ಮಂಗಳೂರು: ಮಹಿಳೆಯ ಚಿನ್ನದ ಸರ ಕಸಿದು ಅಪರಿಚಿತ ಪರಾರಿ
Team Udayavani, Feb 9, 2023, 2:17 PM IST
ಮಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ನಗರದ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.
ಮಹಿಳೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ.
ಫೆ.9 ರ ಗುರುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಮಹಿಳೆ ವೈದ್ಯರಲ್ಲಿಗೆ ಹೋಗಿ ಮನೆಗೆ ವಾಪಾಸಾಗುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಕುತ್ತಿಗೆಗೆ ಕೈಹಾಕಿ ಸರ ಕಸಿದು ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಬರ್ಕೆ ಠಾಣಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಸರ ಸುಮಾರು 40 ಗ್ರಾಂ ತೂಕ ವಿತ್ತು ಎಂದು ತಿಳಿದು ಬಂದಿದೆ. ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು