ಪೊಲೀಸರಿಗೆ ಕಡ್ಡಾಯವಾಗಿ ತಪಾಸಣೆ ನಡೆಸಿ: ಬೊಮ್ಮಾಯಿ
Team Udayavani, May 17, 2020, 7:45 AM IST
ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಕಂಟೇನ್ಮೆಂಟ್ ವಲಯ, ಚೆಕ್ಪೋಸ್ಟ್ ಹಾಗೂ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಕಡ್ಡಾಯವಾಗಿ ಕೋವಿಡ್ 19 ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅಲ್ಲದೆ ಕೊರೊನಾ ಸೋಂಕಿನಿಂದ ಪೊಲೀಸ್ ಸಿಬ್ಬಂದಿ ಮೃತಪಟ್ಟರೆ 30 ಲಕ್ಷ ವಿಮೆ ನೀಡುವುದು.
ಕೊರೊನಾ ನಿಯಂತ್ರಣ ಕರ್ತವ್ಯದ ಸಂದರ್ಭದಲ್ಲಿ ಬೇರೆ ಯಾವುದೇ ರೀತಿಯ ಅಪಘಾತದಿಂದ ಮರಣ ಹೊಂದಿದರೆ ಅವರಿಗೂ ವಿಮೆ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಪೊಲೀಸರಿಗೂ ಪಿಪಿಇ ಕಿಟ್ ವಿತರಿಸುವುದು. ಕಂಟೇನ್ಮೆಂಟ್ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ವಿಶ್ರಾಂತಿ ಒದಗಿಸಲು ಶಿಪ್ಟ್ ಮೇಲೆ ಕರ್ತವ್ಯ ನಿರ್ವಹಿಸಲು ಕ್ರಮ ಕೈಗೊಳ್ಳುವುದು.
ಕಂಟೇನ್ಮೆಂಟ್ ವಲಯ, ಚೆಕ್ ಪೋಸ್ಟ್, ಕೊರೊನಾ ನಿಯಂತ್ರಣ ಆಸ್ಪತ್ರೆಗಳ ಬಳಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಊಟ, ಉಪಾಹಾರ, ನೀರು ಸೇರಿ ಅಗತ್ಯ ಸೌಕರ್ಯಗಳು ದೊರೆಯುಂತೆ ನೋಡಿಕೊಂಡು ಹಿರಿಯ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮನೋಬಲ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ