ಈಸ್ಟರ್‌ ಆಚರಣೆ ಹೊಸ ಭರವಸೆ ಮೂಡಿಸಲಿ

ಉಡುಪಿ ಬಿಷಪ್‌ ಅವರಿಂದ ಈಸ್ಟರ್‌ ಸಂದೇಶ

Team Udayavani, Apr 12, 2020, 12:35 PM IST

ಈಸ್ಟರ್‌ ಆಚರಣೆ ಹೊಸ ಭರವಸೆ ಮೂಡಿಸಲಿ

ಉಡುಪಿ: ಪ್ರಾರ್ಥನೆ, ಉಪವಾಸ, ದಾನ-ಧರ್ಮಗಳನ್ನೊಳಗೊಂಡ ನಲ್ವತ್ತು ದಿನಗಳ ತಪಸ್ಸು ಕಾಲದ ವ್ರತವು ಕಳೆದು ಯೇಸು ಕ್ರಿಸ್ತರ ಪುನರುತ್ಥಾನದ ಈಸ್ಟರ್‌ ಹಬ್ಬ ಮತ್ತೂಮ್ಮೆ ಬಂದಿದೆ. ಎರಡು ಸಾವಿರ ವರ್ಷಗಳ ಹಿಂದೆ ಯೇಸುಕ್ರಿಸ್ತರು ಅನುಭವಿಸಿದ ಕಷ್ಟ, ಯಾತನೆ, ಶಿಲುಬೆಯ ಮರಣ ಹಾಗೂ ಇವೆಲ್ಲದರ ಶಿಖರವಾದ ಪುನರುತ್ಥಾನವನ್ನು ಭಕ್ತಿಂದ ಸ್ಮರಿಸಿ, ಆ ಚಾರಿತ್ರಿಕ ಘಟನೆಗಳನ್ನು ಪುನರ್ಜಿಸಿ, ದೈನಂದಿನ ಜೀವನದಲ್ಲಿ ಶ್ವಾಸವರ್ಧನೆಯನ್ನು ಮಾಡುವ ಸಂಭ್ರಮವಿದು.

ಈಜಿಪ್ತಿನ ದಾಸ್ಯತ್ವದಲ್ಲಿ ಬಳಲುತ್ತಿದ್ದ ತನ್ನ ಜನರನ್ನು ದೇವರು ಬಿಡಿಸಿ ಅವರನ್ನು ಹೊಸ ನಾಡಿಗೆ ಹಾಗೂ ಹೊಸ ಬದುಕಿನೆಡೆಗೆ ಕರೆದೊಯ್ದ ಚಾರಿತ್ರಿಕ ನೆನಪಿನ ಆಚರಣೆಯೂ ಈ ಹಬ್ಬದೊಂದಿಗೆ ಸೇರಿಕೊಂಡಿದೆ. ಹೀಗಾಗಿ ಈಸ್ಟರ್‌ ಯೇಸುಕ್ರಿಸ್ತರು ಮರಣದ ಮೇಲೆ ಜಯವನ್ನು ಸಾರಿದ ಅವರ ದೈವತ್ವದ ಪ್ರತಿಪಾದನೆ ಮಾತ್ರವಲ್ಲದೆ ಹೊಸ ಜೀವನ, ಹೊಸ ಸೃಷ್ಟಿ ಹಾಗೂ ಹೊಸ ಅನ್ವೇಷಣೆಯಿಂದ “ಮರಣವೇ ಜೀವನದ ಅಂತಿಮ ಅಲ್ಲ’ ಎಂಬುದನ್ನೂ ಸಾರುತ್ತದೆ.

ಇಡೀ ಮಾನವಕುಲ ಕೋವಿಡ್ 19 ಮಹಾಮಾರಿಯ ಸೋಂಕಿನ ಭೀತಿಯಿಂದ ನಲುಗಿರುವಾಗ ಬಂದಿರುವ ಈ ವರ್ಷದ ಈಸ್ಟರ್‌ ಹಬ್ಬ ಅಂಧಕಾರದ ಕಾರ್ಮೋಡಗಳ ಅಂಚಿನಲ್ಲಿ ಕಾಣಿಸುವ ಬೆಳ್ಳಿಯ ರೇಖೆಯಂತಿದೆ. ಕಷ್ಟ, ನೋವು, ರೋಗ, ಯಾತನೆಗಳು ಶಾಶ್ವತವಲ್ಲ. ಅವುಗಳಿಗೆ ಅಂತ್ಯವಿದೆ. ದೇವರು ನಮ್ಮನ್ನು ಸೋಲಲು ಸೃಷ್ಟಿಸಿಲ್ಲ; ಬದಲಾಗಿ ಕಷ್ಟಗಳ ಮೇಲೆ ಜಯಶಾಲಿಗಳಾಗಲು ಸೃಷ್ಟಿಸಿದ್ದಾರೆ. ಆದ್ದರಿಂದ ಈ ಕಠಿನ ಪರಿಸ್ಥಿತಿಯಲ್ಲಿ ಸಜ್ಜನ ಯೋಬನ ಮಾತುಗಳು ನಮಗೆ ಪ್ರೇರಣೆಯಾಗಲಿ: ದೇವರಿಂದ ನಾವು ಸುಖಪಡೆಯಬಹುದು,
ದುಃಖವನ್ನು ಮಾತ್ರ ಪಡೆಯಬಾರದೋ?

ಈ ಈಸ್ಟರ್‌ ಹಬ್ಬದಂದು ಈ ಸೋಂಕಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವಿಜ್ಞಾನಿಗಳು, ವೈದ್ಯರು ಹಾಗೂ ವೈದ್ಯಕೀಯ ಸಿಬಂದಿಗಳಿಗಾಗಿ; ಜನತೆಯ ಅಸುರಕ್ಷತೆಯನ್ನು ದೂರಗೊಳಿಸಿ ವಿಶ್ವಾಸ ತುಂಬುತ್ತಿರುವ ಎಲ್ಲ ಅಧಿಕಾರಿಗಳಿಗಾಗಿ; ಹಸಿದು ಕಂಗೆಟ್ಟ ನಿರಾಶ್ರಿತ ಜನತೆ ಹಾಗೂ ಅಶಕ್ತರಿಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸಹಾಯ ಮಾಡುತ್ತಿರುವ ಎಲ್ಲ ಸುಮನಸ್ಸಿನ ಜನರಿಗಾಗಿ ಹಾಗೂ ಇವುಗಳನ್ನೆಲ್ಲ ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿರುವ ಜನ ಪ್ರತಿನಿಧಿಗಳಿಗಾಗಿ ನಮ್ಮ ವಿಶೇಷ ಪ್ರಾರ್ಥನೆಗಳು ಸಲ್ಲಲಿ. ಮರಣದ ಮೇಲೆ ಜಯಶಾಲಿಯಾದ ಪ್ರಭು ಯೇಸುಕ್ರಿಸ್ತರು ಎಲ್ಲರ ಮನೆ ಮನಗಳಲ್ಲಿ ನವಜೀವನದ ಭರವಸೆಯನ್ನು ಮೂಡಿಸಲಿ ಎಂದು ಉಡುಪಿಯ ಧರ್ಮಾಧ್ಯಕ್ಷರಾದ ಜೆರಾಲ್ಡ್‌ ಲೋಬೋ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.