30 ವರ್ಷವಾದವರಿಗೆ ಬಾಯಿ, ಸ್ತನ, ಗರ್ಭಕಂಠ ಕ್ಯಾನ್ಸರ್ ತಪಾಸಣೆ ಕಡ್ಡಾಯ
Team Udayavani, Mar 15, 2022, 6:20 AM IST
ಬೆಂಗಳೂರು: ಕ್ಯಾನ್ಸರ್ ಸೇರಿದಂತೆ ಅಸಾಂಕ್ರಾಮಿಕ ರೋಗಗಳ ಪ್ರಮಾಣ 2020-25ರ ಅವಧಿಯಲ್ಲಿ ಶೇ. 11ಕ್ಕೆ ಏರಿಕೆಯಾಗಲಿದ್ದು, ಅದಕ್ಕಾಗಿ 30 ವರ್ಷವಾದ ಪುರುಷರು ಮತ್ತು ಮಹಿಳೆಯರು ಕನಿಷ್ಠ ಪ್ರತೀ ಐದು ವರ್ಷಕ್ಕೊಮ್ಮೆ ಬಾಯಿ, ಸ್ತನ ಹಾಗೂ ಗರ್ಭಕಂಠದ ತಪಾಸಣೆ ಕಡ್ಡಾಯವಾಗಿ ಮಾಡಿಸಿಕೊಳ್ಳಲು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾವಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ.
2020-25ರ ವೇಳೆ ಕ್ಯಾನ್ಸರ್ ಸೇರಿದಂತೆ ಅಸಾಂಕ್ರಾಮಿಕ ರೋಗಳ ಪ್ರಮಾಣ ಶೇ. 11ಕ್ಕೆ ಏರಲಿದೆ ಎನ್ನುವ ವರದಿ ಕಳವಳಕಾರಿಯಾಗಿದೆ ಎಂದರು. ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದಲ್ಲಿ 6,500 ಹೆಲ್ತ್ ಆ್ಯಂಡ್ ವೆಲ್‌ನೆಸ್ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದರು.