Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Team Udayavani, Mar 19, 2024, 1:33 AM IST

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಉಳ್ಳಾಲ, ಕೊಣಾಜೆಯಲ್ಲಿ 7 ಚೆಕ್‌ಪೋಸ್ಟ್‌
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉಳ್ಳಾಲ ಮತ್ತು ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 7 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ಅವುಗಳ ಪೈಕಿ 3ರಲ್ಲಿ ಕರ್ನಾಟಕ ಪೊಲೀಸರು ತಪಾಸಣೆ ನಡೆಸಲಿದ್ದು, ಒಂದರಲ್ಲಿ ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಳಿದ ಮೂರು ಚೆಕ್‌ಪೋಸ್ಟ್‌ಗಳನ್ನು ಕೇರಳ ಪೊಲೀಸರು ನಿರ್ವಹಿಸಲಿದ್ದಾರೆ.

ಪ್ರತೀ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು, ಕೇಂದ್ರ ಮೀಸಲು ಪಡೆಯ ಪೊಲೀಸರು ಸೇರಿದಂತೆ ನೋಡೆಲ್‌ ಅಧಿಕಾರಿಗಳು ಸಿಬಂದಿ ತಪಾಸಣೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌ ಗಡಿಭಾಗದ ಚೆಕ್‌ಪೊಸ್ಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಮುಂಡ್ಕೂರು ಜಾರಿಗೆಕಟ್ಟೆ ಚೆಕ್‌ಪೋಸ್ಟ್‌ ಮತ್ತೆ ಸಕ್ರಿಯ
ಬೆಳ್ಮಣ್‌: ಬಹುತೇಕ ನೇಪಥ್ಯಕ್ಕೆ ಸೇರಿದ್ದ ಮುಂಡ್ಕೂರು ಜಾರಿಗೆಕಟ್ಟೆ ಚೆಕ್‌ಪೋಸ್ಟ್‌ ಮತ್ತೆ ಸಕ್ರಿಯಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತಿಗಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳ ನೇತೃತ್ವದಲ್ಲಿ ಇಲಾಖೆಯ ಸಿಬಂದಿ ಕರ್ತವ್ಯದಲ್ಲಿ ತೊಡಗಿದ್ದು ಕಾರ್ಕಳ ತಾಲೂಕಿನ ಶಿಕ್ಷಕರು ಸಹಕರಿಸುತ್ತಿದ್ದಾರೆ. ಕೊರೊನಾ ಕಾಲದಲ್ಲಿ ಲಾಕ್‌ಡೌನ್‌ಗಾಗಿ ಇಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿತ್ತು.

ಶಿರೂರು ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ
ಬೈಂದೂರು: ಉತ್ತರ ಕನ್ನಡ – ಉಡುಪಿ ಜಿಲ್ಲೆ ಗಡಿ ಭಾಗವಾದ ಶಿರೂರಿನಲ್ಲಿ ವಾಹನ ತಪಾಸಣೆ ಆರಂಭಗೊಂಡಿದೆ. ವಿವಿಧ ಇಲಾಖೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲೆಗೆ ಪ್ರವೇ ಶಿಸುವ ಪ್ರತೀ ವಾಹನಗಳ ವಿವರ ದಾಖಲಿಸಿ ತಪಾಸಣೆ ನಡೆಸ ಲಾಗುತ್ತಿದೆ. ಜತೆಗೆ ವಿವಿಧ ಸರಕಾರಿ ಜಾಹಿರಾತುಗಳಲ್ಲಿ ಇರುವ ರಾಜಕೀಯ ವ್ಯಕ್ತಿಗಳ ಭಾವಚಿತ್ರವನ್ನು ಮರೆ ಮಾಡ ಲಾಗಿದೆ ಹಾಗೂ ಬ್ಯಾನರ್‌ಗಳನ್ನು ತೆರವು ಗೊಳಿಸಲಾಗಿದೆ.
ಸಹಾಯಕ ಚುನಾವಣಾಧಿಕಾರಿ ಎ.ಆರ್‌. ಮಂಜುನಾಥ, ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಆರ್‌., ಕಂದಾಯ ನಿರೀಕ್ಷಕ ಮಂಜು, ಶಿರೂರು ಗ್ರಾಮ ಲೆಕ್ಕಾಧಿಕಾರಿ ವಿಜಯ್‌ ಕುಮಾರ್‌, ಚುನಾವಣೆ ಉಸ್ತುವಾರಿ ಚಂದ್ರಶೇಖರ ಹಾಗೂ ಬೈಂದೂರು ಪೊಲೀಸ್‌ ಸಿಬಂದಿ ಹಾಜರಿದ್ದರು.

ಸಾಹೇಬ್ರಕಟ್ಟೆ, ಸೋಮೇಶ್ವರ ಚೆಕ್‌ಪೋಸ್ಟ್‌ಗೆ ಡಿಸಿ, ಎಸ್‌ಪಿ ಭೇಟಿ
ಕೋಟ: ಚುನಾವಣೆ ಹಿನ್ನಲೆಯಲ್ಲಿ ಬ್ರಹ್ಮಾವರ ತಾಲೂಕಿನ ಸಾಹೇಬ್ರಕಟ್ಟೆಯಲ್ಲಿ ತೆರೆದಿರುವ ಪೊಲೀಸ್‌ ಚೆಕ್‌ಪೋಸ್ಟ್‌ ಗೆ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕುಮಾರ್‌ ರವಿವಾರ ಸಂಜೆ ಭೇಟಿ ನೀಡಿದರು. ಎಲ್ಲ ವಾಹನಗಳನ್ನು ಪರಿಶೀಲಿಸಿ ಅಕ್ರಮ ಕಂಡುಬಂದರೆ ಕಠಿನ ಕ್ರಮ ಕೈಗೊಳ್ಳುವಂತೆ ಸಿಬಂದಿಗೆ ತಿಳಿಸಿದರು. ಸ್ಥಳೀಯ ಕಂದಾಯ, ಪೊಲೀಸ್‌ ಅಧಿಕಾರಿಗಳು ಈ ಸಂದರ್ಭ ಸ್ಥಳದಲ್ಲಿದ್ದರು.

ಹೆಬ್ರಿ: ಹೆಬ್ರಿ ತಾಲೂಕಿನ ಸೋಮೇಶ್ವರ ಚೆಕ್‌ಪೋಸ್ಟ್‌ಗೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಮತ್ತು ಜಿಲ್ಲಾ ಪೊಲೀಸ್‌ ಅಧೀಕ್ಷಕ ಅರುಣ್‌ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೋಡಾರ್‌ನಲ್ಲಿ ದಾಖಲೆ ಇಲ್ಲದ 1.32 ಲ.ರೂ. ವಶ
ಮಂಗಳೂರು: ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಗೊಂಡ ಬೆನ್ನಿಗೆ ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣ ಆಯೋಗ ಮಂಗಳೂರು ಸಮೀಪ ರವಿವಾರ ರಾತ್ರಿ ವಶಪಡಿಸಿಕೊಂಡಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್‌ - ಎಡಪದವು ಚೆಕ್‌ ಪೋಸ್ಟ್‌ನಲ್ಲಿ ರಾತ್ರಿ 11ರ ಸುಮಾರಿಗೆ ಚುನಾವಣಾ ಧಿಕಾರಿಗಳ ತಂಡ ವಾಹನಗಳ ತಪಾಸಣೆ ನಡೆಸು ತ್ತಿದ್ದು, ಆಗ ಆಗಮಿಸಿದ ಕೈಕಂಬ ನಿವಾಸಿಯೊಬ್ಬರ ಕಾರನ್ನು ಪರಿಶೀಲಿಸಿ ದಾಗ 1.32 ಲಕ್ಷ ರೂ. ನಗದು ದೊರಕಿದೆ. ಸೂಕ್ತ ದಾಖಲೆ ನೀಡುವಂತೆ ಅಧಿಕಾರಿಗಳು ತಿಳಿಸಿದರೂ ಕಾರಿನಲ್ಲಿದ್ದವರು ದಾಖಲೆ ನೀಡದ ಕಾರಣ ವಶಪಡಿಸಿ ಕೊಳ್ಳಲಾಗಿದೆ.

ಈ ಕುರಿತಂತೆ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ ಕೆ. ಜಾನ್ಸನ್‌ ಅವರು “ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ 50 ಸಾವಿರ ರೂ.ಗಳಿಗಿಂತ ಹೆಚ್ಚು ಹಣ ಸಾಗಿಸುವಂತಿಲ್ಲ. ಒಂದುವೇಳೆ ಸಾಗಿಸುವುದಾದರೆ ಸರಿಯಾದ ದಾಖಲೆ ಒದಗಿಸ ಬೇಕು. 50 ಸಾವಿರಕ್ಕಿಂತ ಹೆಚ್ಚು ಹಣ ಸಾಗಿಸಿದಾಗ ದಾಖಲೆ ನೀಡದಿದ್ದರೆ ಅದನ್ನು ವಶಕ್ಕೆ ಪಡೆಯಲಾಗುತ್ತದೆ. ಸಂಬಂಧ ಪಟ್ಟವರು ದಾಖಲೆಯನ್ನು ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿಯವರ ಅಪೀಲು ಕಮಿಟಿಗೆ ಮನವಿ ಸಲ್ಲಿಸಿ ಹಣ ವಾಪಸ್‌ ಪಡೆಯಲೂ ಅವಕಾಶ ಇದೆ ಎಂದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.