ಮಣಿಪಾಲದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಢಿಕ್ಕಿ: ಮಹಿಳೆ ಸಾವು
Team Udayavani, Jun 23, 2020, 3:21 PM IST
ಉಡುಪಿ: ಕಾರು ಢಿಕ್ಕಿ ಹೊಡೆದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ಪದ್ಮಾ (37) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಿಗ್ಗೆ ಮಹಿಳೆ ಗಾರ್ಮೆಂಟ್ಸ್ ಕೆಲಸಕ್ಕೆ ಹೊರಟಿದ್ದರು. ಕೆಎಂಸಿ ಆಸ್ಪತ್ರೆ ಮುಂಭಾಗ ರಸ್ತೆ ದಾಟುವ ವೇಳೆಗೆ ಪರ್ಕಳ ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ