ವಿವಿಧೆಡೆ ಸಾಮೂಹಿಕ ಯೋಗ ಶಿಬಿರ

ಉದ್ಯಾನ, ಶಾಲೆ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಆಯೋಜನೆ ; ಎರಡು ವರ್ಷದ ನಂತರ ಯೋಗಾಯೋಗ

Team Udayavani, Jun 20, 2022, 10:29 AM IST

2

ಹುಬ್ಬಳ್ಳಿ: 8ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ವಿವಿಧ ಪ್ರದೇಶ, ಉದ್ಯಾನವನ, ಶಾಲೆ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳ ನಂತರ ಸಾಮೂಹಿಕ ಯೋಗ ಕಾರ್ಯಕ್ರಮಗಳು ನಡೆಯುತ್ತಿವೆ.

ಯೋಗಪಟು ಈರಣ್ಣ ಕಾಡಪ್ಪನವರ ಅವರು ಜೂ. 21ರಂದು ನಗರದ ವಿವಿಧ ಶಾಲೆ-ಕಾಲೇಜು, ಸಂಘಗಳಲ್ಲಿ ಸಾಮೂಹಿಕ ಯೋಗ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 6 ಗಂಟೆಗೆ ಅಶೋಕನಗರದ ಕ್ರಿಕೆಟ್‌ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದು, ಸುಮಾರು 150 ಜನರು ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮಯೂರ ಎಸ್ಟೇಟ್‌ನ ಸಿಬಿಎಸ್‌ಸಿ ಚಿನ್ಮಯ ಸ್ಕೂಲ್‌ ಆವರಣದಲ್ಲಿ ಹಮ್ಮಿಕೊಂಡಿದ್ದು, ಅಂದಾಜು 400 ಜನರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಎಸ್‌ಜೆಎಂವಿಎಸ್‌ ನಿಂದ ಮೂರುಸಾವಿರ ಮಠದ ಗಂಗಾಧರ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದು, ಅಂದಾಜು 500 ಜನರು ಭಾಗವಹಿಸಲಿದ್ದಾರೆ.

ಬೆಳಗ್ಗೆ 11:30 ಗಂಟೆಗೆ ಹೊಸೂರು ಗಾಳಿ ದುರ್ಗಮ್ಮ ದೇವಸ್ಥಾನ ಬಳಿಯ ಪಾಲಿಕೆ ವಲಯ ಕಚೇರಿ ಕಟ್ಟಡ ಮೇಲ್ಭಾಗದಲ್ಲಿರುವ ಹಿರಿಯ ನಾಗರಿಕರ ವೇದಿಕೆ ಕಚೇರಿಯಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಇದರಲ್ಲಿ 35-40 ಹಿರಿಯ ನಾಗರಿಕರು ಪಾಲ್ಗೊಳ್ಳಲಿದ್ದಾರೆ. ಕಾಡಪ್ಪನವರು ಕಳೆದ ಒಂದು ತಿಂಗಳಿನಿಂದ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರಿಗೆ ಯೋಗ ತರಬೇತಿ ಶಿಬಿರಗಳನ್ನು ನಡೆಸುತ್ತ ಬಂದಿದ್ದಾರೆ. ಜಿಮಖಾನಾ ಮೈದಾನ: ಕ್ಷಮತಾ ಹಾಗೂ ಧನ್ಯೋಸ್ಮಿ ಯೋಗ ಕೇಂದ್ರದಿಂದ ಜೂ. 21ರಂದು ಬೆಳಗ್ಗೆ 7 ಗಂಟೆಗೆ ದೇಶಪಾಂಡೆನಗರ ಜಿಮಖಾನಾ ಮೈದಾನದಲ್ಲಿ ಯೋಗ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುಮಾರು 500ಕ್ಕಿಂತ ಹೆಚ್ಚು ಜನರು ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಧನ್ಯೋಸ್ಮಿ ಯೋಗ ಕೇಂದ್ರ ಸಂಸ್ಥಾಪಕ ವಿನಾಯಕ ತಲಗೇರಿ ಯೋಗಾಸನ ತಿಳಿಸಿಕೊಡಲಿದ್ದಾರೆ. ಯೋಗ ದಿನಾಚರಣೆ ಅಂಗವಾಗಿ ನಗರದ ವಿವಿಧ 10 ಪ್ರದೇಶಗಳಲ್ಲಿ ಯೋಗ ಉಚಿತ ಶಿಬಿರ ಆಯೋಜಿಸಲಾಗಿತ್ತು. ಮೊದಲು ಯೋಗಾಭ್ಯಾಸಕ್ಕೆ ಮಧ್ಯವಯಸ್ಕರು, ವಯೋವೃದ್ಧರು ಬರುತ್ತಿದ್ದರು. ಈ ಬಾರಿ ಯುವಕರು, ಸಾಫ್ಟ್‌ವೇರ್‌ ಎಂಜಿನಿಯರ್, ವಿದ್ಯಾರ್ಥಿಗಳು ಆಸಕ್ತಿ ತೋರಿ ಕಲಿಯುತ್ತಿರುವುದು ವಿಶೇಷವೆಂದು ಯೋಗಗುರು ವಿನಾಯಕ ಹೇಳುತ್ತಾರೆ.

ತುಮಕೂರಿನ ಪತಂಜಲಿ ಯೋಗ ಶಿಕ್ಷಣ ಸಮಿತಿ ಇಂದಿರಾ ಗಾಜಿನಮನೆಯಲ್ಲಿ ಬೆಳಗ್ಗೆ 6:15 ಗಂಟೆಗೆ ಸಾಮೂಹಿಕ ಯೋಗ ಕಾರ್ಯಕ್ರಮ ಆಯೋಜಿಸಿದ್ದು, ಅಂದಾಜು 1000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಪ್ರಸನ್ನ ದೀಕ್ಷಿತ ಹೇಳಿದರು.

ಬಿಜೆಪಿಯಿಂದ ಸಿದ್ಧಾರೂಢ ಮಠದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುಮಾರು 500ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.