Theft Case; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಕುಂದಾಪುರ ಪೊಲೀಸರು

8 ತಿಂಗಳ ಬಳಿಕ ಮುಂಬಯಿಯಲ್ಲಿ ಇಬ್ಬರ ಬಂಧನ ;10 ಲ.ರೂ. ಮೌಲ್ಯದ ಚಿನ್ನಾಭರಣ ವಶ

Team Udayavani, Mar 4, 2024, 12:58 AM IST

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಕುಂದಾಪುರ ಪೊಲೀಸರು

ಕುಂದಾಪುರ:ಸುಮಾರು 8 ತಿಂಗಳ ಹಿಂದೆ ಚಿನ್ನದ ರಖಂ ವ್ಯಾಪಾರಿ ಕುಂದಾಪುರದ ಲಾಡ್ಜ್‌ನಲ್ಲಿ ತಂಗಿದ್ದ ವೇಳೆ ಅವರಲ್ಲಿದ್ದ 22.56 ಲಕ್ಷ ರೂ. ಮೌಲ್ಯದ 420 ಗ್ರಾಂ. ತೂಕದ ಚಿನ್ನಾಭರಣ ಕಳವು ಮಾಡಿದ ಪ್ರಕರಣ ವನ್ನು ಭೇದಿಸುವಲ್ಲಿ ಕುಂದಾಪುರ ಪೊಲೀಸರು ಸಫ‌ಲ ರಾಗಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಮುಂಬಯಿಯಲ್ಲಿ ಬಂಧಿಸಿದ್ದು, ಅವರಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ರಾಜಸ್ಥಾನ ಮೂಲದ ರಾಮ್‌ ರಾಯ್‌ (21) ಹಾಗೂ ಪ್ರವೀಣ್‌ ಕುಮಾರ್‌ (25) ಬಂಧಿತರು. ಬಂಧಿತರಿಂದ 10 ಲಕ್ಷ ರೂ. ಮೌಲ್ಯದ 175 ಗ್ರಾಂ. ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಹಿನ್ನೆಲೆ
ಮೊಹಮ್ಮದ್‌ ಶಾಹಬುದ್ದಿನ್‌ ಮಾಲಕತ್ವದ ಹಾಜಿ ಗೋಲ್ಡ್‌ ಆ್ಯಂಡ್‌ ಡೈಮಂಡ್‌ ಜುವೆಲರಿಯ ಮಾರ್ಕೆ ಟಿಂಗ್‌ ಎಕ್ಸಿಕ್ಯೂಟಿವ್‌ ರಮೇಶ್‌ ಕುಮಾರ್‌ ಅವರು ಚಿನ್ನಾ ಭರಣ ಮಾರಾಟಕ್ಕೆಂದು 2023ರ ಜೂ. 10ರಂದು ಕುಂದಾಪುರ ಕಡೆಗೆ ಬಂದಿದ್ದರು. ಉಪ್ಪುಂದಕ್ಕೆ ತೆರಳಿ, ಅಲ್ಲಿಂದ ಸಂಜೆ ವಾಪಸಾಗಿ, ರಾತ್ರಿ ಯಾಯಿ ತೆಂದು ಕುಂದಾಪುರದ ಖಾಸಗಿ ಹೊಟೇಲೊಂದರಲ್ಲಿ ಸ್ನೇಹಿತ ರಾಜಸ್ಥಾನ ಮೂಲದ ರಾಮ್‌ ಎಂಬಾತನ ಜತೆ 421 ಗ್ರಾಂ. ತೂಕದ ಚಿನ್ನಾಭರಣವನ್ನು ಮಂಚದ ಕೆಳಗಿಟ್ಟು ಮಲಗಿದ್ದರು. ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಎದ್ದು ನೋಡಿದಾಗ ರಾಮ್‌ ನಾಪತ್ತೆಯಾಗಿದ್ದು, ಚಿನ್ನಾಭರಣದ ಬ್ಯಾಗ್‌ ಕೂಡ ಇರಲಿಲ್ಲ. ಹೊರಗಿನಿಂದ ಬಾಗಿಲು ಹಾಕಲಾಗಿತ್ತು.
ಚಿನ್ನದ ಸಾನಿಯಾ ಬಾಲಿ 43 ಜತೆ (52 ಗ್ರಾಂ.), ಚಿನ್ನದ ಮೂಗುತಿ 153 ಫೀಸ್‌ (61 ಗ್ರಾಂ.), ಚಿನ್ನದ ಜೆ ಬಾಲಿ 44 ಫೀಸ್‌ (61 ಗ್ರಾಂ.), ಚಿನ್ನದ ಕಿವಿಯೋಲೆ-158 ಜತೆ (150 ಗ್ರಾಂ.), ಕಿವಿಯ ಚಿನ್ನದ ಟಾಪ್ಸ್‌ 60 ಜತೆ (81 ಗ್ರಾಂ.), 14 ಗ್ರಾಂ ಚಿನ್ನದ ಗಟ್ಟಿ ಸಹಿತ ಒಟ್ಟು 420 ಗ್ರಾಂ. ಚಿನ್ನಾಭರಣ ಕಳವಾಗಿತ್ತು.ಈ ಸಂಬಂಧ ಕುಂದಾಪುರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು.

8 ತಿಂಗಳಿನಿಂದ ನಿರಂತರ ಪ್ರಯತ್ನ
ಪ್ರಕರಣ ಸಂಬಂಧ 8 ತಿಂಗಳು ಗಳಿಂದ ಕಳ್ಳರನ್ನು ಪತ್ತೆಹಚ್ಚಲು ಕುಂದಾ ಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ನಿರ್ದೇ ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಯು.ಬಿ.ನಂದಕುಮಾರ್‌ ಮಾರ್ಗದರ್ಶನದಲ್ಲಿ ಎಸ್‌ಐಗಳಾದ ವಿನಯ ಎಂ. ಕೊರ್ಲಹಳ್ಳಿ, ಪ್ರಸಾದ ಕುಮಾರ್‌ ಕೆ., ಸಿಬಂದಿ ವರ್ಗದ ಸಂತೋಷ ಕುಮಾರ್‌, ಶ್ರೀಧರ್‌, ರಾಮ ಪೂಜಾರಿಯವರ ತಂಡ ನಿರಂತರ ಶ್ರಮಿಸಿದೆ. ತಾಂತ್ರಿಕ ಮಾಹಿತಿ ಮೂಲಕ ಆರೋಪಿಗಳು ಮುಂಬಯಿಯಲ್ಲಿರುವುದಾಗಿ ಪತ್ತೆ ಹಚ್ಚಿ, ಅವರಲ್ಲಿದ್ದ 10 ಲಕ್ಷ ರೂ. ಮೌಲ್ಯದ 175 ಗ್ರಾಂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.