ಕಾರ್ಪೊರೇಟರ್‌ಗಳಿಗೆ ಕೋವಿಡ್-19 ತಂದ ತಲೆನೋವು!

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸ ಆಡಳಿತ

Team Udayavani, Apr 23, 2020, 5:38 AM IST

ಕಾರ್ಪೊರೇಟರ್‌ಗಳಿಗೆ ಕೋವಿಡ್-19 ತಂದ ತಲೆನೋವು!

ವಿಶೇಷ ವರದಿ-ಮಂಗಳೂರು: ಮಂಗಳೂರು ಪಾಲಿಕೆಗೆ ಜನಪ್ರತಿನಿಧಿಗಳ ಹೊಸ ಆಡಳಿತ ವ್ಯವಸ್ಥೆ ಅಧಿಕಾರಕ್ಕೆ ಬಂದ ಸಮಯದಲ್ಲಿಯೇ ಎದುರಾದ ಕೋವಿಡ್-19 ಮಹಾಮಾರಿ ಇದೀಗ ಮನಪಾಕ್ಕೆ ಮತ್ತಷ್ಟು ಸವಾಲೊಡ್ಡಿದೆ.

ಹೊಸ ಪಾಲಿಕೆ ಪರಿಷತ್‌ ಅಧಿಕಾರಕ್ಕೆ ಬಂದು ಎ. 28ಕ್ಕೆ 2 ತಿಂಗಳು ಆಗುತ್ತಿದ್ದು, ನಗರದಲ್ಲಿ ಮಹತ್ವದ ಯೋಜನೆಗಳಿಗೆ ಇದೀಗ ಸಾಕ್ಷಿಯಾಗಬೇಕಿತ್ತು. ಹೊಸದಾಗಿ ಆಯ್ಕೆಯಾದ ಕಾರ್ಪೊರೇಟರ್‌ಗಳು ಹುರುಪಿನಿಂದ ಕೆಲಸ ಮಾಡುವ ಸಂದರ್ಭದಲ್ಲಿ ಎದುರಾದ ಕೋವಿಡ್-19 ಅವರಿಗೆ ತಲೆನೋವು ತಂದಿದೆ. ಕಾರ್ಪೊರೇಟರ್‌ಗಳು ತಮ್ಮ ವಾರ್ಡ್‌ನಲ್ಲಿ ಲಾಕ್‌ಡೌನ್‌ನಿಂದ ಸಮಸ್ಯೆಗೊಳಗಾದ ಕುಟುಂಬಗಳಿಗೆ ನೆರವಾಗುವುದರಲ್ಲಿ ವ್ಯಸ್ತರಾಗಿದ್ದಾರೆ.

ಇನ್ನೂ ನಡೆದಿಲ್ಲ ಮೊದಲ ಸಭೆ!
2018ರ ಮಾ. 8ರಂದು ಮಂಗಳೂರು ಪಾಲಿಕೆಯ ಕಾಂಗ್ರೆಸ್‌ ಆಡಳಿತದಲ್ಲಿ 31ನೇ ಮೇಯರ್‌ ಆಗಿ ಭಾಸ್ಕರ್‌ ಎಂ., ಉಪಮೇಯರ್‌ ಆಗಿ ಮಹಮ್ಮದ್‌ ಕುಂಜತ್ತಬೈಲ್‌ ಆಯ್ಕೆಯಾಗಿದ್ದರು. ಅವರ ಅಧಿಕಾರಾವಧಿ 2019ರ ಮಾ. 8ರ ವರೆಗೆ ಇತ್ತು. ಆ ವೇಳೆಗೆ ಪಾಲಿಕೆ ಚುನಾವಣೆ ನಡೆಯ ಬೇಕಿತ್ತಾದರೂ ವಾರ್ಡ್‌ ಮೀಸಲಾತಿ ಬಗ್ಗೆ ನ್ಯಾಯಾಲಯದಲ್ಲಿ ದೂರು ದಾಖಲಾದ ಕಾರಣದಿಂದ ಚುನಾ ವಣೆ ತಡವಾಯಿತು. ಹೀಗಾಗಿ ಆಡಳಿತಾಧಿಕಾರಿಗಳ ನೇಮಕ ವಾಗಿತ್ತು.

ಕೊನೆಗೆ ನ. 12ರಂದು ಮಂಗಳೂರು ಪಾಲಿಕೆಯ ಚುನಾವಣೆ ನಡೆದು, ನ. 13ರಂದು ಫಲಿತಾಂಶ ಪ್ರಕಟಗೊಂಡಿತ್ತು. ಬಿಜೆಪಿ 44, ಕಾಂಗ್ರೆಸ್‌ 14, ಎಸ್‌ಡಿಪಿಐ 2 ಸ್ಥಾನ ಪಡೆದಿತ್ತು. ಆದರೆ ಈ ವೇಳೆ ಮೇಯರ್‌-ಉಪಮೇಯರ್‌ ಮೀಸಲಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ಮೂರು ತಿಂಗಳುಗಳ ಅನಂತರ (ಫೆ. 28) ಮೇಯರ್‌-ಉಪಮೇಯರ್‌ ಆಯ್ಕೆ ನಡೆದಿತ್ತು. ಬಳಿಕ ಸ್ಥಾಯೀ ಸಮಿತಿಗಳಿಗೆ ಸದಸ್ಯರ ಆಯ್ಕೆ, ನೂತನ ಸದಸ್ಯರ ಪ್ರಮಾಣ ವಚನ ನಡೆಯಿತು. ಮುಂದಿನ ತಿಂಗಳು (ಮಾರ್ಚ್‌) ಪಾಲಿಕೆ ಪರಿಷತ್‌ ಸಭೆ ನಡೆಯಬೇಕಿತ್ತು. ಜನಪ್ರತಿನಿಧಿಗಳ ಆಡಳಿತ ಆರಂಭವಾದ ಬಳಿಕ ನಡೆಯಬೇಕಾದ ಮೊದಲ ಸಾಮಾನ್ಯ ಸಭೆ ಇದಾಗಿತ್ತು. ಆದರೆ ಕೋವಿಡ್-19 ಕಾರಣದಿಂದ ಈ ಸಭೆಗೂ ವಿಘ್ನ ಎದುರಾಯಿತು. ಈ ತಿಂಗಳು ಕೂಡ ಸಭೆ ಅನುಮಾನವಾಗಿದೆ.

ಪರಿಷತ್‌ ಸಭೆ ಇಲ್ಲ-ಬಜೆಟ್‌ ಮಂಡನೆ
ಮಂಗಳೂರು ಮಹಾನಗರ ಪಾಲಿಕೆಯ ಈ ವರ್ಷದ ಬಜೆಟ್‌ ಅನ್ನು ಜಿಲ್ಲಾಧಿಕಾರಿ ಮಂಡಿಸಿದ್ದಾರೆ. ಪಾಲಿಕೆಯಲ್ಲಿ ಆಡಳಿತಾತ್ಮಕವಾಗಿ ಕಾರ್ಯನಿರ್ವಹಣೆಗೆ ಯಾವುದೇ ಸಮಸ್ಯೆ ಇಲ್ಲ. ಲಾಕ್‌ಡೌನ್‌ ಜಾರಿಯಲ್ಲಿರುವ ಕಾರಣದಿಂದ ಪಾಲಿಕೆ ಪರಿಷತ್‌ ಸಭೆ ನಡೆಸುವಂತಿಲ್ಲ. ಮಳೆಗಾಲ ಎದುರಿಸಲು ಹಾಗೂ ಡೆಂಗ್ಯೂ, ಮಲೇರಿಯ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ.
 - ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಆಯುಕ್ತರು, ಮನಪಾ

ಮಳೆ, ಡೆಂಗ್ಯೂ, ಮಲೇರಿಯಾ ಆತಂಕ!
ಸದ್ಯ ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಜನಪ್ರತಿನಿಧಿಗಳು ಈ ಕುರಿತ ಕೆಲಸಗಳಲ್ಲಿಯೇ ಇದ್ದಾರೆ. ಮಂಗಳೂರಿನಲ್ಲಿ ಪ್ರತೀ ಮಳೆಗಾಲದ ವರ್ಷದ ಸಮಸ್ಯೆಗಳಾಗಿರುವ ಡೆಂಗ್ಯೂ, ಮಲೇರಿಯಾ ಇತ್ಯಾದಿಗಳ ನಿರ್ವಹಣೆ ಬಗ್ಗೆ ಹೆಚ್ಚಿನ ಒತ್ತು ನೀಡಿದಂತಿಲ್ಲ. ಜನಪ್ರತಿನಿಧಿಗಳು-ಅಧಿಕಾರಿಗಳ ಸಭೆ ನಡೆದಿದೆಯಾದರೂ ಯಾರೂ ಕೂಡ ಈ ಬಗ್ಗೆ ಗಂಭೀರವಾಗಿ ಕಾರ್ಯಯೋಜನೆ ರೂಪಿಸಿದಂತಿಲ್ಲ. ಒಂದು ವೇಳೆ ಈ ವಿಚಾರದಲ್ಲಿ ನಿರ್ಲಕ್ಷé ತೋರಿದರೆ ಮುಂದೆ ಭಾರೀ ಬೆಲೆ ತೆರಬೇಕಾಗಬಹುದಾದ ಅಪಾಯವೂ ಇದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.