೆರವಿಗೆ ಮುಂದಾಗಿರುವ ಡೆನ್ಮಾರ್ಕ್‌ ಸರಕಾರ, ಜೂನ್‌ 8 ರೊಳಗೆ ಬಹುತೇಕ ನಿರ್ಬಂಧಗಳನ್ನು ತೆರವುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.

ಎಲ್ಲ ರಾಜಕೀಯ ಪಕ್ಷಗಳೂ ಸರಕಾರದ ಯೋಜನೆಗೆ ಸಮ್ಮತಿಸಿದ್ದು, ಮೂರು ಹಂತದಲ್ಲಿ ಎಲ್ಲ ನಿರ್ಬಂಧಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಇದರೊಂದಿಗೇ ಪ್ರತಿ ಹಂತದ ವಿನಾಯಿತಿ ಘೋಷಣೆ ಬಳಿಕ ಮತ್ತೂಂದು ಹಂತದ ವಿನಾಯಿತಿ ನೀಡುವವರೆಗೆ ಕೂಲಂಕಷವಾಗಿ ಅಧ್ಯಯನ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲೂ ನಿರ್ಧರಿಸಲಾಗಿದೆ.
ಯೋಜನೆಯಂತೆ ಸುಸೂತ್ರವಾಗಿ ನಡೆದರೆ ಜೂನ್‌ 8 ರೊಳಗೆ ದೇಶದಲ್ಲಿ ಬಹುತೇಕ ಲಾಕ್‌ಡೌನ್‌ ನಿರ್ಬಂಧಗಳು ತೆರವಾಗಲಿವೆ.

ಈ ಬಗ್ಗೆ ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಸ್ತುತ ಪರಿಸ್ಥಿತಿ ಕುರಿತು ಸವಿವರವಾಗಿ ಚರ್ಚಿಸಲಾಯಿತು. ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆ ನಂತರ ಸೋಂಕು ಪ್ರಕರಣ ಹೆಚ್ಚಾಗಬಹುದೆಂಬ ಆತಂಕವೂ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಒಂದುವೇಳೆ ಸೋಂಕು ಪ್ರಕರಣ ಹೆಚ್ಚಾದರೆ ಸಡಿಲಿಸಿದ ನಿರ್ಬಂಧಗಳನ್ನು ಮತ್ತೆ ಹೇರಲು ಪ್ರತಿಪಕ್ಷಗಳು ತಮ್ಮ ಒಪ್ಪಿಗೆಯನ್ನು ಸೂಚಿಸಿವೆ.
ಸಾಮಾಜಿಕ ಅಂತರ ಪಾಲನೆಯ ಜತೆಗೆ ಈಗಾಗಲೇ ಸೂಚಿಸಲಾಗಿರುವ ಸುರಕ್ಷಾ ನಿಯಮಗಳನ್ನು ಜನರು ತಪ್ಪದೇ ಪಾಲಿಸಬೇಕು ಎಂದಿರುವ ಸರಕಾರ, ಜೂನ್‌ 8 ರ ಬಳಿಕ ಸುಮಾರು 50 ಮಂದಿ ಸೇರಲು ಅವಕಾಶ ಸಿಗಲಿದೆ. ಆದರೆ 500 ಮಂದಿ ಸೇರಿ ಕಾರ್ಯಕ್ರಮ ಇತ್ಯಾದಿ ಮಾಡಲು ಅನುಮತಿ ಸಿಗಬೇಕೆಂದರೆ ಆಗಸ್ಟ್‌ 31 ರವರೆಗೆ ಕಾಯಬೇಕು ಎಂದು ತಿಳಿಸಿದೆ.

ಡೆನ್ಮಾರ್ಕ್‌ನಲ್ಲಿ ಇದುವರೆಗೆ 10, 218 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 522 ಮಂದಿ ಮೃತರಾಗಿದ್ದು, 7, 927 ಮಂದಿ ಗುಣಮುಖರಾಗಿದ್ದಾರೆ. ಯುರೋಪಿನ ಹಲವು ರಾಷ್ಟ್ರಗಳಿಗೆ ಹೋಲಿಸಿದರೆ ಡೆನ್ಮಾರ್ಕ್‌ ಬಹಳ ಬೇಗನೇ ಲಾಕ್‌ಡೌನ್‌ ನಿರ್ಬಂಧಗಳನ್ನು ಜಾರಿಗೊಳಿಸಿತ್ತು. ಮಾರ್ಚ್‌ 11 ರ ವೇಳೆಗೆ ಹೆಚ್ಚು ಜನ ಕೂಡುವುದನ್ನು ನಿಷೇಧಿಸಿತ್ತು. ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಸೂಚಿಸಿತ್ತು. ಪ್ರಜೆಗಳಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿತ್ತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.