
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ
Team Udayavani, Mar 23, 2023, 12:56 PM IST

ಉಡುಪಿ: ಮಣಿಪಾಲದ ಅಪಾರ್ಟ್ಮೆಂಟ್ ವೊಂದರ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.
ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲಾಗಿತ್ತು. ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ
