ಕಾಶ್ಮೀರ್ ಫೈಲ್ ಸಿನಿಮಾ ನೋಡಿದ ಮಂತ್ರಾಲಯ ಶ್ರೀ
Team Udayavani, Mar 20, 2022, 8:57 PM IST
ರಾಯಚೂರು: ದೇಶದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ದ ಕಾಶ್ಮೀರ್ ಫೈಲ್ ಸಿನಿಮಾವನ್ನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಚಿತ್ರಮಂದಿರದಲ್ಲಿ ವೀಕ್ಷಿಸುವ ಮೂಲಕ ಪ್ರೋತ್ಸಾಹಿಸಿದರು.
ಗಂಗಾವತಿಯ ಪೂರ್ಣಿಮಾ ಚಿತ್ರಮಂದಿರದಲ್ಲಿ ಭಕ್ತರೊಟ್ಟಿಗೆ ರವಿವಾರ ಸಿನಿಮಾ ನೋಡಿದರು. ಚಿತ್ರಮಂದಿರದಲ್ಲಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಗಂಗಾವತಿ ಸಮೀಪದ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಶ್ರೀ ಸುಧೀಂದ್ರ ತೀರ್ಥರ 400 ನೇ ಆರಾಧನೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪೂಜೆ ಬಳಿಕ ಭಕ್ತರ ಮನವಿ ಮೇರೆಗೆ ಸಿನಿಮಾ ವೀಕ್ಷಣೆ ಮಾಡಿದರು. ಈ ವೇಳೆ ಸ್ಥಳೀಯ ಸ್ವಾಮೀಜಿಗಳು ಅವರಿಗೆ ಸಾಥ್ ನೀಡಿದರು.
ಇದನ್ನೂ ಓದಿ : ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ