ಪಣಜಿ ರಾಜ್ಯದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಬಸ್ ಆರಂಭ; ಬಸ್ ನಿಲ್ದಾಣ ಆಧುನೀಕರಣಕಕ್ಕೆ ಚಿಂತನೆ
Team Udayavani, Feb 25, 2023, 11:48 AM IST
ಪಣಜಿ: ಮುಂಬರುವ ಅವಧಿಯಲ್ಲಿ ಗೋವಾದಲ್ಲಿ ಸಾರಿಗೆ ಸೌಲಭ್ಯಗಳ ವಿವಿಧ ಯೋಜನೆಗಳ ಕುರಿತು ಗೋವಾ ಸಾರಿಗೆ ಸಚಿವ ಮಾವಿನ್ ಗುದಿನ್ಹೊ ಮಾಹಿತಿ ನೀಡಿ, ಇದರಿಂದ ಪ್ರವಾಸಿಗರಿಗೆ ಹಾಗೂ ನಾಗರಿಕರಿಗೆ ಅನುಕೂಲವಾಗಿದೆ ಎಂದರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಮಾನ ನಿಲ್ದಾಣಗಳಿಂದ ಬಸ್ ನಿಲ್ದಾಣಗಳವರೆಗಿನ ಯೋಜನೆಗಳನ್ನು ಒಳಗೊಂಡಿದೆ ಎಂದರು. ವಾಹನ ಮಾಲೀಕರ ಅನುಕೂಲಕ್ಕಾಗಿ ಗೋವಾ ವಿಮಾನ ನಿಲ್ದಾಣಗಳಲ್ಲಿ ಬಹು ಮಹಡಿ ಪಾರ್ಕಿಂಗ್ ಅಗತ್ಯ ಎಂದು ಹೇಳಿದರು.
ಬಹು ಮಹಡಿ ಪಾರ್ಕಿಂಗ್ ಹೆಚ್ಚಿನ ವಾಹನಗಳಿಗೆ ನಿಲುಗಡೆಗೆ ಅವಕಾಶ ಕಲ್ಪಿಸುತ್ತದೆ. ನಾವು ಮೇಲ್ಸೇತುವೆ ನಿರ್ಮಿಸುತ್ತಿದ್ದೇವೆ. ಗೋವಾ ವಿಮಾನ ನಿಲ್ದಾಣದ ಗ್ರೇಡ್ ಸೆಪರೇಟರ್ ನಿಂದ ವೆರ್ನಾ ಜಂಕ್ಷನ್‍ವರೆಗೆ ಫ್ಲೈ ಓವರ್ ಇರಲಿದ್ದು, ಅಂದಾಜು 650 ಕೋಟಿ ರೂ. ವೆಚ್ಛದಲ್ಲಿ ಈ ಯೋಜನೆ ರೂಪಿಸಲಾಗಿದೆ ಎಂದರು.
ಸೋಮವಾರ ಈ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದೇನೆ. ಇದಲ್ಲದೆ ಗೋವಾ ರಾಜ್ಯದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಬಸ್‍ಗಳನ್ನು ಪ್ರಾರಂಭಿಸಲಾಗುವುದು ಎಂದ ಅವರು ಎಲ್ಲಾ ಬಸ್ ನಿಲ್ದಾಣಗಳನ್ನು ಕೂಡ ಆಧುನೀಕರಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ