Mock Result: ಪರಿಷ್ಕೃತ ಪಟ್ಟಿ ಪ್ರಕಟ
Team Udayavani, Aug 12, 2023, 11:04 PM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವೈದ್ಯಕೀಯ/ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಸೀಟು ಹಂಚಿಕೆಯ ಅಣಕು ಫಲಿತಾಂಶದ ಪರಿಷ್ಕೃತ ಪಟ್ಟಿಯನ್ನು ಶನಿವಾರ ರಾತ್ರಿ ಪ್ರಕಟಿಸಿದೆ. ಆ.11ರಂದು ಪ್ರಕಟಿಸಲಾದ ಅಣಕು ಫಲಿತಾಂಶ ಪಟ್ಟಿಯಲ್ಲಿ ಕೆಲವು ಅಭ್ಯರ್ಥಿಗಳ ಹೆಸರುಗಳು ತಾಂತ್ರಿಕ ಕಾರಣಗಳಿಂದ ಸೇರ್ಪಡೆಗೊಳ್ಳದ ಕಾರಣ ಸೀಟು ಹಂಚಿಕೆಯಲ್ಲಿ ಏರುಪೇರಾಗಿತ್ತು.
ಹೈದರಾಬಾದ್ ಕರ್ನಾಟಕ ಕೋಟಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಾಗಿ ಈ ತಾಂತ್ರಿಕ ದೋಷ ಕಂಡುಬಂದಿದೆ. ಅದನ್ನು ಸರಿಪಡಿಸಿ, ಫಲಿತಾಂಶ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.