ಸಂಪುಟ ಸಮಿತಿಗೆ ಎಂಬಿಪಿ ಅಧ್ಯಕ್ಷ
Team Udayavani, Jun 27, 2019, 5:16 AM IST
ಬೆಂಗಳೂರು: ಜಿಂದಾಲ್ಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಗೃಹ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಸಚಿವರಾದ ಬಂಡೆಪ್ಪ ಕಾಶೆಂಪೂರ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಕುರಿತು ಬುಧವಾರ ಅಧಿಕೃತ ಆದೇಶ ಪ್ರಕಟಣೆ ಹೊರಡಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 3,667,31 ಎಕರೆ ಭೂಮಿಯನ್ನು ಜೆ.ಎಸ್.ಡಬ್ಲ್ಯೂ ಸ್ಟೀಲ್ ಸಂಸ್ಥೆಯ ಪರವಾಗಿ ಶುದ್ಧ ಕ್ರಯ ಪತ್ರಗಳನ್ನು ಜಾರಿಗೊಳಿಸುವ ಪ್ರಸ್ತಾವನೆ ಕುರಿತು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಜಿಂದಾಲ್ ಕುರಿತ ಸಂಪುಟ ಉಪ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಜವಾಬ್ದಾರಿ ನೀಡಿದರೆ ನಿರ್ವಹಿ ಸುತ್ತೇನೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್