ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ‘ಮಗಳು ಜಾನಕಿʼ ನಟಿ ಸಾವು
Team Udayavani, Jul 18, 2019, 10:46 AM IST
ಚಿತ್ರದುರ್ಗ: ಕಾರಿನ ಟೈರ್ ಸಿಡಿದು ಲಾರಿಗೆ ಡಿಕ್ಕಿ ಹೊಡೆದು ಐವರ ಸಾವಿಗೆ ಕಾರಣವಾಗಿದ್ದ ಅಪಘಾತದಲ್ಲಿ ಕಿರುತೆರೆಯ ಪ್ರಸಿದ್ಧ ಧಾರವಾಹಿ ‘ಮಗಳು ಜಾನಕಿʼಯ ನಟಿ ಶೋಭಾ ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಹೊರವಲಯದ ಕುಂಚಿಗನಾಳ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಧವಾರ ಸಂಜೆ ಈ ಭೀಕರ ಅಪಘಾತ ನಡೆದಿತ್ತು. ಬೆಂಗಳೂರಿನಿಂದ ಬಾಗಲಕೋಟೆಗೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದವರ ಕಾರಿನ ಟೈರ್ ಸಿಡಿದು ಲಾರಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿತ್ತು . ಈ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿ ಐವರು ಮೃತರಾಗಿ, ಮೂವರಿಗೆ ಗಂಭಿರ ಗಾಯಗೊಂಡಿದ್ದರು.
‘ಮಗಳು ಜಾನಕಿʼ ಧಾರವಾಹಿಯ ನಿರ್ದೇಶಕ ಸೀತಾರಾಮ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, “ಮಗಳು ಜಾನಕಿಯಲ್ಲಿ ಮಂಗಳಕ್ಕನ ಪಾತ್ರ ಮಾಡುತ್ತಿದ್ದ ಶೋಭಾ, ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಸದಾ ನಗುಮುಖದ, ಅಪಾರ ಪ್ರತಿಭೆಯ, ಸೌಜನ್ಯ ತುಂಬಿದ ಮಂಗಳಕ್ಕನ ಅನಿರೀಕ್ಷಿತ ಸಾವು ನನ್ನನ್ನು ದಿಗ್ಬ್ರಮೆಗೊಳಿಸಿದೆ. ತಂಡದ ಪರವಾಗಿ ತೀವ್ರ ಸಂತಾಪಗಳು” ಎಂದು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ